ಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ

Date:

ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಯಾಗಿದೆ.

- Advertisement -

ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟಿನ ಮ್ಯಾಜಿಸ್ಟ್ರೇಟ್ ಕೆ ಎನ್ ಶಿವಕುಮಾರ್ ಈ ಆದೇಶ ಜಾರಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರ ಪತ್ನಿಯ ಟಬು ರಾವ್ ಅವರನ್ನು ಉಲ್ಲೇಖಿಸಿ, “ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ” ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ಟಬು ರಾವ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟಿನ ಮೆಟ್ಟಿಲೇರಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ಹೈಕೋರ್ಟ್ ಪೀಠ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ, ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯವು, ಬಂಧನ ವಾರೆಂಟ್ ಜಾರಿ ಮಾಡಿದ್ದಲ್ಲದೇ, ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಮಾನನಷ್ಟ ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ್ದ ಹೈಕೋರ್ಟಿನ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದ್ದರಲ್ಲದೇ, ಶಾಸಕರ ಕೀಳು ಅಭಿರುಚಿಯ ಹೇಳಿಕೆಯನ್ನು ಪ್ರಶ್ನಿಸಿದ್ದರು. “ನೀವು ಹೇಳಿಕೆ ನೀಡಿದ್ದು ಹೌದೋ ಅಲ್ಲವೋ” ಎಂದು ಪ್ರಶ್ನಿಸಿದರು. ಹೇಳಿಕೆ ನೀಡಿದ್ದನ್ನು ಯತ್ನಾಳ್ ಪರ ವಕೀಲ ಒಪ್ಪಿಕೊಂಡಿದ್ದರು.

ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಯವರು, “ಈ ರೀತಿಯ ಪದ ಬಳಕೆ ಯಾವ ಅರ್ಥ ನೀಡುತ್ತದೆ. ವೈಯಕ್ತಿಕ ತೇಜೋವಧೆಗೆ ನೀವು ಏಕೆ ಇಳಿದಿದ್ದೀರಿ? ಇತ್ತೀಚೆಗೆ ಈ ರೀತಿಯ ಹೇಳಿಕೆಗಳು ಮಾಮೂಲಾಗಿವೆ. ಒಂದು ಸಮುದಾಯದ ವಿರುದ್ಧ ಈ ರೀತಿ ಪದಬಳಕೆ ಸರಿಯಲ್ಲ. ಒಬ್ಬರ ಪತ್ನಿ ಮುಸ್ಲಿಂ ಪತ್ನಿ ಆಂದ ತಕ್ಷಣ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ” ಎಂದು ಚಾಟಿ ಬೀಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೆಜಿಲ್ ಚುನಾವಣೆ: ಅಮೆರಿಕದ ಬೆಂಬಲವಿದ್ದೂ ಸೋತ ಬೋಲ್ಸೊನಾರೊ; ಎಡಪಂಥೀಯ ನಾಯಕ ಲುಲಾಗೆ ಗೆಲುವು

ಬ್ರೆಜಿಲ್‌ನಲ್ಲಿ ಭಾನುವಾರ ನಡೆದ ತೀವ್ರ ಕುತೂಹಲಕಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ,...

ಸೆರ್ಬಿಯಾದಲ್ಲಿ 12 ವರ್ಷಗಳ ವುಚಿಚ್ ಆಡಳಿತ ಅಂತ್ಯ; ವಿದ್ಯಾರ್ಥಿ ಹೋರಾಟಕ್ಕೆ ಚುನಾವಣಾ ಜಯ

ಯುರೋಪಿನ ಸೆರ್ಬಿಯಾದಲ್ಲಿ ಸುಮಾರು ಎರಡು ವರ್ಷಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ನೇತೃತ್ವದ ಭ್ರಷ್ಟಾಚಾರ...

RSS ಸಿದ್ಧಾಂತವನ್ನು ಕಳಚಿ‌ ಹಾಕುವ ತನಕ‌ ಭಾರತದಲ್ಲಿ ಶಾಂತಿ‌ ಅಸಾಧ್ಯ: ಮಲ್ಲಿಕಾರ್ಜುನ ಖರ್ಗೆ

ಭಾರತದಲ್ಲಿ RSS ಸಿದ್ಧಾಂತವನ್ನು ಸಂಪೂರ್ಣವಾಗಿ ಕಳಚಿ ಹಾಕುವವರೆಗೆ ದೇಶದಲ್ಲಿ ನೈಜ ಶಾಂತಿ...