ಅರವಿಂದ್‌ ಕೇಜ್ರಿವಾಲ್‌ ಭೇಟಿಯಾದ ನಿತೀಶ್‌ ಕುಮಾರ್; ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಹೊರಾಡಲು ಕರೆ

Date:

  • ದೆಹಲಿ ಆಡಳಿತ ಸಂಬಂಧ ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಿದ ಕೇಜ್ರಿವಾಲ್
  • ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ಸೋಲಿಸುವಂತೆ ಕರೆ ನೀಡಿದ ವಿಪಕ್ಷಗಳು

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರು ಭಾನುವಾರ (ಮೇ 21) ಅರವಿಂದ್‌ ಕೇಜ್ರಿವಾಲ್‌ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

- Advertisement -

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರ ನಿವಾಸದಲ್ಲೇ ಸಭೆ ನಡೆದಿದೆ. ಈ ವೇಳೆ 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯನ್ನು ಮಣಿಸಲು ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನದ ಕುರಿತು ಸಭೆ ಕೇಂದ್ರಿತವಾಗಿತ್ತು. ಜೊತೆಗೆ ದೆಹಲಿ ಆಡಳಿತದ ಬಗ್ಗೆ ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ಕುರಿತೂ ಚರ್ಚೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅರವಿಂದ್‌ ಕೇಜ್ರಿವಾಲ್‌ ಅವರು ಸಭೆಯಲ್ಲಿ ದೆಹಲಿ ಆಡಳಿತ ಸೇವೆಗಳ ಮೇಲೆ ನಿಯಂತ್ರಣ ಸಾಧಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಎಲ್ಲ ಪ್ರತಿಪಕ್ಷಗಳು ವಿರೋಧಿಸಬೇಕಿದೆ ಎಂದು ಮನವಿ ಮಾಡಿರುವುದಾಗಿ ವರದಿಯಾಗಿದೆ.

ದೆಹಲಿ ಆಡಳಿತದ ಮೇಲೆ ನಿಯಂತ್ರಣ ಸಾಧಿಸದಂತೆ ಸುಪ್ರೀಂ ಕೋರ್ಟ್‌ ಈಗಾಗಲೇ ಆದೇಶ ನೀಡಿದೆ. ಆದರೆ ಕೇಂದ್ರ ಸರ್ಕಾರ ಈ ಆದೇಶದ ವಿರುದ್ಧ ಸುಗ್ರೀವಾಜ್ಞೆ ತಂದಿದೆ. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಅನ್ನು ಕೇಂದ್ರ ಸರ್ಕಾರ ಶುಕ್ರವಾರ (ಮೇ 19) ಹೊರಡಿಸಿದೆ.

ನಿತೀಶ್‌ ಹಾಗೂ ತೇಜಸ್ವಿ ಯಾದವ್ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, “ನಾನು ಇಂದು ನಿತೀಶ್‌ ಅವರೊಂದಿಗೆ ಸಭೆ ನಡೆಸಿದ್ದೇನೆ. ದೆಹಲಿ ಆಡಳಿತಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ಆದೇಶ ನಿರಾಕರಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರ ತಂದಿದೆ. ಆದರೆ ಈ ವಿಷಯದಲ್ಲಿ ನಾನು ದೆಹಲಿ ಜನರ ಪರ ನಿಲ್ಲುತ್ತೇನೆ. ನಿತೀಶ್‌ ಕುಮಾರ್‌ ಅವರು ನಮ್ಮ ಪರವಾಗಿ ಕೇಂದ್ರದ ವಿರುದ್ಧ ಹೋರಾಡಲು ಎಲ್ಲ ಪಕ್ಷಗಳನ್ನು ಒಂದುಗೂಡಿಸುತ್ತಿದ್ದಾರೆ” ಎಂದು ಹೇಳಿದರು.

“ಒಂದು ವೇಳೆ ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ತಂದರೆ, ಬಿಜೆಪಿಯೇತರ ಪಕ್ಷಗಳೆಲ್ಲ ರಾಜ್ಯಸಭೆಯಲ್ಲಿ ಒಗ್ಗೂಡಿದರೆ ಬಿಜೆಪಿಗೆ ಹಿನ್ನಡೆ ಉಂಟು ಮಾಡಬಹುದು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂಬ ಸಂದೇಶವನ್ನು ಈ ಒಗ್ಗಟ್ಟು ರವಾನಿಸಬಹುದು” ಎಂದು ಕೇಜ್ರಿವಾಲ್ ಹೇಳಿದರು.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ನಿತೀಶ್‌ ಕುಮಾರ್‌, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಸೇರಿದಂತೆ ಅನೇಕ ಬಿಜೆಪಿಯೇತರ ನಾಯಕರು ಹಾಜರಿದ್ದರು.

ಅರವಿಂದ್‌ ಕೇಜ್ರಿವಾಲ್‌ ಅವರು ದೆಹಲಿ ಆಡಳಿತದ ಸೇವೆ ನಿಯಂತ್ರಿಸುವ ಕೇಂದ್ರದ ಸುಗ್ರೀವಾಜ್ಞೆಯನ್ನು ಎಲ್ಲ ಪ್ರತಿಪಕ್ಷಗಳು ವಿರೋಧಿಸಬೇಕು ಎಂದು ಶನಿವಾರ ಮನವಿ ಮಾಡಿದ್ದರು.

ರಾಜಧಾನಿಯಲ್ಲಿರುವ ಎಲ್ಲ ಗುಂಪು ಎ ಮತ್ತು ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ನಿರ್ಧರಿಸಲು ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ ಸ್ಥಾಪಿಸುವುದನ್ನು ಸುಗ್ರೀವಾಜ್ಞೆ ಪ್ರಸ್ತಾಪಿಸುತ್ತದೆ.

ದೆಹಲಿ ಮುಖ್ಯಮಂತ್ರಿಯವರು ಪ್ರಾಧಿಕಾರದ ನೇತೃತ್ವ ವಹಿಸುತ್ತಾರೆ. ಇದರಲ್ಲಿ ಕೇಂದ್ರ ಗೃಹ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ ಇರುತ್ತಾರೆ. ಪ್ರಾಧಿಕಾರದಲ್ಲಿ ಎಲ್ಲ ವಿಷಯಗಳು ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಬಹುಪಾಲು ಮತಗಳಿಂದ ನಿರ್ಧರಿಸಲ್ಪಡುತ್ತವೆ ಎಂದು ಸುಗ್ರೀವಾಜ್ಞೆ ಹೇಳುತ್ತದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿಗೆ ಶಿಕ್ಷಣ ಬೇಕೆಂದು ಅದಕ್ಕೇ ಹೇಳೋದು; 2 ಸಾವಿರ ರೂ. ನೋಟ್ ಬ್ಯಾನ್‌ ಬಗ್ಗೆ ಕೇಜ್ರಿವಾಲ್ ವ್ಯಂಗ್ಯ

ಕೇಂದ್ರದಿಂದ ನೇಮಕಗೊಂಡ ಇಬ್ಬರು ಅಧಿಕಾರಿಗಳು ಚುನಾಯಿತ ಮುಖ್ಯಮಂತ್ರಿಯನ್ನು ತಳ್ಳಿಹಾಕಬಹುದು. ಭಿನ್ನಾಭಿಪ್ರಾಯಗಳಿದ್ದಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ನಿರ್ಧಾರವು ಅಂತಿಮವಾಗಿರುತ್ತದೆ ಎಂದು ಸುಗ್ರೀವಾಜ್ಞೆ ಹೇಳುತ್ತದೆ.

ಅರವಿಂದ್‌ ಕೇಜ್ರಿವಾಲ್‌ ಅವರು ಈ ಸುಗ್ರೀವಾಜ್ಞೆಯು ದೆಹಲಿ ಆಡಳಿತಕ್ಕೆ ಮಾರಕ ಎಂದು ಖಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...