ಗರಡುಪಾಳ್ಯದಲ್ಲಿ ಯಾವುದೇ ಒತ್ತುವರಿ ಆಗಿಲ್ಲ, ಅದು ನಮ್ಮ ತಾತನ ಆಸ್ತಿ: ಸಚಿವ ಕೃಷ್ಣ ಬೈರೇಗೌಡ

Date:

ಕಳೆದ ಎರಡು ಮೂರು ದಿನಗಳಿಂದ ಕೋಲಾರ ತಾಲೂಕು ಗರಡುಪಾಳ್ಯ ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿಯಾಗಿದೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಈ ವಿಚಾರದಲ್ಲಿ ನನ್ನ ಹೆಸರನ್ನೂ ತಳುಕು ಹಾಕಿ, ನಾನೇ ಒತ್ತುವರಿ ಮಾಡಿದ್ದೇನೆ ಎಂದೂ ಆರೋಪಿಸಲಾಗಿದೆ. ಆದರೆ, ಯಾವುದೇ ಒತ್ತವರಿ ಆಗಿಲ್ಲ. ಅಲ್ಲಿನ ಸಂಪೂರ್ಣ ಆಸ್ತಿ ನಮ್ಮ ತಾತ ಚೌಡೇಗೌಡರಿಗೆ ಸೇರಿದ್ದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

- Advertisement -

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಲಾಪದ ಮೇಲೆ ಅವರು ಆರೋಪಗಳಿವೆ ಉತ್ತರಿಸಿದರು. “ಸಾರ್ವಜನಿಕ ಜೀವನದಲ್ಲಿ ನಾವು ಕೆಲಸ ಮಾಡುವಾಗ ನಮ್ಮ ಕೆಲಸವನ್ನು ಒಪ್ಪುವವರು-ವಿರೋಧಿಸುವವರು ಇದ್ದೇ ಇರುತ್ತಾರೆ. ಇದು ಸಾರ್ವಜನಿಕ ಜೀವನದ ಅವಿಭಾಗ್ಯ ಅಂಗ. ನಿಷ್ಠುರ ಕೆಲಸ ಮಾಡಿದ್ದಕ್ಕಾಗಿ ಬಾಧಿರಾಗುವುದೂ – ಅಂತಹವನ್ನು ವಿವಾದದಲ್ಲಿ ಸಿಲುಕಿಸಲು ಯತ್ನಿಸುವುದು ಇರುತ್ತದೆ. ಅದಕ್ಕೆ ಚಿಂತೆಗೀಡಾಗುವ ಅಗ್ಯವಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಗರಡುಪಾಳ್ಯ ಗ್ರಾಮವು ಮೈಸೂರು ಮಹಾರಾಜರ ಮನೆತನಕ್ಕೆ ಸೇರಿದ್ದ ಗ್ರಾಮ. 1923ರಲ್ಲಿ ಮಹರಾಜರು ಖರೀದಿದ್ದರು. ಅವರು ಅಲ್ಲಿ ಕೃಷಿ ತರಬೇತಿ ಕೇಂದ್ರವನ್ನು ನಡೆಸುತ್ತಿದ್ದರು. ರಸಾಯನಿಕ ಗೊಬ್ಬರವನ್ನ ಹೊರದೇಶದಿಂದ ಆಮದು ಮಾಡಿ, ಇಲ್ಲಿ ರೈತರಿಗೆ ಪರಿಚಯ ಮಾಡಿಸುವ ಕೇಂದ್ರವನ್ನಾಗಿ ನಡೆಸಲಾಗುತ್ತಿತ್ತು. ಇದುಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಟ್ರಸ್ಟ್‌ಗೆ ಸೇರಿದ ಜಮೀನು. ಇದರ ವ್ಯವಹಾರವನ್ನು ಮಹಾರಾಜರ ಸೆಕ್ರೆಟರಿ ನಾರಾಯಣ ಸ್ವಾಮಿ ನೋಡಿಕೊಳ್ಳುತ್ತಿದ್ದರು. ಅದನ್ನು ಆ ನಾರಾಯಣ ಸ್ವಾಮಿ ಅವರು  1953ರಲ್ಲಿ ನಮ್ಮ ತಾತ ಚೌಡೇಗೌಡರಿಗೆ 10 ವರ್ಷಗಳ ಭೋಗ್ಯಕ್ಕೆ ನೀಡಿದ್ದರು” ಎಂದು ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ ಜಿ ಮಸೂದೆ: ಉದ್ಯೋಗ ಖಾತ್ರಿ ಯೋಜನೆಯ ಬದಲಾವಣೆಗಳೇನು?

“ಭೋಗ್ಯದ ಅವಧಿ ಮುಗಿಯುವುದಕ್ಕೂ ಮೊದಲೇ ರಾಜಮನೆತನದವರು ಆ ಭೂಮಿಯನ್ನು ಮಾರಾಟಕ್ಕೆ ಇಟ್ಟರು. ಚೌಡೇಗೌಡರು ಆ ಜಮೀನು ಖರೀದಿಸುವುದಾಗಿ ಹೇಳಿದರೂ, ಸರಿಯಾದ ಸಮಯಕ್ಕೆ ಹಣ ಹೊಂದಿಸಲಾಗಲಿಲ್ಲ. ಆದ್ದರಿಂದ, ಜಮೀನನ್ನು 1959ರಲ್ಲಿ ಅಬೀಬುಲ್ಲಾ ಖಾನ್ ಅವರಿಗೆ ಮಾರಾಟ ಮಾಡಿದರು. ಅದರ ವಿರುದ್ಧ ನಮ್ಮ ತಾತ ಕೋಲಾರ ವಿಶೇಷ ಜಿಲ್ಲಾಧಿಕಾರಿಗೆ ದೂರು ದಾಖಲಿದರು. ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ, ಅಬೀಬುಲ್ಲಾ ಖಾನ್ ಅವರೇ ಭೂಮಿ ಮಾಲೀಕರು ಎಂಬುದಾಗಿ ಆದೇಶ ನೀಡಿದ್ದರು. ಆದೇಶದಲ್ಲಿ, ‘ಗರಡುಪಾಳ್ಯ ಎಂಬ ಇಡೀ ಹಳ್ಳಿಯು ಒಬ್ಬ ಮಾಲೀಕನಿಗೆ ಸೇರಿದ್ದು. ಯಾರೂ ವಾಸ ಮಾಡದೇ ಇರುವ ‘ಬೇಚರಾಗ್’ ಗ್ರಾಮ. ಈ ಹಳ್ಳಿಯು ಶ್ರೀಕಂಠದತ್ತ ಒಡೆಯರ್ ಟ್ರಸ್ಟ್‌ಗೆ ಸೇರಿದ್ದಾಗಿದ್ದು, 1953ರಲ್ಲಿ ಇಡೀ ಹಳ್ಳಿಯನ್ನು ರಾಜಮನೆತನವು ಭೋಗ್ಯಕ್ಕೆ ನೀಡಿತ್ತು. ಬಳಿಕ, ಅಬೀಬುಲ್ಲಾ ಖಾನ್ ಅವರಿಗೆ 47,601 ರೂ. ಮಾರಾಟ ಮಾಡಿದೆ’ ಎಂಬುದಾಗಿ ಬರೆಯಲಾಗಿದೆ” ಎಂದು ಕೃಷ್ಣ ಬೈರೇಗೌಡ ತಳಿಸಿದ್ದಾರೆ.

“ವಿಶೇಷ ಜಿಲ್ಲಾಧಿಕಾರಿಯ ಆದೇಶವನ್ನು ಪ್ರಶ್ನಿಸಿ ಮೈಸೂರ್ ಅಪಿಲೇಟ್ ಟ್ರಿಬ್ಯೂನಲ್‌ನಲ್ಲಿ ಚೌಡೇಗೌಡರು ಮೇಲ್ಮನವಿ ದಾಖಲಿಸಿದರು. ಆಗ, ಅಬೀಬುಲ್ಲಾ ಖಾನ್ ಅವರು ಒಪ್ಪಂದಕ್ಕೆ ಬಂದರು. ಗ್ರಾಮದ ಸಂಪೂರ್ಣ 256 ಎಕರೆ ಒಡೆತನವನ್ನು ಚೌಡೇಗೌಡರಿಗೆ ಬಿಟ್ಟುಕೊಟ್ಟರು. ಇದೆಲ್ಲವೂ ‘ಸೇಲ್‌ ಡೀಡ್‌’ (ಕ್ರಯ)ನಲ್ಲಿ ಸ್ಪಷ್ಟವಾಗಿದೆ. ಅಂದಿನಿಂದ ಈವರೆಗೆ ನಮ್ಮ ಕುಟುಂಬವು ಆ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದೆ” ಎಂದು ತಿಳಿಸಿದ್ದಾರೆ.

“ಈ ಜಮೀನಿನಲ್ಲಿ ಎರಡು ಕೆರೆಗಳಿವೆ. ಆ ಕಾರಣಕ್ಕಾಗಿಯೇ, ಕೆರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದೇವೆ ಎಂದು ಆರೋಪಿಸುತ್ತಿದ್ದಾರೆ. ಆದರೆ, ಆ ಕೆರೆಗಳ ಭೂಮಿಯು ನಮ್ಮ ಕುಟುಂಬದ ಹೆಸರಿನಲ್ಲಿದೆ. ಆದರೆ, ಆ ಕೆರೆಗೆಳು ಅಸ್ತಿತ್ವದಲ್ಲಿವೆ. ಕೆರೆಗಳು ಮತ್ತು ಕೆರೆಗಳಿಗೆ ಹೊಂದಿಕೊಂಡಿರುವ ನಾಲೆಗಳ ಯಾವುದೇ ಒಂದಿಂಚೂ ಭೂಮಿಯನ್ನು ಒತ್ತುವರಿ ಮಾಡಲಾಗಿಲ್ಲ. ಬೇಕಿದ್ದರೆ ಯಾರು ಬೇಕಿದ್ದರೂ ಪರಿಶೀಲಿಸಲು ಬರಬಹುದು. ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...