ದೆಹಲಿಯ ಯಾವುದೇ ವಿಭಜನಕಾರಿ ಕೇಸರಿ ಅಜೆಂಡಾ ತಮಿಳುನಾಡಿನಲ್ಲಿ ಯಶಸ್ವಿಯಾಗದು: ಸಿಎಂ ಸ್ಟಾಲಿನ್

Date:

ಕಾಂಗ್ರೆಸ್, ವಿಸಿಕೆ ಮತ್ತು ಎಡಪಕ್ಷಗಳಂತಹ ಮೈತ್ರಿ ಪಕ್ಷಗಳ ನಾಯಕರು ನಮ್ಮೊಂದಿಗೆ ಇರುವುದರಿಂದ, ತಮಿಳುನಾಡು ಒಗ್ಗಟ್ಟಾಗಿ ಇರುವವರೆಗೆ ರಾಜ್ಯದಲ್ಲಿ ದೆಹಲಿಯ ಯಾವುದೇ ವಿಭಜನಕಾರಿ ಕೇಸರಿ ಅಜೆಂಡಾ ಯಶಸ್ವಿಯಾಗದು ಎಂದು ಡಿಎಂಕೆ ಅಧ್ಯಕ್ಷ, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.

- Advertisement -

ಕಾಂಗ್ರೆಸ್ ಹಿರಿಯ ಎಲ್ ಇಲಯಪೆರುಮಾಳ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಸ್ಟಾಲಿನ್ ನಾಲ್ಕು ವರ್ಷಗಳಲ್ಲಿ ತಮ್ಮ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆ ವಿವರಿಸಿದರು. ಹಾಗೆಯೇ ಕಲ್ಯಾಣ ಯೋಜನೆಗಳು ಫಲಾನುಭವಿಗಳನ್ನು ತಲುಪುವಂತೆ ನೋಡಿಕೊಳ್ಳಲು ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ತಮಿಳುನಾಡು | ನೀಟ್‌ ರದ್ದುಗೊಳಿಸುವ ಭರವಸೆ ನೀಡಿದ ಸಿಎಂ ಎಂ ಕೆ ಸ್ಟಾಲಿನ್

ಇನ್ನು ಸ್ಟಾಲಿನ್‌ಗೂ ಮುನ್ನ ಮಾತನಾಡಿದ ಸಿಕೆ ಮುಖ್ಯಸ್ಥ ಥೋಲ್ ತಿರುಮಾವಲವನ್, ತಮ್ಮ ಪಕ್ಷವು ಡಿಎಂಕೆ ಮೈತ್ರಿಕೂಟದಲ್ಲಿ ಮುಂದುವರಿಯುತ್ತದೆ ಮತ್ತು ಜಾತ್ಯತೀತ ಪ್ರಗತಿಪರ ಒಕ್ಕೂಟದ ವಿಜಯಕ್ಕಾಗಿ ನಮ್ಮ ಕಾರ್ಯಕರ್ತರು ಕೆಲಸ ಮಾಡುತ್ತಾರೆ ಎಂದು ಹೇಳಿದರು.

“ಈ ವೇದಿಕೆಯಲ್ಲಿ, ಪೆರಿಯಾರ್ ಮಾರ್ಗವನ್ನು ಅನುಸರಿಸುವ ದ್ರಾವಿಡ ಚಳುವಳಿಯ ನಾಯಕರು, ಮಾರ್ಕ್ಸ್‌ವಾದಿ ಸಿದ್ಧಾಂತದೊಂದಿಗೆ ಕಮ್ಯುನಿಸ್ಟ್ ಚಳುವಳಿಯ ನಾಯಕರು, ಗಾಂಧಿ ಮಾರ್ಗ ಹೊಂದಿರುವ ರಾಷ್ಟ್ರೀಯ ಚಳುವಳಿಯ ನಾಯಕರು ಮತ್ತು ಅಂಬೇಡ್ಕರ್ ಚಳುವಳಿಯ ನಾಯಕರು ನಾವು ಏಕತೆಯಿಂದ ಇರುತ್ತೇವೆ. ಇದು ತಮಿಳುನಾಡು, ಒಂದಾಗಿ ಒಗ್ಗಟ್ಟಾಗಿದೆ” ಎಂದು ತಿಳಿಸಿದರು.

“ತಿರುಮಾವಲವನ್ ಹೇಳಿದಂತೆ, ತಮಿಳುನಾಡು ಒಗ್ಗಟ್ಟಾಗಿ ಇರುವವರೆಗೆ, ದೆಹಲಿಯ ಯಾವುದೇ ವಿಭಜನಕಾರಿ ಕೇಸರಿ ಅಜೆಂಡಾ ಇಲ್ಲಿ ಯಶಸ್ವಿಯಾಗದು ಎಂದು ನಾನು ಪ್ರತಿಪಾದಿಸುತ್ತೇನೆ” ಎಂದು ಸ್ಟಾಲಿನ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...