ಮುಖ್ಯಮಂತ್ರಿ ಆಗಲು ಆತುರವಿಲ್ಲ: ಡಿ.ಕೆ ಶಿವಕುಮಾರ್

Date:

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುದ್ದಿಗಳು ಮತ್ತೆ ಮುನ್ನೆಲೆಗೆ ಬಂದಿವೆ. ಮಾಧ್ಯಮಗಳು ನಾಯಕತ್ವ ಬದಲಾವಣೆ ಬಗ್ಗೆ ನಿರಂತರ ಸುದ್ದಿ ಮಾಡುತ್ತಿವೆ. ವರದಿ, ಗೊಂದಲ, ವದಂತಿಗಳಿಗೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ‘ಮುಖ್ಯಮಂತ್ರಿ ಆಗಲು ಆತುರವಿಲ್ಲ’ ಎಂದು ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೆಲವು ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುತ್ತಿವೆ. ವಿವಾದ ಸೃಷ್ಟಿಸಲು ಪ್ರಯತ್ನಿಸುತ್ತಿವೆ. ‘ನಾನು ಮುಖ್ಯಮಂತ್ರಿಯಾಗುವ ಸಮಯ ಬಂದಿದೆ’ ಎಂಬುದಾಗಿ ಯಾವತ್ತೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಇಷ್ಟಬಂದಂತೆ ತಿರುಚಿ ಪ್ರಸಾರ ಮಾಡಿದರೆ, ಮಾನನಷ್ಟ ಮೊಕದ್ದಮೆ ಹೂಡುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಾನು ಸಾರ್ವಜನಿಕ ಕುಂದುಕೊರತೆ ಆಲಿಸಲು ಲಾಲ್‌ಬಾಗ್‌ಗೆ ತರಳಿದ್ದಾಗ, ವ್ಯಕ್ತಿಯೊಬ್ಬರು ನನ್ನನ್ನು ಮುಖ್ಯಮಂತ್ರಿಯಾಗಿ ನೋಡುವ ಬಯಕ ವ್ಯಕ್ತಪಡಿಸಿದ್ದರು. ‘”ಸರ್, ನೀವು ಪಕ್ಷದ ಏಳಿಗೆಗಾಗಿ 40 ವರ್ಷಗಳಿಂದ ಶ್ರಮಿಸಿದ್ದೀರಿ. ನೀವು ಮುಖ್ಯಮಂತ್ರಿಯಾಗುವ ಸಮಯ ಹತ್ತಿರ ಬಂದಿದೆಯೇ’ ಎಂದವರು ಪ್ರಶ್ನಿಸಿದರು. ಆದರೆ, ಆ ಸಂವಾದವನ್ನು ವರದಿ ಮಾಡಿದ ಮಾಧ್ಯಮಗಳು ಸಂದರ್ಭವನ್ನು ತಿರುಚಿವೆ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಅಲೆಮಾರಿಗಳ ಆರ್ತನಾದಕ್ಕೆ ಹೃದಯ ತೆರೆಯಲಿ ದೆಹಲಿ

“ನಾನು ಮುಖ್ಯಮಂತ್ರಿ ಆಗುವ ಸಮಯ ಬಂದಿದೆ ಎಂಬ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಅದು ಕೇವಲ ನಾಗರಿಕ ವ್ಯಕ್ತಪಡಿಸಿದ ಬಯಕೆ. ಸುದ್ದಿಯನ್ನು ತಿರುಚಬೇಡಿ ಮತ್ತು ವಿವಾದವನ್ನು ಸೃಷ್ಟಿಸಬೇಡಿ” ಎಂದು ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ್ದಾರೆ.

“ಮುಖ್ಯಮಂತ್ರಿಯಾಗಲು ನಾನು ಆತುರಪಡುತ್ತಿಲ್ಲ. ನಾನು ರಾಜಕೀಯಕ್ಕೆ ಬಂದಿರುವುದು ಜನರ ಸೇವೆ ಮಾಡಲು, ರಾಜಕೀಯ ಮಾಡಲು ಅಲ್ಲ. ನಾನು ಹಗಲಿರುಳು ಜನರ ಸೇವೆ ಮಾಡಲು ಶ್ರಮಿಸುತ್ತಿದ್ದೇನೆ. ನೀವು ಈ ರೀತಿ ಸುದ್ದಿಯನ್ನು ತಿರುಚಲು ಹೋದರೆ, ನಾನು ನಿಮಗೆ ಸಹಕರಿಸುವುದಿಲ್ಲ. ಪತ್ರಿಕಾಗೋಷ್ಠಿಗಳು ಮತ್ತು ಇತರ ಕಾರ್ಯಕ್ರಮಗಳಿಗೆ ನಾನು ನಿಮ್ಮನ್ನು ಆಹ್ವಾನಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...