ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

Date:

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವಿಟ್ ಮಾಡಿರುವ ಬಿಜೆಪಿ, “ರಾಜ್ಯಗಳ ಅಭಿವೃದ್ಧಿಯಿಂದ ದೇಶ ಸುಭಿಕ್ಷ – ದೇಶದ ಪ್ರಗತಿಯಿಂದ ರಾಜ್ಯಗಳ ಸಮೃದ್ಧಿ, ಸಮನ್ವಯ ಸಹಕಾರಗಳ ಒತ್ತಾಸೆಯೊಂದಿಗೆ 2047ರ ವೇಳೆಗೆ ಭಾರತವನ್ನು ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಅಪೇಕ್ಷಿತರಿರುವ, ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರಾಗಿ, ರಾಷ್ಟ್ರಮಟ್ಟದಲ್ಲಿ ರಾಜ್ಯಕ್ಕೆ ಅವಮಾನ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುವ ಕರ್ನಾಟಕವನ್ನು ಬಹುಮುಖ್ಯ ಸಭೆಯೊಂದರಲ್ಲಿ ಪ್ರತಿನಿಧಿಸದೆ ಇರುವುದು ಕಾಂಗ್ರೆಸ್‌ನ ಕರ್ನಾಟಕ ವಿರೋಧಿ ನಡೆಯಾಗಿದೆ. ಇದು ಮೂರೂ ಹೊತ್ತು ರಾಜ್ಯ-ಕೇಂದ್ರದ ಸಂಬಂಧ, ಫೆಡರಲಿಸಂ ಮುಂತಾದ ಕಥೆ ಸೃಷ್ಟಿಸಿ ತುತ್ತೂರಿ ಊದುವ ಸಿಎಂ ಸಿದ್ದರಾಮಯ್ಯನವರ ಬೇಜವಾಬ್ದಾರಿತನ” ಎಂದು ಟೀಕಿಸಿದೆ.

“ಪ್ರತಿಯೊಂದರಲ್ಲಿಯೂ ರಾಜಕೀಯ ದ್ವೇಷ ಮತ್ತು ಸೇಡನ್ನು ತೀರಿಸಿಕೊಳ್ಳುವ ಮಾನಸೀಕತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ” ಎಂದು ಬಿಜೆಪಿ ಕಿಡಿಕಾರಿದೆ.

ಈ ಸುದ್ದಿ ಓದಿದ್ದೀರಾ? ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...