ಕಾರ್ ಇಲ್ಲ, ಕಚೇರಿ ಇಲ್ಲ, ಕೆಲಸ ಮಾಡಬೇಕು: ನೂತನ ಕಾರ್ಯಾಧ್ಯಕ್ಷರಿಗೆ ಡಿಕೆಶಿ ಸೂಚನೆ

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ನೂತನವಾಗಿ ಆಯ್ಕೆಗೊಂಡ ಐವರು ಕಾರ್ಯಾಧ್ಯಕ್ಷರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂರಿಂದ ಕಾಂಗ್ರೆಸ್ ಬಾವುಟ ಪಡೆಯುವ ಮೂಲಕ ತನ್ವೀರ್ ಸೇಠ್, ವಿನಯ್ ಕುಲಕರ್ಣಿ, ಜಿ ಸಿ ಚಂದ್ರಶೇಖರ್, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅಧಿಕಾರ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌, “ನಿಮಗೆ ಸುತ್ತಾಡಲು ಕಾರು ಕೊಡುವುದಿಲ್ಲ. ಕಚೇರಿಯಲ್ಲಿ ರೂಮ್‌ ಕೊಡಲ್ಲ. ಆದರೆ, ಕೆಲಸ ಮಾಡಬೇಕು” ಎಂದು ತಾಕೀತು ಮಾಡಿದರು.

“ನಿಮ್ಮದೆ ಕಾರು ಬಳಸಿಕೊಂಡು ರಾಜ್ಯಾದ್ಯಂತ ಸುತ್ತಾಡಬೇಕು. ಹಿಂದಿನ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ‌, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಆರ್‌ ಧ್ರುವನಾರಾಯಣ್ ಅವರನ್ನು ನೆನಸಿಕೊಳ್ಳಬೇಕು. ಅವರದ್ದೇ ಆದ ರೀತಿಯಲ್ಲಿ ಪಕ್ಷಕ್ಕೆ ಕೊಡುಗೆ ಕೊಟ್ಟಿದ್ದಾರೆ” ಎಂದು ನೆನಪಿಸಿದರು.

“ಎಂ ಬಿ ಪಾಟೀಲ್ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ನಾನು ಸಹ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೇನೆ. ಎನ್‌ಎಸ್‌ಯುಐಯಿಂದ ಬಂದವರು ನಾವು. ನನಗೆ ಎನ್‌ಎಸ್‌ಯುಐನಲ್ಲಿ ಟಿಕೆಟ್ ಕೊಟ್ಟಿರಲಿಲ್ಲ. ಯಾರು ಅಂತ ಈಗ ಹೇಳುವುದು ಬೇಡ. ನಾವು ಹಾಗೂ ಹೀಗೂ ಮಾಡಿ ಬೆಳೆದಿದ್ದೇವೆ” ಎಂದರು.

“ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡಿದರೆ ಆಗಲ್ಲ. ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು. ಕೆಲಸ ‌ಮಾಡಿಲ್ಲ ಎಂದರೆ ಚುನಾವಣೆ ನಂತರ ನೀವು ಮಾಜಿಗಳು ಆಗುತ್ತೀರಿ. ನಾನು ಎಷ್ಟು ದಿನ ಇರುತ್ತೇನೊ ಬಿಡುತ್ತೇನೋ ಗೊತ್ತಿಲ್ಲ. ನೀವು ಕೆಲಸ ‌ಮಾಡಬೇಕು” ಎಂದು ಸೂಚಿಸಿದರು.

“ಆರು ಬಾರಿ ಶಾಸಕರಾಗಿರುವ ತನ್ವೀರ್ ಸೇಠ್ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಿರುವುದು ಹೆಮ್ಮೆಯ ವಿಚಾರ. ಜಿ.ಸಿ ಚಂದ್ರಶೇಖರ್ ಅವರು ವಿದ್ಯಾರ್ಥಿ ನಾಯಕತ್ವದಿಂದ ರಾಜ್ಯಸಭೆಗೆ ಪ್ರವೇಶ ಮಾಡಿದ್ದು, ವಿನಯ್ ಕುಲಕರ್ಣಿ ಅವರು ಯುವ ನಾಯಕತ್ವದಿಂದ ಸಚಿವರಾಗಿದ್ದು, ಮಂಜುನಾಥ ಭಂಡಾರಿ ಅವರು ವಿದ್ಯಾರ್ಥಿ ನಾಯಕರಾಗಿ ಶಾಸಕರಾಗಿದ್ದು, ಇವರ ಜತೆಗೆ ವಸಂತ ಕುಮಾರ್ ಅವರು ಕೂಡ ಯುವ ನಾಯಕತ್ವದಿಂದ ಬೆಳೆದು ಬಂದಿದ್ದು, ಇವರುಗಳು ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಪ್ರಚಾರಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ಅವರು ಆಯ್ಕೆಯಾಗಿದ್ದು, ಇವು ಪವಿತ್ರ ಕೆಲಸವಾಗಿದ್ದು, ನಿಮ್ಮ ಅವಧಿಯಲ್ಲಿ ನೀವು ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...