ಪೊಲೀಸ್ ಠಾಣೆಯಲ್ಲಿ ಸೋನಮ್​​ ಭೇಟಿಗೆ ಬಿಡಲಿಲ್ಲ; ಕೇಂದ್ರದ ವಿರುದ್ಧ ದೆಹಲಿ ಸಿಎಂ ಆತಿಶಿ ಕಿಡಿ

Date:

ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು, ರಾಜ್ಯದ ಸ್ಥಾನಮಾನ ನೀಡಬೇಕು ಹಾಗೂ ಸಂವಿಧಾನದ 6ನೇ ಪರಿಚ್ಛೇದವನ್ನು ಲಡಾಖ್‌ಗೂ ವಿಸ್ತರಿಸಬೇಕೆಂದು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಲಡಾಖ್‌ನಿಂದ ದೆಹಲಿಗೆ ಪಾದಯಾತ್ರೆ ಬಂದ ಸೋನಮ್ ಮತ್ತು 120 ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ‘ಪೊಲೀಸ್‌ ಠಾಣೆಯಲ್ಲಿ ಅವರನ್ನು ಭೇಟಿ ಮಾಡಲು ತೆರಳಿದ್ದ ತಮಗೆ ಪೊಲೀಸರು ಅವಕಾಶ ನೀಡಲಿಲ್ಲ’ ಎಂದು ದೆಹಲಿ ಮುಖ್ಯಮಂತ್ರಿ ಆತಿಶಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ದೆಹಲಿಯ ಬವಾನಾ ಪೊಲೀಸ್ ಠಾಣೆಯಲ್ಲಿ ಸೋನಮ್ ವಾಂಗ್ಚುಕ್ ಅವರನ್ನು ಇರಿಸಲಾಗಿದೆ. ಸೋನಮ್ ಅವರನ್ನು ಭೇಟಿ ಮಾಡಲು ಆತಿಶಿ ಅವರು ಪೊಲೀಸ್‌ ಠಾಣೆಗೆ ತೆರಳಿದ್ದರು. ಆದರೆ, ಠಾಣೆಯೊಳಗೆ ಪ್ರವೇಶಿಸದಂತೆ ಅವರನ್ನು ತಡೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪೊಲೀಸ್ ಠಾಣೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆತಿಶಿ, “ನಾನು ಸೋನಮ್ ವಾಂಗ್ಚುಕ್ ಅವರನ್ನು ಭೇಟಿ ಮಾಡಲು ಬಂದಿದ್ದೇನೆ. ಅವರು ಪರಿಸರವಾದಿ ಮತ್ತು ಶಿಕ್ಷಣತಜ್ಞ. ಲಡಾಖ್‌ನ ಜನರು ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಹೋರಾಡುತ್ತಿದ್ದು, ಸೋನಮ್ ಅವರು ಲಡಾಖ್‌ಗಾಗಿ ಧ್ವನಿ ಎತ್ತಲು 150 ಜನರೊಂದಿಗೆ ದೆಹಲಿಗೆ ಬರುತ್ತಿದ್ದರು. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅವರನ್ನು ದೆಹಲಿ ಗಡಿಯಲ್ಲಿ ಬಂಧಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪೊಲೀಸ್ ಠಾಣೆಗೆ ಪ್ರವೇಶಿಸಲು ನನಗೆ ಎಲ್ಲ ರೀತಯಲ್ಲೂ ಅವಕಾಶವಿದೆ. ಆದರೂ, ಸೋನಮ್ ಅವರನ್ನು ಭೇಟಿಯಾಗಲು ನನಗೆ ಅವಕಾಶ ನೀಡಲಿಲ್ಲ” ಎಂದು ಆತಿಶಿ ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: ಬಿಜೆಪಿ ನಾಯಕರನ್ನು ಪ್ರಶ್ನಿಸುವ, ಕೇಸ್-ಎಫ್ಐಆರ್ ದಾಖಲಿಸುವ ಕಾಲವೂ ಬಂತು!

“ಬಿಜೆಪಿ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವವನ್ನು ಕೊಲ್ಲುವ, ಮತದಾನದ ಹಕ್ಕನ್ನು ಕಸಿದುಕೊಳ್ಳಲು ಎಲ್ಲ ಅವಕಾಶಗಳನ್ನೂ ಬಳಸಿಕೊಳ್ಳುತ್ತಿದೆ. ಸೋನಮ್ ಅವರನ್ನು ಏಕೆ ಬಂಧಿಸಲಾಗಿದೆ? ಅವರನ್ನು ಭೇಟಿಯಾಗದಂತೆ ನನ್ನನ್ನು ಏಕೆ ತಡೆಯಲಾಗುತ್ತಿದೆ? ಯಾಕೆಂದರೆ, ಬಿಜೆಪಿಗೆ ಪ್ರಜಾಪ್ರಭುತ್ವದ ಭಯವಿದೆ” ಎಂದು ಹೇಳಿದ್ದಾರೆ.

ಮಾರ್ಚ್‌ ತಿಂಗಳಲ್ಲಿ 21 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಸೋನಮ್ ಅವರು ಸೆಪ್ಟೆಂಬರ್ 1ರಿಂದ ದೆಹಲಿ ಚಲೋ ಪಾದಯಾತ್ರೆ ಆರಂಭಿಸಿದ್ದರು. ಅಕ್ಟೋಬರ್ 1ರಂದು ಅವರ ಪಾದಯಾತ್ರೆ ದೆಹಲಿ ತಲುಪಿತ್ತು. ಸೋನಮ್ ಮತ್ತು 120 ಮಂದಿ ಪ್ರತಿಭಟನಾಕಾರರು ದೆಹಲಿ ಪ್ರವೇಶಿಸುತ್ತಿದ್ದಂತೆ, ಸಿಂಘು ಗಡಿಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬವಾನಾ ಜೈಲಿನಲ್ಲಿರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...