ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಪುತ್ರ ನಿಶಾಂತ್‌ಗೆ ಸಿಎಂ ಪಟ್ಟ?

Date:

ಬಿಹಾರ ರಾಜಕೀಯದಲ್ಲಿ ದಶಕಗಳ ಕಾಲ ಅಧಿಪತ್ಯ ನಡೆಸಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಈಗ ತಮ್ಮ ರಾಜಕೀಯ ಜೀವನದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಮಾ.30(ಸೋಮವಾರ) ನಿತೀಶ್ ಕುಮಾರ್ ಅವರು ಬಿಹಾರ ವಿಧಾನ ಪರಿಷತ್ (MLC) ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಹೆಜ್ಜೆ ಇಟ್ಟಿದ್ದಾರೆ. ಜೆಡಿಯು ಎಂಎಲ್‌ಸಿ ಸಂಜಯ್ ಗಾಂಧಿ ಅವರು ಸಚಿವಾಲಯಕ್ಕೆ ಆಗಮಿಸಿ ನಿತೀಶ್ ಅವರ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

- Advertisement -

ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಿತೀಶ್ ಕುಮಾರ್, ಕೇವಲ ನಾಲ್ಕು ತಿಂಗಳಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ನಡೆದ ರಾಜ್ಯಸಭಾ ಚುನಾವಣೆಯಲ್ಲಿ 44 ಶಾಸಕರ ಬೆಂಬಲದೊಂದಿಗೆ ಅವರು ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೇಂದ್ರ ಸಚಿವ ವಿಜಯ್ ಕುಮಾರ್ ಚೌಧರಿ ಈ ಬೆಳವಣಿಗೆಯನ್ನು ದೃಢಪಡಿಸಿದ್ದು, ಬಿಹಾರದಲ್ಲಿ ನಾಯಕತ್ವ ಬದಲಾವಣೆಯ ಮುನ್ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜಕೀಯ ರಂಗಕ್ಕೆ ಪುತ್ರ ನಿಶಾಂತ್ ಪ್ರವೇಸ ?

ನಿತೀಶ್ ಕುಮಾರ್ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಿರುವ ಬೆನ್ನಲ್ಲೇ,  ಅವರ ಪುತ್ರ ನಿಶಾಂತ್ ಕುಮಾರ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿರುವುದು ಭಾರೀ ಕುತೂಹಲ ಕೆರಳಿಸಿದೆ. ಇದುವರೆಗೆ ರಾಜಕೀಯದಿಂದ ದೂರವಿದ್ದ ನಿಶಾಂತ್, ಮಾರ್ಚ್ 8ರಂದು ಅಧಿಕೃತವಾಗಿ ಜೆಡಿಯು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸಂಜಯ್ ಝಾ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸಿದ ನಿಶಾಂತ್, “ಸಕ್ರಿಯ ಕಾರ್ಯಕರ್ತನಾಗಿ ಪಕ್ಷವನ್ನು ಮುನ್ನಡೆಸಲು ಪ್ರಯತ್ನಿಸುತ್ತೇನೆ” ಎಂದು ಘೋಷಿಸಿದ್ದಾರೆ.

ಬಿಹಾರದ ಮುಂದಿನ ಉಪಮುಖ್ಯಮಂತ್ರಿ ನಿಶಾಂತ್?

ಜೆಡಿಯು ವಲಯದಲ್ಲಿ ಈಗ ನಿಶಾಂತ್ ಕುಮಾರ್ ಅವರದ್ದೇ ಮಾತು. ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿಯಾಗಿ ನಿಶಾಂತ್ ಅವರನ್ನು ಬಿಹಾರದ ಮುಂದಿನ ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಬಗ್ಗೆ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ವರದಿಯಾಗಿದೆ. ಹಿರಿಯ ಶಾಸಕ ಹರಿ ನಾರಾಯಣ್ ಸಿಂಗ್ ಅವರ ಪ್ರಕಾರ, ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರೆಲ್ಲರೂ ನಿಶಾಂತ್ ಅವರಿಗೆ ಜವಾಬ್ದಾರಿ ನೀಡಲು ಒಮ್ಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಹಾಸನ ಮಣ್ಣಿನ ಹೆಣ್ಣು ದನಿಗಳು | ಕಲ್ಲರಳಿ ಹೂವಾದ ಕ್ರೀಡಾಪಟು- ಕೆ.ವಿಜಯಕುಮಾರಿ

ಒಟ್ಟಾರೆಯಾಗಿ, ನಿತೀಶ್ ಕುಮಾರ್ ದೆಹಲಿಯಲ್ಲಿ ರಾಷ್ಟ್ರ ರಾಜಕಾರಣದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದರೆ, ಬಿಹಾರದಲ್ಲಿ ತಮ್ಮ ಪುತ್ರನ ಮೂಲಕ ಹೊಸ ನಾಯಕತ್ವವನ್ನು ಪ್ರತಿಷ್ಠಾಪಿಸಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...