ಉತ್ತರ ಕರ್ನಾಟಕದವರು ಗುಲಾಮರಲ್ಲ, ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ : ಯತ್ನಾಳ್ ಕಿಡಿ

Date:

  • ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ
  • ಮೈಸೂರು ಭಾಗದ ನಾಯಕರಿಗೆ ನಾವು ಗುಲಾಮರಲ್ಲ: ಕಿಡಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಸಮಾಧಾನ ಕಡಿಮೆಯಾದಂತೆ ಕಾಣುತ್ತಿಲ್ಲ. ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕು ಎಂದು ತಮ್ಮ ಆಗ್ರಹವನ್ನು ಮುಂದುವರಿಸಿದ್ದಾರೆ.

- Advertisement -

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, “ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಬರಲ್ಲ. ಬಹಳಷ್ಟು ಅನುಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 50ರಷ್ಟು ಮಹಿಳಾ ಮುಖ್ಯಮಂತ್ರಿಗಳು!- ಹೇಳಿಕೆಯಾಗೇ ಉಳಿಯದಿರಲಿ, ಅನುಷ್ಠಾನಕ್ಕೂ ಬರಲಿ

“ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ” ಎಂದು ಕಡ್ಡಿ ಮುರಿದಂತೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

”ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ” ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂಬುದನ್ನು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...