ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಸಲು ಅಡೆತಡೆಗಳಿಲ್ಲ: ಸಚಿವ ಶಿವರಾಜ್ ತಂಗಡಗಿ

Date:

Advertisements
  • ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಸಾಹಿತಿಗಳ ಸಲಹೆ ಪಡೆದ ಸಚಿವರು
  • ಸಭೆಯಲ್ಲಿ ಸುಮಾರು 170ಕ್ಕೂ ಹೆಚ್ಚು ಸಾಹಿತಿ, ರಂಗಕರ್ಮಿ, ‌ಕಲಾವಿದರು ಭಾಗಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ಯಾವುದೇ ಅಡೆತಡೆಗಳಿಲ್ಲ. ಎಲ್ಲರೊಂದಿಗೆ ಚರ್ಚೆ ಮಾಡಿ ಸಮ್ಮೇಳನದ ದಿನಾಂಕ ನಿಗದಿ ಮಾಡಲಾಗುವುದು. ಈ ಬಗ್ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಅವರ ಬಳಿ ಮಾತನಾಡಿದ್ದೇನೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಸಾಹಿತಿ, ರಂಗಕರ್ಮಿ, ಕಲಾವಿದರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

“ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಜೆಟ್ ನಲ್ಲಿ ಕಡಿಮೆ ಅನುದಾನ ನೀಡಿದ್ದು, ಕಾರ‍್ಯಕ್ರಮ ಆಯೋಜನೆಗೆ ಹಣವಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾರ್ಯಕ್ರಮ ನಡೆಸಲು ಹಣಕಾಸಿನ ಕೊರತೆ ಇಲ್ಲ. ಹೆಚ್ಚಿನ ಅನುದಾನದ ಅಗತ್ಯ ಬಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು” ಎಂದರು.

Advertisements

“ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ” ಎಂದು ಹೇಳಿದರು.

ಕಂದಾಯ ವಿಭಾಗವಾರು ಸಭೆ

“ನ.1ಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಸುವ ಬಗ್ಗೆ ಆಯವ್ಯಯದಲ್ಲಿ ಈಗಾಗಲೇ ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗವಾರು ಸಾಹಿತಿಗಳ ಸಭೆ ಆಯೋಜನೆ ಮಾಡಲಾಗುವುದು. ಮೊದಲ ಹಂತದಲ್ಲಿ ಬೆಂಗಳೂರು ವಿಭಾಗದಲ್ಲಿ ಸಾಹಿತಿಗಳ ಸಭೆ ನಡೆಸಲಾಗಿದೆ. ಆ.22ಕ್ಕೆ ಬೆಳಗಾವಿ, ಆ.25 ಮೈಸೂರು ಹಾಗೂ 28ರಂದು ಕಲಬುರಗಿಯಲ್ಲಿ ಸಾಹಿತಿ, ರಂಗಕರ್ಮಿ ಹಾಗೂ ಹಿರಿಯ ಕಲಾವಿದರ ಸಭೆ ನಡೆಸಲಾಗುವುದು” ಎಂದು ತಿಳಿಸಿದರು.

“ಸಭೆಯಲ್ಲಿ ಕರ್ನಾಟಕದ ಪರಂಪರೆ, ಕನ್ನಡದ ಇತಿಹಾಸ ಹಾಗೂ ಸಂಸ್ಕೃತಿ ಬಿಂಬಿಸುವ ಹಿನ್ನೆಲೆಯಲ್ಲಿ ಕನ್ನಡರಥ ರಾಜ್ಯವಿಡೀ ಸಂಚಾರ ಮಾಡುವುದು, ಶಾಲಾ ಮತ್ತು ಕಾಲೇಜುಗಳಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಆಯೋಜನೆ. ರಾಜ್ಯದ ಸಿದ್ಧಪುರದಲ್ಲಿರುವ ಏಕೈಕ ಭುವನೇಶ್ವರಿ ದೇವಾಲಯವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವುದು. ಕನ್ನಡದ ಮಾಹಿತಿಯನ್ನೊಳಗೊಂಡ ಸಂಚಾರಿ ವಾಹನ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಭಾಗಿಯಾಗಿದ್ದ ಗಣ್ಯರ ಸನ್ಮಾನ ಸೇರಿದಂತೆ ಹೀಗೆ ಹಲವು ಸಲಹೆಗಳು ಬಂದಿವೆ” ಎಂದರು.

“ಸಾಹಿತಿಗಳಾದ ಪ್ರೊ. ಎಸ್. ಸಿದ್ದರಾಮಯ್ಯ, ಮುಖ್ಯಮಂತ್ರಿ ಚಂದ್ರು, ಮನುಬಳಿಗಾರ್, ಹಂಸಲೇಖ, ಮಾಜಿ ಸಚಿವರಾದ ಉಮಾಶ್ರೀ, ಜಯಮಾಲಾ ಸೇರಿದಂತೆ ಪ್ರತಿಯೊಬ್ಬರು ಸಲಹೆ ನೀಡಿದ್ದಾರೆ. ಇನ್ನು ಉಳಿದ ಮೂರು ವಿಭಾಗಗಳಲ್ಲಿ ಸಭೆ ನಡೆಸಿ, ಎಲ್ಲರ ಸಲಹೆ ಕ್ರೋಡೀಕರಣ ಮಾಡಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಸಾಹಿಗಳಾದ ಚಂದ್ರಶೇಖರ್ ಕಂಬಾರ, ಪ್ರೊ. ಎಸ್. ಸಿದ್ದರಾಮಯ್ಯ, ಬಿ.ಟಿ. ಲಲಿತಾನಾಯಕ್, ಮನುಬಳಿಗಾರ್, ನರಹಳ್ಳಿ ಬಾಲಕೃಷ್ಣ, ಮುಖ್ಯಮಂತ್ರಿ ಚಂದ್ರು, ಮಾಜಿ ಸಚಿವರಾದ ಉಮಾಶ್ರೀ, ಜಯಮಾಲಾ, ಚಿತ್ರ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ಟಿ.ಎನ್. ಸೀತಾರಾಮ್, ಕಸಪಾ ಅಧ್ಯಕ್ಷ ಮಹೇಶ್ ಜೋಶಿ, ರಂಗಕರ್ಮಿಗಳಾದ ಕಪ್ಪಣ್ಣ, ನಾಗರಾಜ್ ಮೂರ್ತಿ, ಪ್ರೊ. ಕೆ.ಇ. ರಾಧಾಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶ್ವನಾಥ್ ಹಿರೇಮಠ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X