ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ದೊರೆತಿಲ್ಲ. ಆದರೆ, ಬಿಜೆಪಿ ನೇತೃತ್ವದ ಮೈತ್ರಿಕೂಟವು 292 ಸ್ಥಾನಗಳನ್ನು ಪಡೆದುಕೊಂಡಿದೆ. ಇದೇ ವೇಳೆ, ಇಂಡಿಯಾ ಒಕ್ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ.
ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಆದರೆ, ಇಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಇಬ್ಬರೂ ಕೂಡ ಭಾಗವಹಿಸಿದ್ದರು. ಅಲ್ಲದೇ, ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿರುವ ಬೆಂಬಲವನ್ನೇ ಮುಂದುವರಿಸುವ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೇ, ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರು ಬೆಂಬಲ ಪತ್ರವನ್ನು ನೀಡಿರುವ ಬಗ್ಗೆ ಕೂಡ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಸರ್ಕಾರ ರಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಮಿತ್ರಕೂಟದ ಸದಸ್ಯರು ಭೇಟಿಯಾಗಿ. ಸರ್ಕಾರ ರಚಿಸಲು ಅವಕಾಶ ಕೇಳಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
Visuals from the National Democratic Alliance (NDA) meeting held at Prime Minister Shri Narendra Modi’s residence. pic.twitter.com/S7yH7Fe5fj
— BJP (@BJP4India) June 5, 2024
ನಿತೀಶ್ ಕುಮಾರ್ ಅವರ ಜೆಡಿಯು 12 ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು ಪಡೆದಿವೆ. ಒಟ್ಟು 28 ಸ್ಥಾನಗಳಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಬಹುಮುಖ್ಯವಾಗಿ ಪರಿಣಮಿಸಿದೆ.
ಇಬ್ಬರನ್ನೂ ಪಕ್ಕದಲ್ಲೇ ಕೂರಿಸಿಕೊಂಡಿದ್ದ ನರೇಂದ್ರ ಮೋದಿ
ಇಂದು ನಡೆದ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರನ್ನು ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡಿದ್ದರು. ಈ ಬೆಳವಣಿಗೆಯು ಇವರಿಬ್ಬರೂ ಕೂಡ ಎನ್‌ಡಿಎ ಮೈತ್ರಿಕೂಟಕ್ಕೆ ಎಷ್ಟು ಅಗತ್ಯ ಎಂಬುದನ್ನು ತೋರಿಸಿಕೊಟ್ಟಿದೆ.
