‘ರಾಹುಲ್‌ಗಿಂತ ಪ್ರಧಾನಿ ಮೋದಿ ಹೆಚ್ಚು ಜನಪ್ರಿಯ’ ಎಂದ ಕಾರ್ತಿ ಚಿದಂಬರಂಗೆ ನೋಟಿಸ್ ನೀಡಿದ ಕಾಂಗ್ರೆಸ್

Date:

ರಾಹುಲ್ ಗಾಂಧಿ ಅವರಿಗಿಂತ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಜನಪ್ರಿಯ. ಪ್ರಚಾರದ ತಂತ್ರಗಳಲ್ಲಿ ರಾಹುಲ್‌ ಒಳಗೊಂಡು ಯಾವ ಕಾಂಗ್ರೆಸ್ ನಾಯಕ ಕೂಡ ಪ್ರಧಾನಿಗೆ ಸರಿಸಾಟಿಯಾಗಲಾರರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಸಂಸದ ಪಿ ಚಿದಂಬರಂ ಅವರ ಪುತ್ರ, ಸಂಸದ ಕಾರ್ತಿ ಚಿದಂಬರಂ ಅವರಿಗೆ ತಮಿಳುನಾಡು ಕಾಂಗ್ರೆಸ್ ಘಟಕ ಶೋಕಾಸ್ ನೋಟಿಸ್ ನೀಡಿದೆ.

- Advertisement -

ತಮಿಳುನಾಡಿನ ಖಾಸಗಿ ಚಾನಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕಾರ್ತಿ ಚಿದಂಬರಂ. ಕಾಂಗ್ರೆಸ್‌ ನಾಯಕತ್ವವನ್ನು ಪರೋಕ್ಷವಾಗಿ ಟೀಕೆಗೊಳಪಡಿಸಿ ಮೋದಿಯನ್ನು ಹೊಗಳಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ತಿ ಚಿದಂಬರಂ ಅವರು ಎಐಸಿಸಿ ನಾಯಕರಾಗಿರುವುದರಿಂದ ರಾಜ್ಯ ಕಾಂಗ್ರೆಸ್ ನೋಟಿಸ್ ನೀಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ನ ಒಂದು ಬಣ ಹೇಳಿದೆ.

39 ನಿಮಿಷಗಳ ಸಂದರ್ಶನದಲ್ಲಿ ಮಾತನಾಡಿದ್ದ ಕಾರ್ತಿ ಚಿದಂಬರಂ, ನಾವು ಚುನಾವಣಾ ಲೆಕ್ಕಾಚಾರ ಹಾಗೂ ರಾಜಕೀಯ ಸಂದೇಶವನ್ನು ಸರಿಯಾಗಿ ಗಮನಿಸಿದರೆ ಮೋದಿಯ ಜನಪ್ರಿಯತೆ ನಡುವೆಯೂ ಬಿಜೆಪಿಯನ್ನು ಸೋಲಿಸಬಹುದು. ನೀವು ಮೋದಿಯಷ್ಟು ಬಲಿಷ್ಠರ ಹೆಸರನ್ನು ಕೇಳಿದರೆ ನಾನು ತಕ್ಷಣದಲ್ಲಿ ಹೆಸರೇಳಲು ಸಾಧ್ಯವಿಲ್ಲ. ಸಾಮಾನ್ಯ ಕಾರ್ಯಕರ್ತರನ್ನು ಕೇಳಿದರೆ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸಬೇಕೆಂದು ಬಯಸುತ್ತಾರೆ. ಖರ್ಗೆಯ ಹೆಸರನ್ನು ಸೂಚಿಸಿರುವ ಇಂಡಿಯಾ ಒಕ್ಕೂಟ ತಂತ್ರ ರಾಜಕಾರಣಗಳನ್ನು ಹೊಂದಿರಬಹುದು. ವೈಯುಕ್ತಿಕ ಸ್ಪರ್ಧೆಗೆ ಇಳಿದಾಗ ನನ್ನ ತಿಳುವಳಿಕೆಯ ಪ್ರಕಾರ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ. ಸದ್ಯದ ವಾಸ್ತವ ಪ್ರಚಾರ ತಂತ್ರಗಳಲ್ಲಿ ಮೋದಿಯವರಿಗೆ ಕಾಂಗ್ರೆಸ್‌ನ ಯಾವೊಬ್ಬ ನಾಯಕರು ಸರಿಸಾಟಿಯಾಗಲಾರರು. ಆದರೆ ರಾಜಕೀಯ ಸಂಘರ್ಷ ಅಥವಾ ಸಮಸ್ಯೆಯ ವಿಚಾರಗಳನ್ನು ತೆಗೆದುಕೊಂಡರೆ ನಮ್ಮದೆ ಗೆಲುವು ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಡುದ್ವೇಷದ ಕತ್ತಲ ಯುಗದಲ್ಲಿ ಬೆಳ್ಳಂಬೆಳಕಿನ ತೀರ್ಪು

”ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾರ್ತಿ ಅವರು, ಖರ್ಗೆಯವರು 53 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಹಿರಿಯ ರಾಜಕಾರಣಿ. ಸದ್ಯ ಎರಡು ಪಕ್ಷಗಳು ಅವರ ಹೆಸರನ್ನು ಸೂಚಿಸಿವೆ. ಉಳಿದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕಿದೆ. ಆ ಹುದ್ದೆಗೆ ಖರ್ಗೆ ಅರ್ಹರೆ ಎಂದು ನನ್ನನ್ನು ಕೇಳಿದರೆ ನಾನು ಖಂಡಿತಾ ಹೌದು ಎನ್ನುತ್ತೇನೆ” ಎಂದಿದ್ದರು.

“ನಮ್ಮ ಪ್ರಧಾನಿ ಅಭ್ಯರ್ಥಿ ಕುರಿತು ಸಾರ್ವಜನಿಕ ಸಂದೇಶವನ್ನು ಶೀಘ್ರವೇ ನೀಡುವುದು ಅಗತ್ಯ. ಚುನಾವಣೆಯ ಕೊನೆ ಕ್ಷಣಗಳಲ್ಲಿ ನಮ್ಮ ಭರವಸೆಗಳು ಮತ್ತು ಯೋಜನೆಗಳನ್ನು ಘೋಷಿಸಬಾರದು. ಕನಿಷ್ಠ ನಾಲ್ಕರಿಂದ ಆರು ತಿಂಗಳು ಮುಂಚೆ ಮಾಡಬೇಕು. ಇದರಿಂದ ಮಾತ್ರವೇ ಜನರ ಮನಸ್ಸಿಗೆ ಮುಟ್ಟುವುದು ಸಾಧ್ಯ. ಬಿಜೆಪಿಯ ಜೈ ಶ್ರೀರಾಮ್ ಮತ್ತು ಬುಲ್ಡೋಜರ್ ರಾಜಕಾರಣಕ್ಕೆ ವಿರುದ್ಧವಾಗಿ ಪಕ್ಷವು ಜನವರಿ ಅಂತ್ಯದೊಳಗೆ ರೂಪುರೇಷೆಯೊಂದಿಗೆ ಬರಲಿದೆ ಎಂಬ ಆಶಯವಿದೆ. ಜನರ ಜೀವನ ಮಟ್ಟ ಕಳೆದ 10 ವರ್ಷಗಳಲ್ಲಿ ಯಾವ ರೀತಿಯಲ್ಲಿಯೂ ಸುಧಾರಿಸಿಲ್ಲ. ಅವರ ಪ್ರಚಾರಕ್ಕೆ ಪ್ರತಿಯಾಗಿ ಆರ್ಥಿಕ ಅನನುಕೂಲತೆಗಳನ್ನು ನಾವು ಬಿಂಬಿಸಬೇಕು” ಎಂದು ಕಾರ್ತಿ ಹೇಳಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...