GST ಬಗ್ಗೆ ಪ್ರಶ್ನಿಸಿದ ಖ್ಯಾತ ಉದ್ಯಮಿಯನ್ನು ಕ್ಷಮೆ ಕೇಳುವಂತೆ ಮಾಡಿದ ನಿರ್ಮಲಾ ಸೀತಾರಾಮನ್; ವಿಡಿಯೋ ವೈರಲ್

Date:

ಜಿಎಸ್‌ಟಿ ಬಗೆಗಿನ ಸಂಕೀರ್ಣತೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅನ್ನಪೂರ್ಣ ಗ್ರೂಪ್ ಅಧ್ಯಕ್ಷ ಶ್ರೀನಿವಾಸನ್ ಪ್ರಶ್ನಿಸಿದ್ದಾರೆ. ಬಳಿಕ, ತಮ್ಮ ಪ್ರಶ್ನೆಯ ಕಾರಣಕ್ಕಾಗಿ ಕ್ಷಮೆ ಕೇಳಿದ್ದಾರೆ. ಅವರು ಪ್ರಶ್ನಿಸಿ, ಕ್ಷಮೆ ಕೇಳಿದ ಘಟನೆಯ ವಿಡಿಯೋ ವೈರಲ್ ಆಗಿದ್ದು, ನಿರ್ಮಲಾ ಸೀತಾರಾಮನ್ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ತಮಿಳುನಾಡಿನ ಕೊಯಮತ್ತೂರಿನಲ್ಲಿ ಪ್ರಮುಖ ಉದ್ಯಮಿಗಳೊಂದಿಗೆ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾವಹಿಸಿದ್ದರು. ಸಭೆಯಲ್ಲಿನ ಚರ್ಚೆಯ ವೇಳೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಕೀರ್ಣತೆಗಳ ಬಗ್ಗೆ ಶ್ರೀನಿವಾಸನ್ ಅವರು ನಿರ್ಮಲಾ ಸೀತಾರಾಮನ್ ಅವರನ್ನು ಪ್ರಶ್ನಿಸಿದ್ದರು. ಜಿಎಸ್‌ಟಿ ಬಗ್ಗೆ ತಮ್ಮನ್ನು ಪ್ರಶ್ನಿಸಿದ್ದಕ್ಕೆ ಶ್ರೀನಿವಾಸನ್ ವಿರುದ್ಧ ಗುಡುಗಿದ ನಿರ್ಮಲಾ ಸೀತಾರಾಮನ್, ತಮ್ಮ ಬಳಿ ಶ್ರೀನಿವಾಸನ್ ಕ್ಷಮೆ ಕೇಳುವಂತೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಭೆಯಲ್ಲಿ ಮಾತನಾಡಿದ ಶ್ರೀನಿವಾಸನ್, ವಿವಿಧ ಜಿಎಸ್‌ಟಿ ದರಗಳಿಂದ ರೆಸ್ಟೋರೆಂಟ್‌ಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಮನ ಸೆಳೆದಿರು. “ಸಿಹಿತಿಂಡಿಗಳ ಮೇಲೆ 5% ಮತ್ತು ಕೆನೆ ತುಂಬಿದ ಪೇಸ್ಟ್ರಿಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತಿದೆ. ನಮ್ಮ ಬೇರಿಕೆಯಲ್ಲಿ ಖಾಲಿ ಬನ್ ಮಾರಿದರೆ 5% ಜಿಎಸ್‌ಟಿ. ಅದೇ ಬನ್‌ಗೆ ಕ್ರೀಮ್ ಹಾಕಿ ಕ್ರೀಮ್ ಬನ್ ಮಾರಿದರೆ 18% ಜಿಎಸ್‌ಟಿ. ಯಾಕೆ ಹೀಗೆ” ಎಂದು ಹಾಸ್ಯಾತ್ಮಕವಾಗಿ ವಿವರಿಸಿದರು.

ಆದರೆ, ಅವರ ಮಾತುಗಳಿಂದ ಸಿಡಿಮಿಡಿಗೊಂಡ ನಿರ್ಮಲಾ ಸೀತಾರಾಮನ್, ಶ್ರೀನಿವಾಸನ್ ಅವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು, ಸಭೆಯ ಮರುದಿನ ಶ್ರೀನಿವಾಸನ್ ಅವರು ತಾವು ಸಭೆಯಲ್ಲಿ ಎತ್ತಿದ ಪ್ರಶ್ನೆಯ ಕಾರಣಕ್ಕಾಗಿ ಕ್ಷಮೆ ಕೇಳಿದ್ದಾರೆ. ಕೊಠಡಿಯೊಂದರಲ್ಲಿ ಮೂರು ಜನರಿದ್ದು, ಅವರ ಪೈಕಿ ಶ್ರೀನಿವಾಸನ್ ಅವರು ನಿರ್ಮಲಾ ಸೀತಾರಾಮನ್ ಅವರಲ್ಲಿ ಎದ್ದು ನಿಂತು, ತಪ್ಪಾಗಿದೆ ಎಂದು ಕೈ ಮುಗಿದಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಕ್ಷಮೆ ಕೇಳುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋವನ್ನು ಹಂಚಿಕೊಂಡಿರುವ ನೆಟ್ಟಿಗರು, “ನಿರ್ಮಲಾ ಸೀತಾರಾಮನ್ ಅವರು ಕೊಯಮತ್ತೂರಿನ ಹೆಮ್ಮೆಯ ಅನ್ನಪೂರ್ಣ ಗ್ರೂಪ್ ಮುಖ್ಯಸ್ಥ ಶ್ರೀನಿವಾಸನ್ ಅವರನ್ನು ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ. ಶ್ರೀನಿವಾಸ್ ಮಾಡಿದ ಅಪರಾಧವೇನು? ಇದು ಬಿಜೆಪಿ ನಾಯಕರ ದುರಹಂಕಾರವನ್ನು ಬಯಲು ಮಾಡುತ್ತದೆ. ಮಾತ್ರವಲ್ಲದೆ, ತಮಿಳುನಾಡಿನ ಜನತೆಗೆ ಮಾಡಿದ ಅವಮಾನವೂ ಆಗಿದೆ. ಹೀಗಾಗಿಯೇ ಬಿಜೆಪಿ ಎಂದಿಗೂ ತಮಿಳುನಾಡನ್ನು ಗೆಲ್ಲುವುದಿಲ್ಲ. ಅಹಂಕಾರಕ್ಕೂ ಒಂದು ಮಿತಿ ಇರಬೇಕು” ಎಂದು ನೆಟ್ಟಿಗರು ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...