ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ: ವೇದಿಕೆಯಲ್ಲಿ ವಿಪಕ್ಷ ನಾಯಕ ಅಶೋಕ್‌ಗಿಲ್ಲ ಆಹ್ವಾನ, ಪ್ರಿಯಾಂಕ್ ವ್ಯಂಗ್ಯ

Date:

ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಹಲವು ನಾಯಕರುಗಳಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಆದರೆ ವಿಪಕ್ಷ ನಾಯಕ, ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ್ ಅವರಿಗೆ ವೇದಿಕೆಯಲ್ಲಿ ಸ್ಥಾನವೇ ನೀಡಿಲ್ಲ. ಈ ವಿಚಾರದಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಅವರು, “ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಸ್ವಪಕ್ಷದವರು ವಿರೋಧಿಸುವ ನಾಯಕನಾಗಿದ್ದಾರೆಯೇ! ಬೆಂಗಳೂರು ಮೆಟ್ರೋ ಫೇಸ್ 2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೇ ವೇದಿಕೆಯಲ್ಲಿ ಜಾಗ ನೀಡುವುದನ್ನು ನಿರಾಕರಿಸಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಇದನ್ನು ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆಗಸ್ಟ್ 10ರಂದು ಪ್ರಧಾನಿ ಚಾಲನೆ

“ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ? ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ? ಮೊದಲ ಬಾರಿ ಶಾಸಕರಾಗಿರುವ ಹಾಗೂ ಬೆಂಗಳೂರಿನ ಶಾಸಕರಲ್ಲದಿರುವ ಬಿ ವೈ ವಿಜಯೇಂದ್ರ ಅವರಿಗೆ ಸಿಕ್ಕ ಅವಕಾಶ ಅಶೋಕ್ ಅವರಿಗಿಲ್ಲ” ಎಂದು ಪ್ರಿಯಾಂಕ್ ಉಲ್ಲೇಖಿಸಿದ್ದಾರೆ.

ಹಾಗೆಯೇ, “ಮಾನ್ಯ ಅಶೋಕ್ ಅವರೇ, ತಾವು ಬೆಂಗಳೂರು ಶಾಸಕರಾಗಿದ್ದರೂ, ವಿರೋಧ ಪಕ್ಷದ ನಾಯಕನಾಗಿದ್ದರೂ, ಬಿಜೆಪಿಯ ಹಿರಿಯ ನಾಯಕ ಎನಿಸಿಕೊಂಡಿದ್ದರೂ, ಹಲವು ಬಾರಿ ಆಯ್ಕೆ ಆಗಿದ್ದರೂ ನಿಮ್ಮನ್ನು ಕಡೆಗಣಿಸಲಾಗಿದೆ ಎಂದರೆ ನಿಮ್ಮ ಕುರ್ಚಿ ಕಿತ್ತುಕೊಳ್ಳುವ ಸಂದೇಶ ಬಂದಿದೆ ಎಂದು ಭಾವಿಸೋಣವೇ” ಎಂದು ಪ್ರಶ್ನಿಸಿದ್ದಾರೆ.

“ಯಾರು ಯಾರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿಲ್ಲ ಎಂದು ತಲೆಕೆಡಿಸಿಕೊಂಡು ಕುಳಿತಿದ್ದ ತಮಗೆ ಈಗ ‘ನನಗೇಕೆ ಆಹ್ವಾನವಿಲ್ಲ’ ಎಂದು ತಲೆಕೆಡಿಸಿಕೊಂಡು ಕೂರುವ ಸಮಯ ಬಂದಿದೆ. ಇನ್ನಾದರೂ ಇತರರ ಮನೆ ಇಣುಕುವ ಬದಲು ನಿಮ್ಮ ಬುಡ ಅಲ್ಲಾಡುತ್ತಿರುವುದನ್ನು ಗಮನಿಸಿದರೆ ಒಳ್ಳೆಯದು” ಎಂದು ತಿಳಿಸಿದ್ದಾರೆ.

ಈ ಹಿಂದೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಿಷ್ಠ ಪಕ್ಷ ಒಂದು ಟ್ವೀಟ್ ಮಾಡಿಯೂ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿಲ್ಲ. ಒಬ್ಬರ ಮುಖ ಒಬ್ಬರು ನೋಡಲಾಗದ ಈ ನಾಯಕರು ರಾಜ್ಯವನ್ನು ಹೇಗೆ ಮುನ್ನಡೆಸುತ್ತಾರೆ ಎಂದು ಆರ್ ಅಶೋಕ್ ಪ್ರಶ್ನಿಸಿದ್ದರು. ಆದರೆ ಈಗ ವಿಪಕ್ಷ ನಾಯಕರಾದರೂ ಅಶೋಕ್ ಅವರಿಗೆ ಸ್ಥಾನ ನೀಡದಿರುವುದನ್ನು ಕಾಂಗ್ರೆಸ್ ಅಶೋಕ್ ಟೀಕೆಗೆ ಬಳಸಿಕೊಳ್ಳುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಕಲಿ ಔಷಧಿ ದಂಧೆಯ ಕಿಂಗ್‌ ಪಿನ್ ಪ್ರಶಾಂತ್‌ಗೆ 14 ದಿನ ನ್ಯಾಯಾಂಗ ಬಂಧನ

ನಕಲಿ ಔಷಧಿ ತಯಾರಿಕೆ ಮತ್ತು ಸರಬರಾಜು ದಂಧೆಯ ಮುಖ್ಯ ಸೂತ್ರಧಾರ (ಕಿಂಗ್...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ; ಏನಿದು ಜಿಎಸ್‌ಟಿ ಕೌನ್ಸಿಲ್?

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ...

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...