ಬಿಹಾರ ಎನ್‌ಡಿಎ ಪರಿವಾರದಲ್ಲಿ ಮತ್ತೊಂದು ಪುತ್ರೋದಯ: ನಿತೀಶ್ ಪುತ್ರ ಸೇರಿ 31 ಮಂದಿ ಸಚಿವ ಸಂಪುಟಕ್ಕೆ ಸೇರ್ಪಡೆ

Date:

ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ಜನತಾ ದಳ (ಯುನೈಟೆಡ್) ನಾಯಕ ನಿಶಾಂತ್ ಕುಮಾರ್ ಗುರುವಾರ ಬಿಜೆಪಿ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯ ಭಾಗವಾಗಿ ನಿಶಾಂತ್ ಸೇರಿ ಒಟ್ಟು 31 ಮಂದಿ ಇತರ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

ನಿಶಾಂತ್ ಕುಮಾರ್ ಮಾರ್ಚ್‌ನಲ್ಲಿ ಜೆಡಿಯು ಸೇರಿದ್ದರು. ರಾಂಚಿಯ ಮೆಸ್ರಾದ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಧ್ಯಯನ ಮಾಡಿದ ನಿಶಾಂತ್ ಮಾರ್ಚ್‌ನಲ್ಲಿ ಜೆಡಿಯು ಸೇರುವವರೆಗೂ ರಾಜಕೀಯವಾಗಿ ತೊಡಗಿದವರಲ್ಲ, ಶಾಸಕರೂ ಅಲ್ಲ. ಆದರೆ ಆರು ತಿಂಗಳಲ್ಲೇ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಹಾರ ಎನ್‌ಡಿಎ ಪರಿವಾರದಲ್ಲಿ ಮತ್ತೊಂದು ಪುತ್ರೋದಯವಾಗಿದೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಬಿಹಾರ ರಾಜಕೀಯದಲ್ಲಿ ‘ಪುತ್ರೋದಯ’ – ಕುಟುಂಬ ರಾಜಕಾರಣ ಕೆಸರಿನಲ್ಲಿ ಬಿಜೆಪಿಯ ಮಜ್ಜನ

ಪ್ರಮಾಣ ವಚನ ಸ್ವೀಕಾರ ಸಮಾರಂಭವು ಪಟನಾದ ಗಾಂಧಿ ಮೈದಾನದಲ್ಲಿ ನಡೆಯಿತು. ಈ ಹಿಂದೆ ಹಲವು ಬಾರಿ ಕುಟುಂಬ ರಾಜಕಾರಣ ವಿರುದ್ಧ ಭಾಷಣ ಮಾಡಿರುವ, ವಿಪಕ್ಷಗಳನ್ನು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಎನ್‌ಡಿಎ ನಾಯಕರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಬಿಹಾರದಲ್ಲಿ ಎನ್‌ಡಿಎ ಅಧಿಕಾರವನ್ನು ಉಳಿಸಿಕೊಂಡಿದೆ. ಜೆಡಿಯು 85 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಸ್ಪರ್ಧಿಸಿದ 101 ಕ್ಷೇತ್ರಗಳಲ್ಲಿ 89 ಸ್ಥಾನಗಳನ್ನು ಗೆದ್ದು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅದಾದ ಬಳಿಕ ನಿತೀಶ್ ಕುಮಾರ್ 10ನೇ ಬಾರಿಗೆ ಮುಖ್ಯಮಂತ್ರಿಯಾದರು. ಆದರೆ ಮಾರ್ಚ್ 16ರಂದು ನಿತೀಶ್ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಏಪ್ರಿಲ್ 14ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅದರ ಮರುದಿನವೇ ಬಿಜೆಪಿಯ ಚೌಧರಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾದರು.

ಆದರೆ ನಿತೀಶ್ ಕುಟುಂಬಕ್ಕೆ ಮಣೆ ಹಾಕುವ ಕುಟುಂಬ ರಾಜಕಾರಣವನ್ನೂ ಬಿಜೆಪಿ ನಡೆಸಿದೆ. ಅಷ್ಟಕ್ಕೂ ಬಿಹಾರದಲ್ಲಿ ವಂಶ ರಾಜಕಾರಣ ಈಗ ಆರಂಭವಾಗುತ್ತಿರುವುದಲ್ಲ. ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಗೆದ್ದು ಸರ್ಕಾರ ರಚನೆಯಾದಾಗಲೇ ಈ ಕುಟುಂಬ ರಾಜಕೀಯದ ಚರ್ಚೆ ನಡೆದಿತ್ತು. ಅದಕ್ಕೆ ಕಾರಣ ನಿತೀಶ್ ಸಂಪುಟದ 26 ಸಚಿವರಲ್ಲಿ 10 ಮಂದಿಗೆ ರಾಜಕೀಯ ಹಿನ್ನೆಲೆ ಇರುವುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...