‘ಇಂಡಿಯಾ’ ಒಕ್ಕೂಟದಿಂದ ನಿತೀಶ್ ಕುಮಾರ್‌ಗೆ ಪ್ರಧಾನಿ ಸ್ಥಾನದ ಆಫರ್ ಬಂದಿತ್ತು: ಜೆಡಿಯು ಮುಖಂಡ ಆರೋಪ

Date:

“2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆಯೇ ಇಂಡಿಯಾ ಮೈತ್ರಿಕೂಟದ ಹಲವು ಮಂದಿ ಮುಖಂಡರು ನಿತೀಶ್ ಕುಮಾರ್ ಅವರನ್ನು ಸಂಪರ್ಕ ಮಾಡಿ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಆದರೆ ನಾವು ತಿರಸ್ಕರಿಸಿದೆವು” ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “ಲೋಕಸಭಾ ಚುನಾವಣೆಯ ಫಲಿತಾಂಶದ ಸಮಯದಲ್ಲಿ ಎನ್‌ಡಿಎ ತೊರೆದು ಇಂಡಿಯಾ ಒಕ್ಕೂಟ ಸೇರಿದರೆ ನಿತೀಶ್ ಕುಮಾರ್ ಅವರನ್ನೇ ಪ್ರಧಾನಿ ಮಾಡುವುದಾಗಿ ಆಫರ್ ನೀಡಿದ್ದರು. ಇದನ್ನು ದೃಢೀಕರಿಸುವ ಫೋನ್ ದಾಖಲೆಗಳು ನಮ್ಮ ಬಳಿ ಇವೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಲೋಕಸಭಾ ಚುನಾವಣೆಗೂ ಮುನ್ನ ಇಂಡಿಯಾ ಮೈತ್ರಿಕೂಟವನ್ನು ನಿತೀಶ್ ಕುಮಾರ್ ಅವರು ತೊರೆಯಲು ಕಾರಣ ಏನು ಎಂಬ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ, “ಇಂಡಿಯಾ ಮೈತ್ರಿಕೂಟದ ಮೊದಲ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪ್ರಾದೇಶಿಕ ಪಕ್ಷಗಳ ಮುಖಂಡರು ನಿತೀಶ್ ಕುಮಾರ್ ಅವರನ್ನೇ ಸಂಚಾಲಕರನ್ನಾಗಿ ಮಾಡುವ ಆಸಕ್ತಿ ಹೊಂದಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮತ್ತು ಮಮತಾ ಬ್ಯಾನರ್ಜಿ ಅವರು ಪಿತೂರಿ ಮಾಡಿದ್ದರಿಂದ ಅವರಿಗೆ ಆ ಸ್ಥಾನ ಲಭಿಸಿಲ್ಲ. ಆ ಬಳಿಕ ಪ್ರಧಾನಿ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಕೂಡ ಶಿಫಾರಸು ಮಾಡಿದರು” ಎಂದು ತಿಳಿಸಿದ್ದಾರೆ.

“ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಪ್ರಶ್ನೆಗಳನ್ನು ಎತ್ತಿದರು. ಎಲ್ಲರನ್ನೂ ಒಟ್ಟುಗೂಡಿಸಲು ಆಗ ಶ್ರಮಿಸಿದ್ದು ನಿತೀಶ್ ಕುಮಾರ್. ಆದರೆ, ಅವರನ್ನು ಸಂಚಾಲಕರನ್ನಾಗಿ ಮಾಡುವುದರಿಂದ ತಪ್ಪಿಸಿದರು. ಇಂತಹ ಅವಮಾನವನ್ನು ಎದುರಿಸುವುದು ನಮಗೆ ಸ್ವೀಕರಿಸಲು ಆಗಿಲ್ಲ. ನಾವು ಅವರ ಒಳಗಿನ ಉದ್ದೇಶವನ್ನು ಅರ್ಥಮಾಡಿಕೊಂಡೆವು. ಹಾಗಾಗಿಯೇ, ಜೆಡಿಯು ಇಂಡಿಯಾ ಮೈತ್ರಿಕೂಟದೊಂದಿಗಿನ ಸಂಬಂಧವನ್ನು ಮುರಿದುಕೊಂಡು ಎನ್‌ಡಿಎ ಸೇರಿದೆ” ಎಂದು ಹೇಳಿಕೆ ನೀಡಿದ್ದಾರೆ.

“ಚುನಾವಣೆಗೂ ಮೊದಲು ನಿತೀಶ್ ಕುಮಾರ್ ಅವರು ಸಂಚಾಲಕರಾಗುವುದನ್ನು ಇಷ್ಟಪಡದ ಇಂಡಿಯಾ ಮೈತ್ರಿಕೂಟದ ನಾಯಕರು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆಯೇ ಪ್ರಧಾನಿ ಹುದ್ದೆಯನ್ನು ಆಫರ್ ನೀಡಿದರು. ನಾವು ಅದನ್ನು ತಿರಸ್ಕರಿಸಿ ಎನ್‌ಡಿಎ ಜೊತೆಗೆ ಮೈತ್ರಿ ಮುಂದುವರಿಸಿದ್ದೇವೆ. ನರೇಂದ್ರ ಮೋದಿಯವರನ್ನು ಎನ್‌ಡಿಎ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪಿದ್ದೇವೆ” ಎಂದು ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ತಿಳಿಸಿದ್ದಾರೆ.

‘ನಮಗೆ ಈವರೆಗೆ ಅಂತಹ ಯಾವುದೇ ಮಾಹಿತಿ ಇಲ್ಲ’ ಎಂದ ಜೆಡಿಯು ಮುಖಂಡ!

ಕೆ ಸಿ ತ್ಯಾಗಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಇನ್ನೋರ್ವ ಜೆಡಿಯು ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ಝಾ, “ನಿತೀಶ್ ಕುಮಾರ್‌ ಅವರಿಗೆ ಇಂಡಿಯಾ ಒಕ್ಕೂಟದಿಂದ ಪ್ರಧಾನಿ ಆಫರ್ ಬಂದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ” ಎಂದು ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆಗೆ ಮಾತನಾಡಿರುವ ಅವರು, “ನಮ್ಮ ಮುಖ್ಯಮಂತ್ರಿಯವರಿಗೋ ಅಥವಾ ನಮ್ಮ ಪಕ್ಷಕ್ಕೋ ಈ ಬಗ್ಗೆ ತಿಳಿದಿಲ್ಲ. ನಿನ್ನೆ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ, ನಿತೀಶ್ ಕುಮಾರ್ ಅವರು ನಾವು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದೆವು. ಅದನ್ನು ಮುಂದುವರಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ. ಎನ್‌ಡಿಎ ಒಕ್ಕೂಟದಿಂದ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತೇವೆ ಎಂದು ನಿತೀಶ್ ಅವರೇ ಹೇಳಿದ್ದಾರೆ. ನಿತೀಶ್ ಕುಮಾರ್‌ ಅವರಿಗೆ ಪ್ರಧಾನಿ ಹುದ್ದೆಯ ಆಫರ್ ಬಂದಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ” ಎಂದು ಹೇಳುವ ಮೂಲಕ ಜೆಡಿಯು ಮುಖಂಡ ಕೆ ಸಿ ತ್ಯಾಗಿ ನೀಡಿದ್ದ ಹೇಳಿಕೆಗೆ ಸಂಜಯ್ ಕುಮಾರ್ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...