ಕಾವೇರಿಗಾಗಿ ಬಂದ್‌ ಮಾಡುವ ಅಗತ್ಯವಿಲ್ಲ, ಅಹಿತಕರ ಘಟನೆಗಳಾದರೆ ಕ್ರಮ: ಗೃಹಸಚಿವ ಪರಮೇಶ್ವರ್

Date:

  • ‘ಕರ್ನಾಟಕ ಬಂದ್‌ ಮಾಡದಂತೆ ಸಂಘಟನೆಗಳಿಗೆ ಮನವಿ’
  • ‘ಬಂದ್‌ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು’

ಕಾವೇರಿ ವಿಚಾರದಲ್ಲಿ ಬಂದ್‌ ಮಾಡುವ ಅಗತ್ಯವಿಲ್ಲ. ನ್ಯಾಯಾಲಯ ಕೂಡಾ‌ ಬಂದ್ ಮಾಡಬಾರದು ಎಂದಿದೆ. ಪ್ರತಿಭಟನೆ ಮಾಡಬಹುದು, ಪ್ರತಿಭಟನೆ ಅವರ ಹಕ್ಕು ಎಂದು ಗೃಹಮಂತ್ರಿ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, “ಕರ್ನಾಟಕ ಬಂದ್‌ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ಕರ್ನಾಟಕ ಬಂದ್‌ಗೆ ಬೆಂಬಲ ಕೊಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಬಂದ್‌ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಇಂತಹ ಸಂದರ್ಭದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೋಗಬಾರದು. ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದರೆ ಪೊಲೀಸರು ಸೂಕ್ತವಾದ ಕ್ರಮ ಕೈಗೊಳ್ಳುತ್ತಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಃಕರಣವಿರುವವರ ನಿದ್ದೆಗೆಡಿಸುವ ಮೂರು ಸುದ್ದಿಗಳು

ಬಂದ್ ನಿಂದ 2000 ಕೋಟಿ ನಷ್ಟ

“ಮಂಗಳವಾರ ನಡೆದ ಒಂದು ದಿನದ ಬಂದ್ ನಿಂದಾಗಿ 2000 ಕೋಟಿ ನಷ್ಟವಾಗಿದೆ. ಇವತ್ತು ರಜೆ ಇದೆ. ನಾಳೆಯು ಬಂದ್ ಮಾಡಿದರೆ ಮತ್ತಷ್ಟು ಸಮಸ್ಯೆ ಆಗಲಿದೆ. ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಬಂದ್ ಮಾಡುತ್ತಿದ್ದಾರಾ ಅಥವಾ ಬೇರೆಯವರು ಅವರ ಮೇಲೆ ಒತ್ತಡ ಹೇರುತ್ತಿದ್ದಾರಾ ಗೊತ್ತಿಲ್ಲ” ಎಂದು ಪ್ರತಿಪಕ್ಷಗಳ ವಿರುದ್ಧ ಕುಟುಕಿದರು.

ಅನುಕೂಲ ಸಿಂಧು ರಾಜಕಾರಣ

“ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾದ ನಂತರ ಸಾಕಷ್ಟು ಜನ ಕಾಂಗ್ರೆಸ್‌ ಕಡೆ ಮುಖ ಮಾಡುತ್ತಿದ್ದಾರೆ. ಈಗ ತತ್ವ ಸಿದ್ದಾಂತ ಎಂಬುದು ಇಲ್ಲ. ಎಲ್ಲ ಅನುಕೂಲ ಸಿಂಧು ರಾಜಕಾರಣ. ಬೇರೆ ಬೇರೆ ಕಡೆಗಳಿಂದ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಕೆಲವರು ಆಸಕ್ತಿ ತೋರಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡುತ್ತಿದ್ದೇವೆ” ಎಂದು ಇದೇ ವೇಳೆ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...

ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೂಡ ಮರ್ಯಾದೆ ಕೊಡುವೆ: ಡಿ.ಕೆ. ಶಿವಕುಮಾರ್

"ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ...

ಪ್ರಧಾನಿ ಮೋದಿ ಶ್ರೀಮಂತ ಉದ್ಯಮಿಗಳ ಸಾಧನ: ರಾಹುಲ್ ಗಾಂಧಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ...

ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ; ಡಿಕೆ ಶಿವಕುಮಾರ್‌ಗೆ ಕುಮಾರಸ್ವಾಮಿ ಪ್ರತಿ ಸವಾಲು

"ಮಿಸ್ಟರ್​ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ...