ಮಥುರಾ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Date:

ಉತ್ತರ ಪ್ರದೇಶದ ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ ಎಂದಿರುವ ಸುಪ್ರೀಂ ಕೋರ್ಟ್‌, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಆ ಮೂಲಕ ಬಲಪಂಥೀಯ ಸಂಘಟನೆಗಳ ಹೋರಾಟಕ್ಕೆ ಹಿನ್ನಡೆಯುಂಟಾಗಿದೆ.

- Advertisement -

ಉತ್ತರ ಪ್ರದೇಶದ ಮಥುರಾದಲ್ಲಿರುವ 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಕಮಿಷನರ್ ಓರ್ವರನ್ನು ನೇಮಿಸುವಂತೆ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಡಿಸೆಂಬರ್ 14ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ ರೀತಿಯಲ್ಲಿಯೇ ಹೈಕೋರ್ಟ್, ಕಳೆದ ತಿಂಗಳು ನ್ಯಾಯಾಲಯ ನೇಮಿಸಿದ ಮತ್ತು ಮೇಲ್ವಿಚಾರಣೆಯ ವಕೀಲ ಕಮಿಷನರ್ ಸಮೀಕ್ಷೆಗೆ ತನ್ನ ಒಪ್ಪಿಗೆ ನೀಡಿತ್ತು.

ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಹೇಳಿಕೊಂಡು, ಸಮೀಕ್ಷೆಗೆ ಆಗ್ರಹಿಸಿ ಒತ್ತಾಯಿಸಿದ್ದವು. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸ್ಥಳೀಯ ನ್ಯಾಯಾಲಯವು ಈ ಬೇಡಿಕೆಯನ್ನು ಅಂಗೀಕರಿಸಿತ್ತು. ಆದರೆ ಮಸೀದಿಯ ಕಡೆಯವರು ಹೈಕೋರ್ಟ್‌ನಲ್ಲಿ ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು.

ವಿವಾದಿತ 13.37 ಎಕರೆ ಜಮೀನಿನ ಸಂಪೂರ್ಣ ಮಾಲೀಕತ್ವಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಯು ಮಥುರಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಶತಮಾನಗಳಷ್ಟು ಹಳೆಯದಾದ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದರು. ಇದು ಮೊಘಲ್ ಚಕ್ರವರ್ತಿ ಔರಂಗಜೇಬನ ಕಾಲದಲ್ಲಿ ನಡೆದಿದ್ದ ಘಟನೆ. ಆತನ ಆದೇಶದ ಮೂಲಕ ಕೆಡವಲಾಗಿತ್ತು ಎಂದು ಅವರು ಆರೋಪಿಸಿದ್ದರು.

ಅರ್ಜಿದಾರರು ಪುರಾವೆಯಾಗಿ, ಮಸೀದಿಯ ಕೆಲವು ಗೋಡೆಗಳ ಮೇಲೆ ಕಮಲದ ಕೆತ್ತನೆಗಳ ಅಸ್ತಿತ್ವವನ್ನು ಪ್ರತಿಪಾದಿಸಿದ್ದರು. ಅಲ್ಲದೇ, ಹಿಂದೂ ಪುರಾಣಗಳಲ್ಲಿ ಹಾವಿನ ದೇವತೆಯಾದ ‘ಶೇಷನಾಗ್’ ಅನ್ನು ಹೋಲುವ ಆಕಾರಗಳು ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಿರುವುದನ್ನು ತೋರಿಸುತ್ತದೆ ಎಂದು ವಾದಿಸಿದ್ದರು.

ಇದನ್ನು ಓದಿದ್ದೀರಾ? ಇಂಡಿಗೋ ಘಟನೆ | ವಿಮಾನ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಮಸೀದಿ ಆಡಳಿತ ಮಂಡಳಿ, 1991 ರ ಪೂಜಾ ಸ್ಥಳಗಳ ಕಾಯಿದೆಯನ್ನು ಉಲ್ಲೇಖಿಸಿ ಅರ್ಜಿಯನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದರು. ಆದರೆ ಅಲಹಾಬಾದ್ ಹೈಕೋರ್ಟ್, ಕಳೆದ ಡಿಸೆಂಬರ್ 14ರಂದು ಆದೇಶ ಹೊರಡಿಸಿ, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವಂತೆ ತಿಳಿಸಿತ್ತು. ಆ ಆದೇಶಕ್ಕೆ ಈಗ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...