ಜಾಹೀರಾತಿನಲ್ಲಿ ಮತ ಯಾಚನೆ ಮಾಡಿಲ್ಲ, ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲ: ಡಿ ಕೆ ಶಿವಕುಮಾರ್

Date:

  • ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಜಾಹೀರಾತಿನಲ್ಲಿ ತಿಳಿಸಿಲ್ಲ
  • ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ: ಡಿಕೆಶಿ

ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್  ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ತೆಲಂಗಾಣದ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತಿನ ವಿಚಾರವಾಗಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಜಾಹೀರಾತಿನಲ್ಲಿ ಸರ್ಕಾರದ ಕೆಲಸದ ಬಗ್ಗೆ ಮಾಹಿತಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ಅಥವಾ ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಜಾಹೀರಾತಿನಲ್ಲಿ ತಿಳಿಸಿಲ್ಲ. ಇದು ಉಲ್ಲಂಘನೆ ಹೇಗೆ ಆಗುತ್ತದೆ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ ಎಂದು ಅವರು ಅಲ್ಲಿ ಪ್ರಚಾರ ಮಾಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯ ಪಡೆದಿಲ್ಲ: ಸಿದ್ದರಾಮಯ್ಯ

“ನಾವು ಪತ್ರಿಕೆ ಹಾಗೂ ಮ್ಯಾಗಜಿನ್ ಗಳಲ್ಲಿ ನೀಡುವ ಜಾಹೀರಾತು ಕೆಲವೊಮ್ಮೆ ತೆಲಂಗಾಣ, ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಗೂ ಹೋಗುತ್ತದೆ. ನಾವು ಮತ ಯಾಚನೆ ಮಾಡಿದ್ದರೆ ಆಗ ನಿಯಮ ಉಲ್ಲಂಘನೆ ಆಗುತ್ತಿತ್ತು. ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ” ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ಸಭೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಈಗಾಗಲೇ ಎರಡು ಮೂರು ಸುತ್ತಿನ ಸಭೆಗಳು ನಡೆದಿವೆ. ಇಂದು ಕೂಡ ಸಭೆ ಮಾಡಿ ಪಟ್ಟಿಯನ್ನು ದೆಹಲಿಗೆ ರವಾನಿಸುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...