ಜನರ ಆಶೀರ್ವಾದ ಇರೋವರೆಗೂ ನಮ್ಮ ಸರ್ಕಾರವನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Date:

ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

- Advertisement -

‌ಅವರು ಇಂದು (ಅ.3) ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

“ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ. ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ” ಎಂದರು.

“ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ ಇದೆ. ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲಾ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ” ಎಂದರು.

“ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಸರಾಗೆ ಚಾಲನೆ | ಚುನಾಯಿತ ಸರ್ಕಾರಗಳನ್ನು ಉರುಳಿಸುವ ದುರ್ಬುದ್ಧಿ ಬಾರದಿರಲಿ; ಚಾಮುಂಡಿ ದೇವಿಗೆ ಹಂಪನಾ ಪ್ರಾರ್ಥನೆ

“ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲ ಐದು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ” ಎಂದು ಹೇಳಿದರು.

“ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ” ಎಂದು ತಿಳಿಸಿದರು.

“ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ರೂ. 2ಸಾವಿರ ಮೊತ್ತ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ” ಎಂದು ಹೇಳಿದರು.

“ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ 99 ಶೇ ಯಾಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ. ಮಳೆ ಬೆಳೆ ಆದರೆ ಮಾತ್ರ ಜನರು ಸುಖ ಶಾಂತಿಯಿಂದ ಬದುಕಲು ಸಾಧ್ಯ” ಎಂದರು.

ಜನರ ಹಬ್ಬವಾಗಲಿ

“ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಹೇಳಿದರು.

“ಈ ಬಾರಿ ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಈ ಅವಕಾಶ ದೊರೆಯಬೇಕಿತ್ತು. ಹಂ.ಪ. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಅವರು” ಎಂದರು.

“ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

35 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ‘ಋತು ತಾರೆ’ ಯೋಜನೆ; ನಟಿ ರಮ್ಯಾ ರಾಯಭಾರಿ!

ರಾಜ್ಯದಲ್ಲಿ 35 ವರ್ಷ ಮೇಲ್ಪಟ್ಟ ಮಧ್ಯವಯಸ್ಸಿನ ಮಹಿಳೆಯರ ಸಮಗ್ರ ಆರೋಗ್ಯ ರಕ್ಷಣೆಗೆ...

ಮೈಸೂರಿಗೆ ಹಸಿರು ಹೊದಿಕೆ: 2 ಲಕ್ಷ ಗಿಡ ಬೆಳೆಸುವ ಗುರಿ; ‘ಭಾರತ್ ವನ್’ ಯೋಜನೆಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿಯಲ್ಲಿ ಹಸಿರು ಹೊದಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಮತ್ತು ನಗರ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...