ಜೆಡಿಎಸ್ ಜೊತೆ ಹೊಂದಾಣಿಕೆಗೆ ಯಾವುದೇ ಪ್ರಸ್ತಾವ ಪಕ್ಷದ ಮುಂದಿಲ್ಲ: ನಳಿನ್‌ ಕುಮಾರ್‌ ಕಟೀಲ್‌

Date:

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ. ಲೋಕಸಭಾ ಚುನಾವಣೆಯ ತಯಾರಿ ಮಾಡಿದ್ದೇವೆಯೇ ಹೊರತು ಬೇರೇನೂ ಪ್ರಕ್ರಿಯೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟಪಡಿಸಿದರು.

- Advertisement -

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಅನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು ಹತ್ತಾರು ಅಮಾಯಕರ ಸಾವಿನ ಪ್ರಕರಣಗಳೇ ಸಾಕ್ಷಿ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಜೈನ ಮುನಿ, ಉದ್ಯಮಿ, ಸಂಘಟನೆಯ ಕಾರ್ಯಕರ್ತ, ಕಾರ್ಮಿಕ ಹೀಗೆ ಸಾಲು ಸಾಲು ಹತ್ಯೆ ನಡೆಯುತ್ತಿದೆ. ರಾಜ್ಯದಲ್ಲಿ ಸರಣಿ ಹತ್ಯೆಗಳು ನಡೆಯುತ್ತಿದ್ದರೂ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಈ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ನಾಯಕರೇ ತೀರ್ಮಾನಿಸಲಿದ್ದಾರೆ: ಕಳೆದ ಬಾರಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರ ವಿಚಾರದ ಕುರಿತು ರಾಷ್ಟ್ರೀಯ ನಾಯಕರ ಜತೆ ಚರ್ಚೆಗಳಾಗಿವೆ. ಚರ್ಚೆಯ ತೀರ್ಮಾನಗಳನ್ನು ರಾಷ್ಟ್ರೀಯ ನಾಯಕರೇ ನೀಡಲಿದ್ದಾರೆ. ಬಿಜೆಪಿ ಯಾವುದೇ ವೈಯಕ್ತಿಕ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಬಯಸುವುದಿಲ್ಲ ಎಂದು ನಳಿನ್ ಕುಮಾ‌ರ್ ಕಟೀಲ್‌ ಹೇಳಿದರು.

ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇರಲಿಲ್ಲ, ಎಲ್ಲ ನಾಯಕರು ಒಟ್ಟಾಗಿಯೇ ಕೆಲಸ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸಿದ ಕಾರಣದಿಂದ ಫಲಿತಾಂಶದಲ್ಲಿ ವ್ಯತ್ಯಾಸಗಳಾಗಿವೆ. ಅವರು ಬಿಜೆಪಿಯ ಹೆಸರಿನಲ್ಲಿ ಸ್ಪರ್ಧಿಸಲಿಲ್ಲ. ಪಕ್ಷದಲ್ಲಿ ಯಾರು ಇರಬೇಕು, ಯಾರು ಬರಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಿ ಪಕ್ಷದ ಗೆಲುವಿಗಾಗಿ ಒಗ್ಗಟ್ಟಾಗಿ ಶ್ರಮಿಸಲಾಗುವುದು ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...