ಮಹಾತ್ಮಾ ಗಾಂಧಿ ಬಗ್ಗೆ ಸಿನಿಮಾ ಬರುವವರೆಗೆ ಜಗತ್ತಿಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ: ಪ್ರಧಾನಿ ಮೋದಿ ವಿಚಿತ್ರ ಹೇಳಿಕೆ

Date:

ಲೋಕಸಭಾ ಚುನಾವಣೆಯ ಮೊದಲ ಹಂತದ ಬಳಿಕ ವಿಚಿತ್ರ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸುದ್ದಿಯಾಗುತ್ತಿದ್ದಾರೆ.

ಈ ಹಿಂದೆ, ಕಾಂಗ್ರೆಸ್ ನಿಮ್ಮ ಮಂಗಳಸೂತ್ರವನ್ನು ಕಸಿದುಕೊಳ್ಳುತ್ತದೆ, ನಿಮ್ಮಲ್ಲಿ ಎರಡು ಎಮ್ಮೆಗಳಿದ್ದರೆ ಒಂದನ್ನು ಕದಿಯಲಿದೆ, ನಾನು ಜೈವಿಕವಾಗಿ ಹುಟ್ಟಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು ಎಂಬಿತ್ಯಾದಿ ಹೇಳಿಕೆಗಳನ್ನು ನೀಡಿದ್ದ ಪ್ರಧಾನಿ ಮೋದಿ, ನಿನ್ನೆ ಖಾಸಗಿ ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದ ವೇಳೆ ಮಹಾತ್ಮಾ ಗಾಂಧಿಯವರ ಬಗ್ಗೆಯೂ ವಿಚಿತ್ರ ಹೇಳಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರು ನಿರಂತರ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಅದರ ಭಾಗವಾಗಿ ನಿನ್ನೆ ಹಿಂದಿ ಸುದ್ದಿ ವಾಹಿನಿ ಎಬಿಪಿ ನ್ಯೂಸ್‌ಗೂ ಕೂಡ ಸಂದರ್ಶನ ನೀಡಿದ್ದು, ಈ ವೇಳೆ, “ಮಹಾತ್ಮಾ ಗಾಂಧಿ ಅವರ ಬಗ್ಗೆ ಸಿನಿಮಾ ಬರುವವರೆಗೆ ಜಗತ್ತಿಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ” ಎಂದು ವಿಚಿತ್ರ ಹೇಳಿಕೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಾರ್ಟಿನ್ ಲೂಥರ್ ಕಿಂಗ್, ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ ಅವರು ಯಾರೆಂಬುದು ಜಗತ್ತಿಗೇ ಗೊತ್ತಿದೆ. ಆದರೆ, ಮಹಾತ್ಮಾ ಗಾಂಧಿ ಅವರ ಬಗ್ಗೆ ಮೊದಲ ಬಾರಿಗೆ ಸಿನಿಮಾ ಬರುವವರೆಗೆ ಯಾರೆಂಬುದೇ ಜಗತ್ತಿಗೆ ಗೊತ್ತಿರಲಿಲ್ಲ. ಮಹಾತ್ಮ ಗಾಂಧಿ ದೊಡ್ಡ ವ್ಯಕ್ತಿಯಾಗಿದ್ದರೂ ಜಗತ್ತಿಗೆ ಅವರ ಬಗ್ಗೆ ತಿಳಿದಿರಲಿಲ್ಲ, ಜಗತ್ತು ಅವರ ಬಗ್ಗೆ ತಿಳಿಯುವಂತಾಗಲು ಎಲ್ಲಾ ಭಾರತೀಯ ರಾಜಕೀಯ ನಾಯಕರು ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರದ ಈ ಅವಧಿಯಲ್ಲಿ ಶ್ರಮಿಸಬೇಕು” ಎಂದು ಪ್ರಧಾನಿ ಹೇಳಿಕೊಂಡರು.

“ಮಹಾತ್ಮ ಗಾಂಧಿ ಮಹಾನ್‌ ವ್ಯಕ್ತಿಯಾಗಿದ್ದರು. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆ ಒದಗಿಸಿಕೊಡುವುದು ನಮ್ಮ ಹಿಂದಿನ ಸರ್ಕಾರಗಳ ಕರ್ತವ್ಯವಾಗಿರಲಿಲ್ಲವೇ?” ಎಂದು ಅಚ್ಚರಿಯ ಹಾಗೂ ವಿಚಿತ್ರ ಹೇಳಿಕೆ ನೀಡಿದ್ದಾರೆ.

ಗಾಂಧಿ ಬಗ್ಗೆ ಹೇಳಿಕೆ: ಸುಳ್ಳು ಬಯಲಿಗೆಳೆದ ಕೇರಳ ಕಾಂಗ್ರೆಸ್

ಮೋದಿ ಅವರ ಸಂದರ್ಶನದ ಈ ತುಣುಕು ವೈರಲ್‌ ಆಗಿದ್ದು, ಈ ಹಿನ್ನೆಲೆಯಲ್ಲಿ ಮೋದಿಯವರು ಹೇಳಿದ್ದು ನಿಜವೇ ಎಂದು ನೆಟ್ಟಿಗರು ಹುಡುಕಾಡಿದ್ದಾರೆ. ಪ್ರಧಾನಿ ಮೋದಿಯವರು ಗಾಂಧಿ ಬಗ್ಗೆ ಹೇಳಿರುವ ಹಸಿಹಸಿ ಸುಳ್ಳು ಈಗ ಬಯಲಾಗಿದೆ.

ಈ ಹಿಂದೆ ಮನ್‌ಕಿ ಬಾತ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಮಹಾತ್ಮಾ ಗಾಂಧಿಯವರನ್ನು ಹೊಗಳಿ ನೀಡಿದ್ದ ಹೇಳಿಕೆ ಈಗ ವೈರಲಾಗಿದೆ.

“ಮಹಾತ್ಮ ಗಾಂಧಿಯವರ ಆದರ್ಶಗಳು ಇಡೀ ಜಗತ್ತನ್ನು ಪ್ರೇರೇಪಿಸಿತು. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮತ್ತು ನೆಲ್ಸನ್ ಮಂಡೇಲಾರಂಥವರು ಗಾಂಧೀಜಿಯವರ ಆದರ್ಶಗಳಿಂದ ತಮ್ಮ ಶಕ್ತಿಯನ್ನು ಪಡೆದರು” ಎಂದು ಈ ಹಿಂದೆ ನರೇಂದ್ರ ಮೋದಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆ ವೈರಲಾಗಿದೆ.

ಈ ನಡುವೆ ಗಾಂಧಿ ಬಗ್ಗೆ ಮೋದಿಯವರು ನೀಡಿರುವ ಹೇಳಿಕೆಯು ಸುಳ್ಳು ಎಂದು ಬಯಲಿಗೆಳೆದಿರುವ ಕೇರಳ ಕಾಂಗ್ರೆಸ್, ಮಹಾತ್ಮಾ ಗಾಂಧಿ ಹಾಗೂ ಅವರ ಜೀವನಾದರ್ಶಗಳ ಬಗ್ಗೆ ಜಗತ್ತಿನ ಖ್ಯಾತ ವಿಜ್ಞಾನಿ ಐನ್‌ಸ್ಟೈನ್, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ನೆಲ್ಸನ್ ಮಂಡೇಲಾ ಸೇರಿದಂತೆ ಮತ್ತಿತರರು ನೀಡುವ ಹೇಳಿಕೆಗಳನ್ನು ಪೋಸ್ಟ್ ಮಾಡಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...