ಒಳಮೀಸಲಾತಿ ಜಾರಿಯಾಗುವವರೆಗೂ ನೇಮಕಾತಿ ಬೇಡ: ಸಿಎಂಗೆ ಮುನಿಯಪ್ಪ ನಿಯೋಗ ಮನವಿ

Date:

Advertisements

ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿ ಆಗಬಾರದು, ಜಾರಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ ಎಂದು ಸಚಿವ ಕೆ ಎಚ್‌ ಮುನಿಯಪ್ಪ ತಿಳಿಸಿದರು.

ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಒದಗಿಸುವ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಸಭೆ ನಡೆಯಿತು.

ಸಬೆಯಲ್ಲಿ ಸಚಿವರಾದ ಕೆ.ಎಚ್.ಮುನಿಯಪ್ಪ, ಆರ್‌ ಬಿ ತಿಮ್ಮಾಪುರ, ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಮಾಜಿ ಸಚಿವ ಶಿವಣ್ಣ, ಎಚ್.ಆಂಜನೇಯ, ವಿಧಾನ‌ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಶಾಸಕರಾದ ಬಸಂತಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮತ್ತಿತರರು ಉಪಸ್ಥಿತರಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ಸಭೆಯ ಬಳಿಕ ಮಾತನಾಡಿದ ಕೆ ಎ‌ಚ್‌ ಮುನಿಯಪ್ಪ, “ಯಾವುದೇ ನೇಮಕಾತಿ ಮಾಡದಿರಲು ಮುಖ್ಯಮಂತ್ರಿಗಳು ಸ್ಪಂದಿಸಿದ್ದು, ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ” ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿ ಕುರಿತು ಚರ್ಚೆ ನಡೆಸಿ ಅಂತಿಮವಾಗಿ ಹೈಕಮಾಂಡ್‌ ಒಪ್ಪಿಗೆ ಪಡೆದು ಜಾರಿಗೊಳಿಸಲು ಬದ್ದರಾಗಿದ್ದಾರೆ” ಎಂದು ತಿಳಿಸಿದರು.

“ಸುಪ್ರೀಂಕೋರ್ಟ್‌ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಮುಖ್ಯಮಂತ್ರಿಗಳೊಂದಿಗೆ ನಮ್ಮ ಸಮುದಾಯದ ಎಲ್ಲ ಮಂತ್ರಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು ಸಭೆ ನಡೆಸಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X