ಅಯೋಧ್ಯೆಯ ಬೀದಿಗಳಲ್ಲಿ ಇನ್ಮುಂದೆ ಕರ್ಫ್ಯೂ, ಗುಂಡಿನ ಸದ್ದು ಕೇಳುವುದಿಲ್ಲ: ಯೋಗಿ ಆದಿತ್ಯನಾಥ್

Date:

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿಂದು ಪ್ರತಿಷ್ಠಾಪನೆಗೊಂಡ ರಾಮಲಲ್ಲಾದ ಸಮಾರಂಭದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 1990ರ ದಶಕದಲ್ಲಿ ಮುಲಾಯಂ ಸಿಂಗ್ ಸರ್ಕಾರ ಇದ್ದ ವೇಳೆ ಕರ ಸೇವಕರ ಮೇಲೆ ನಡೆದ ಗೋಲಿಬಾರ್ ಅನ್ನು ಪರೋಕ್ಷವಾಗಿ ಉಲ್ಲೇಖಿಸುವ ಮೂಲಕ, “ಅಯೋಧ್ಯೆಯ ಬೀದಿಗಳಲ್ಲಿ ಇನ್ಮುಂದೆ ಕರ್ಫ್ಯೂ, ಗುಂಡಿನ ಸದ್ದು ಕೇಳುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

- Advertisement -

ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೂ ಮುನ್ನ ಮಾತನಾಡಿದ ಯೋಗಿ ಆದಿತ್ಯನಾಥ್, “ಅಯೋಧ್ಯೆಯ ಬೀದಿಗಳು ಇನ್ನು ಮುಂದೆ ಗುಂಡಿನ ಸದ್ದು ಅಥವಾ ಕರ್ಫ್ಯೂಗೆ ಸಾಕ್ಷಿಯಾಗುವುದಿಲ್ಲ. ಅಯೋಧ್ಯೆಯ ಪರಿಕ್ರಮದಲ್ಲಿ ಇನ್ನು ಮುಂದೆ ಯಾರೂ ಅಡ್ಡಿಯಾಗುವುದಿಲ್ಲ. ಬೀದಿ ಬೀದಿಗಳಲ್ಲಿ ದೀಪೋತ್ಸವ ಮತ್ತು ರಾಮೋತ್ಸವ ನಡೆಯಲಿದೆ. ರಾಮ ಕೀರ್ತನೆಗಳು ಗಲ್ಲಿಗಳಲ್ಲಿ ಪ್ರತಿಧ್ವನಿಸುತ್ತವೆ. ರಾಮ ಲಲ್ಲಾ ಪ್ರತಿಷ್ಠಾಪನೆಯು ರಾಮರಾಜ್ಯದ ಘೋಷಣೆಯನ್ನು ಸಹ ಸೂಚಿಸುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಮಮಂದಿರದಲ್ಲಿನ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯು 500 ವರ್ಷಗಳ ಸುದೀರ್ಘ ಕಾಯುವಿಕೆ ಬಳಿಕ ದೇಶದ ಭಾವನಾತ್ಮಕ ಗಳಿಗೆಯಾಗಿದೆ. ದೇವಸ್ಥಾನವನ್ನು ಎಲ್ಲಿ ನಾವು ನಿರ್ಮಿಸಲು ಪಣ ತೊಟ್ಟಿದ್ದೇವೋ, ಅಲ್ಲಿಯೇ ಅದನ್ನು ಕಟ್ಟಲಾಗಿದೆ” ಎಂದು ಉತ್ತರ ಪ್ರದೇಶ ಸಿಎಂ ಯೋಗಿ ತಿಳಿಸಿದರು.

“ಭಾರತವು ಈ ದಿನಕ್ಕಾಗಿ ಅನೇಕ ವರ್ಷಗಳಿಂದ ಕಾದಿತ್ತು. ರಾಮಮಂದಿರದ 500 ವರ್ಷಗಳ ಸುದೀರ್ಘ ಬಯಕೆಯನ್ನು ಪ್ರಧಾನಿ ಮೋದಿ ಈಡೇರಿಸಿದ್ದಾರೆ. ನನ್ನ ಹೃದಯದಲ್ಲಿರುವ ಕೆಲವು ಭಾವನೆಗಳನ್ನು ವ್ಯಕ್ತಪಡಿಸಲು ನನ್ನಲ್ಲಿ ಪದಗಳಿಲ್ಲ. ಪ್ರತಿಯೊಬ್ಬರೂ ಭಾವುಕ ಹಾಗೂ ಸಂತುಷ್ಟರಾಗಿದ್ದಾರೆ. ಈ ಐತಿಹಾಸಿಕ ಕ್ಷಣದಲ್ಲಿ, ದೇಶದ ಪ್ರತಿ ನಗರ ಮತ್ತು ಹಳ್ಳಿಯೂ ಅಯೋಧ್ಯೆಯಾಗಿ ಬದಲಾಗಿದೆ ಮತ್ತು ಪ್ರತಿ ದಾರಿಯೂ ರಾಮ ಜನ್ಮಭೂಮಿ ಕಡೆಗೆ ಸಾಗುವಂತೆ ಕಾಣಿಸುತ್ತಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಧರ್ಮ, ದೇವರನ್ನು ಮುಂದಿಟ್ಟು ರಾಜಕಾರಣಿಗಳು ಪ್ರಶ್ನಾತೀತರಾಗುವುದು ನಾಡಿನ ಭವಿಷ್ಯಕ್ಕೆ ಅಪಾಯಕಾರಿ: ನಟ ಕಿಶೋರ್

“ದೊಡ್ಡ ಸಮುದಾಯವೊಂದು ತಮ್ಮ ದೇವರು ಸರಿಯಾದ ಸ್ಥಳದಲ್ಲಿ ನೆಲೆಯೂರಬೇಕು ಎಂದು ಹೋರಾಟ ನಡೆಸಬೇಕಾದ ಸ್ಥಿತಿ ಎದುರಾಗಿದ್ದು ಇತಿಹಾಸದಲ್ಲಿ ಇದೇ ಮೊದಲು. ಇಂದು ಇಡೀ ದೇಶವನ್ನು ರಾಮ ಮಾಯೆ ಆವರಿಸಿದೆ. ನಾವು ತ್ರೇತಾಯುಗಕ್ಕೆ ಕಾಲಿಟ್ಟಂತೆ ಭಾಸವಾಗುತ್ತಿದೆ. ದೀರ್ಘ ಸಮಯದ ಕನಸನ್ನು ನನಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಧಾನಿ ಮೋದಿ ಜಗತ್ತಿನ ಅತ್ಯಂತ ಜನಪ್ರಿಯ ನಾಯಕ” ಎಂದು ಮೋದಿಯವರನ್ನು ಹೊಗಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...