ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

Date:

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು ಈವರೆಗೂ ನಮ್ಮ ಪರವಾಗಿ ಪ್ರಚಾರಕ್ಕೆ ಬಂದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ದೇವೇಗೌಡರು ಹಾಸನದಲ್ಲಿ ಮಾತನಾಡಿ ಮೈತ್ರಿಯಲ್ಲಿ ಇನ್ನೂ ಪೂರ್ಣ ಒಮ್ಮತ ಮೂಡದಿರುವ ಬಗ್ಗೆ ಸುಳಿವು ನೀಡಿದ್ದಾರೆ.

“ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡಿಲ್ಲ. ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಹೀಗೆಂದ ಮಾತ್ರಕ್ಕೆ ಕುಮಾರಸ್ವಾಮಿಗೆ ಬಹಳ ಅಪಾಯ ಆಗಿಬಿಡುತ್ತದೆ ಎನ್ನೋ ಹಾಗಿಲ್ಲ. ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳೆದ ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಹೋರಾಟ ನಡೆದಿದೆ. ಸಂಪತ್ತು ಹಂಚಿಕೆ ಬಗ್ಗೆ ಎರಡು ಪಕ್ಷಗಳ ನಡುವ ದೊಡ್ಡ ಚರ್ಚೆ ನಡೆದಿದೆ. ಸಂಪತ್ತಿನ ಸರ್ವೇ ಹಾಗೂ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಅವರ ಮಾತು ಕೇಳಿದರೆ ರಾಹುಲ್ ಗಾಂಧಿ ಪಾಪ ಅನ್ನಿಸುತ್ತದೆ” ಎಂದು ದೇವೇಗೌಡರು ಲೇವಡಿ ಮಾಡಿದರು.

“ಪ್ರಧಾನಿ ಮೋದಿ ಅವರ ಜೊತೆ ಎರಡು ಸಭೆಗಳಲ್ಲಿ ಭಾಗಿಯಾಗಿದ್ದೇನೆ. ಎರಡನೆ ಹಂತದ ಚುನಾವಣೆ ಭಾಗದಲ್ಲೂ ಪ್ರಚಾರ ನಡೆಸುತ್ತೇನೆ. ಮೊದಲ‌ ಹಂತದ ಚುನಾವಣೆಯ ಈ ಭಾಗದಲ್ಲಿ ಬಿಜೆಪಿ ಜೆಡಿಎಸ್ ಸೇರಿ ಪ್ರಚಾರ ಮಾಡುತ್ತಿದ್ದೇವೆ. ಕಾವೇರಿ ಹೋರಾಟ ಜೀವನ್ಮರಣದ ಪ್ರಶ್ನೆ. ಹಾಗಾಗಿಯೇ ನಾವು 28ಕ್ಕೆ 28 ಸ್ಥಾನ‌ ಗೆಲ್ತೇವೆ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ” ಎಂದರು.

“ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಎಲ್ಲಿ ನೋಡಿದರೂ ಜನ ಸಾಗರ. ಅಲ್ಲಿ ನಾನು ನಿನ್ನೆ ಏಳು ಸಭೆ ಮಾಡಿದ್ದೇನೆ. ಆ ಜನ ಸಾಗರದ ನಡುವೆ ಒಂದೊಂದು ಸಭೆ ಮೂರು ಗಂಟೆ ತಡವಾಗಿದೆ. ಕಾಂಗ್ರೆಸ್ ದುಡ್ಡಿನ ಹೊಳೆ ಹರಿಸಿದರೂ ಗೆಲ್ಲುವುದು ನಾವೇ” ಎಂದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ

ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...