ಮೈಕೆಲ್‌ಪಟ್ಟಿ ಪ್ರಕರಣ | ಬಲವಂತದ ಮತಾಂತರಕ್ಕೆ ಯಾವುದೇ ಪುರಾವೆಗಳಿಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಸಿಬಿಐ

Date:

2022ರಲ್ಲಿ ತಮಿಳುನಾಡಿನ ತಂಜಾವೂರು ಜಿಲ್ಲೆಯ ಮೈಕೆಲ್‌ಪಟ್ಟಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಲಾವಣ್ಯಳ ಆತ್ಮಹತ್ಯೆ ಪ್ರಕರಣದಲ್ಲಿ ಧಾರ್ಮಿಕ ಮತಾಂತರಕ್ಕೆ ಬಲವಂತ ಮಾಡಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

- Advertisement -

ಪ್ರಕರಣದ ತನಿಖೆ ಬಗ್ಗೆ ವರದಿ ಸಲ್ಲಿಸುವಂತೆ ಕಳೆದ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಸಿಬಿಐಗೆ ಸೂಚನೆ ನೀಡಿದ್ದು ಅದರಂತೆ ಸಿಬಿಐ ವರದಿ ಸಲ್ಲಿಸಿದೆ. ಹಾಗೆಯೇ ಧಾರ್ಮಿಕ ಮತಾಂತರಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ನೇಹಾ ಕೊಲೆ ಪ್ರಕರಣ | ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು: ಪ್ರಲ್ಹಾದ್‌ ಜೋಶಿ ಆಗ್ರಹ

“ಮಿಷನರಿ ನಡೆಸುತ್ತಿರುವ ಸೇಕ್ರೆಡ್ ಹಾರ್ಟ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಬಾಲಕಿಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪಗಳನ್ನು ಸಮರ್ಥಿಸಲು ಸಾಧ್ಯವಾಗಲಿಲ್ಲ. ಹಾಸ್ಟೆಲ್ ವಾರ್ಡನ್ ಕಿರುಕುಳ ಆತ್ಮಹತ್ಯೆಗೆ ಕಾರಣ” ಎಂದು ಸಿಬಿಐ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠಕ್ಕೆ ಸಿಬಿಐ ತಿಳಿಸಿದೆ.

2022ರಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ ನಂತರ, ವಿಶ್ವ ಹಿಂದೂ ಪರಿಷತ್ತಿನ (VHP), ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಮೊದಲಾದ ಬಿಜೆಪಿ ನಾಯಕರು ಆಕೆಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ್ದರು.

ಇದು ರಾಷ್ಟ್ರವ್ಯಾಪಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿಂದೆಯೂ ರಾಜ್ಯ ಪೊಲೀಸರು ಈ ಆರೋಪವನ್ನು ತಳ್ಳಿಹಾಕಿದ್ದರು. ಆದರೂ ರಾಜಕೀಯ ಲಾಭಕ್ಕಾಗಿ ಈ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಮಾಡಿದ್ದರು. ಇದೀಗ ಪ್ರಕರಣದಲ್ಲಿ ಆರೋಪಪಟ್ಟಿ ಸಹಿತವಾಗಿ ಸಿಬಿಐ ವರದಿಯನ್ನು ಸಲ್ಲಿಸಿದೆ.

“ಮೈಕೆಲ್‌ಪಟ್ಟಿಯ ಸೇಕ್ರೆಡ್ ಹಾರ್ಟ್ ಹೈಯರ್ ಸೆಕೆಂಡರಿ ಶಾಲೆಯ ಕಾನ್ವೆಂಟ್ ಸಹೋದರಿಯರು ಮತ್ತು ಶಿಕ್ಷಕರು ಮತಾಂತರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಿಲ್ಲ. ಶಾಲಾ ಹಾಸ್ಟೆಲ್‌ನಲ್ಲಿ ತಂಗಿದ್ದ ವಿದ್ಯಾರ್ಥಿನಿ ತನ್ನ ವೀಡಿಯೊ ಹೇಳಿಕೆಯಲ್ಲಿ ಹಾಸ್ಟೆಲ್ ವಾರ್ಡನ್ ಸಿಸ್ಟರ್ ಸಗಾಯಾ ಮೇರಿಯಿಂದ ಎದುರಿಸಿದ ಕಿರುಕುಳದ ಬಗ್ಗೆ ಮಾತ್ರ ಉಲ್ಲೇಖಿಸಿದ್ದಾಳೆ” ಎಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...