ಲೋಕಸಭಾ ಚುನಾವಣೆ | ಅಮಿತ್ ಶಾ ವಿರುದ್ಧ ಸ್ಪರ್ಧೆಗೆ ಹಿಂಜರಿಕೆಯಿಲ್ಲ: ಕಾಂಗ್ರೆಸ್‌ ಅಭ್ಯರ್ಥಿ ಸೋನಾಲ್ ಪಟೇಲ್

Date:

ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ನಿಂದ ಸೋನಾಲ್ ಪಟೇಲ್ ಕಣಕ್ಕಿಳಿದಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕನ ವಿರುದ್ಧ ಹೋರಾಡಲು ಯಾವುದೇ ಹಿಂಜರಿಕೆಯಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -

ಎಐಸಿಸಿ ಕಾರ್ಯದರ್ಶಿಯಾಗಿರುವ 62 ವರ್ಷದ ಸೋನಾಲ್ ಅವರು ಗಾಂಧಿನಗರದಲ್ಲಿ ತಮ್ಮ ಪ್ರಚಾರ ಆರಂಭಿಸಿದ್ದಾರೆ. “ಬಿಜೆಪಿ ತಾನು ನೀಡಿದ್ದ ಭರವಸೆಗಳನ್ನು ಮತ್ತು ಜನರ ಆಕ್ಷಾಂಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ದೇಶದಲ್ಲಿ ಆಡಳಿತ ವಿರೋಧಿ ಅಲೆಯಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಾನು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚಟುವಟಿಕೆಗಳನ್ನು ನಿಭಾಯಿಸುತ್ತಿದ್ದೆ. ನಾನು ಪಕ್ಷದಲ್ಲಿ ಟಿಕೆಟ್‌ಗೆ ಬೇಡಿಕೆ ಇಟ್ಟಿರಲಿಲ್ಲ. ಪಕ್ಷವು ನನ್ನ ಆಯ್ಕೆ ಮಾಡಿ, ಗಾಂಧಿನಗರದಲ್ಲಿ ಕಣಕ್ಕಿಳಿಸಿದೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧಳಾಗಿದ್ದೇನೆ” ಎಂದು ಅವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ನಮ್ಮ ಕಾರ್ಯಕರ್ತರನ್ನು ಬೆದರಿಸಲಾಗುತ್ತಿದೆ. ಚುನಾವಣೆ ಮುಗಿದ ನಂತರ ಟಾರ್ಗೆಟ್‌ ಮಾಡುತ್ತಾರೆಂಬ ಭಯದಿಂದ ಹಲವರು ನಮ್ಮ ಸಭೆಗಳಿಗೆ ಬಾಡಿಗೆಗೆ ಜಾಗ ನೀಡುತ್ತಿಲ್ಲ. ಕೆಲವು ಕ್ಷುಲ್ಲಕ ಪ್ರಕರಣಗಳಲ್ಲಿ ನಮ್ಮ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ಠಾಣೆಗೆ ಕರೆಸುತ್ತಿದ್ದಾರೆ. ಆಡಳಿತ ಯಂತ್ರವನ್ನು ಬಳಸಿಕೊಂಡು ಬಿಜೆಪಿ ಚುನಾವಣೆ ಎದುರಿಸುತ್ತಿದೆ” ಎಂದು ಆರೋಪಿಸಿದರು.

“ಬಿಜೆಪಿಯ ಸ್ಥಳೀಯ ನಾಯಕರು ನಡೆಸುತ್ತಿರುವ ಈ ಕುತಂತ್ರಗಳ ಬಗ್ಗೆ ಅಮಿತ್ ಶಾ ಅವರಿಗೆ ತಿಳಿದಿದೆಯೇ ಎಂಬುದು ಗೊತ್ತಿಲ್ಲ. ಆದರೆ, ಬಿಜೆಪಿ ನಡೆದುಕೊಳ್ಳುತ್ತಿರುವುದು ಆ ಪಕ್ಷ ಭಯಗೊಂಡಿದೆ ಎಂಬುದನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

“ಅಮಿತ್ ಶಾ ದೇಶದ ಗೃಹ ಸಚಿವರಾಗಿರಬಹುದು. ಆದರೆ, ಅವರು ಸಾಮಾನ್ಯ ಬಿಜೆಪಿ ಕಾರ್ಯಕರ್ತರಾಗಿದ್ದ ದಿನಗಳಿಂದ ನಾವು ಅವರನ್ನು ನೋಡಿದ್ದೇವೆ. ನನ್ನ ತಂದೆ ನಾರಣಪುರದಿಂದ ಕಾಂಗ್ರೆಸ್ ಪುರಸಭೆ ಸದಸ್ಯರಾಗಿದ್ದರು. ನಾರಣಪುರದಲ್ಲಿ ಅಮಿತ್ ಶಾ ಬೆಳೆದದ್ದನ್ನು ನಾವು ನೋಡಿದ್ದೇವೆ. ನಾನು ಕೂಡ ಅವರಂತೆ ತಳಮಟ್ಟದಿಂದ ಕೆಲಸ ಮಾಡಿದ್ದೇನೆ” ಎಂದು ವಿವರಿಸಿದರು.

“ಜನರು ಮತ ಚಲಾಯಿಸುವಾಗ ಅವರು ಗೃಹ ಮಂತ್ರಿ ಅಥವಾ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತೆ ಎಂಬುದನ್ನು ನೋಡಿ, ಆಯ್ಕೆ ಮಾಡುವುದಿಲ್ಲ. ಜನರು ಅಭ್ಯರ್ಥಿಗಳಾ ನೋಡುತ್ತಾರೆ. ಅವರ ವಿರುದ್ಧ ಸ್ಪರ್ಧೆಗೆ ನನಗೆ ಯಾವ ಹಿಂಜರಿಕೆಯೂ ಇಲ್ಲ” ಎಂದು ಹೇಳಿದರು.

“ಅವರು ಅಭಿವೃದ್ಧಿ ಮಾಡಿದ್ದೇವೆಂದು ಹೇಳಿಕೊಳ್ಳುತ್ತಾರೆ. ಆದರೆ, ಬಡವರು ಇನ್ನೂ ಬಡವರಾಗುತ್ತಿದ್ದಾರೆ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ. ಹಳ್ಳಿಗಳಲ್ಲಿ ಉದ್ಯೋಗಾವಕಾಶಗಳಿಲ್ಲ. ರೈತರ ಹಿಡುವಳಿಯೂ ಕಡಿಮೆಯಾಗುತ್ತಿದೆ. ಹಳ್ಳಿಗನೊಬ್ಬ ನಗರಕ್ಕೆ ಹೋದಾಗ, ಅವರು ತೀವ್ರ ಹಣದುಬ್ಬರವನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಬಿಜೆಪಿ ಬಳಿ ಉತ್ತರವಿಲ್ಲ” ಎಂದು ಆರೋಪಿಸಿದರು.

ಗುಜರಾತ್‌ನಲ್ಲಿ 26 ಲೋಕಸಭಾ ಕ್ಷೇತ್ರಗಳಿದ್ದು, ಮೇ 7 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...