ಸಂಸತ್ತಿನಲ್ಲಿ ಸಂಸದ ಸುರೇಶ್‌ಗೆ ಮಾತನಾಡಲು ಅವಕಾಶ ಕೊಡುತ್ತಿಲ್ಲ: ಡಿ ಕೆ ಶಿವಕುಮಾರ್ ಆರೋಪ

Date:

“ಸಂಸತ್ತಿನಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಮಾತನಾಡಲೂ ಅವಕಾಶ ಕೊಡದೆ, ನಮ್ಮ ಧ್ವನಿ ಅಡಗಿಸುವ ಯತ್ನ ನಡೆದಿದೆ. ಜತೆಗೆ ಕೇಂದ್ರ ಸರ್ಕಾರ ರಾಜ್ಯದ ಪ್ರತಿ ಬಡವನ ಹೊಟ್ಟೆ ಮೇಲೆ ಹೊಡೆಯುತ್ತಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ, ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಪರವಾಗಿ ಮಾತನಾಡದೆ ಪಕ್ಷಪಾತಿಯಾಗಿ ಮಾತನಾಡುತ್ತಿದ್ದರು. ನಮ್ಮ ಪಕ್ಷದ ಎಲ್ಲಾ ಮಂತ್ರಿಗಳು, ಶಾಸಕರು, ಸಂಸದರು ದೆಹಲಿಗೆ ಬಂದು ರಾಜ್ಯದ ಪರ ದನಿ ಎತ್ತಿದರು. ಈ ಬಗ್ಗೆ ಬಿಜೆಪಿ ಎಂಪಿಗಳಿಗೆ ನಾಚಿಕೆಯಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಾವು ರಾಜ್ಯದ ಕೂಲಿ ಕಾರ್ಮಿಕರ ಪರವಾಗಿ ಹೋರಾಡುತ್ತೇವೆ. ಉದ್ಯೋಗ ಖಾತ್ರಿ ಯೋಜನೆ ಹಾಗೂ ರಾಜ್ಯದ ಅಭಿವೃದ್ದಿಗೆ ಬೇಕಾದ ಅನುದಾನಕ್ಕಾಗಿ ಹೋರಾಡುತ್ತೇವೆ” ಎಂದು ಹೇಳಿದರು.

ಕರ್ನಾಟಕ ಸರ್ಕಾರ ನೀಡಿರುವ ಅಂಕಿ-ಅಂಶಗಳು ಸುಳ್ಳು ಎಂದು ಬಿಜೆಪಿ ಹೇಳುತ್ತಿದೆ ಎಂದು ಕೇಳಿದಾಗ ”ಬಿಜೆಪಿಯವರು ಸುಳ್ಳು ಎನ್ನುತ್ತಿದ್ದಾರೆ. ನಾವು ಸತ್ಯ ಎನ್ನುತ್ತಿದ್ದೇವೆ. ಬಿಜೆಪಿಯವರು ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳುತ್ತಿದ್ದಾರೆ. ನಾವು ಶ್ವೇತ ಪತ್ರವನ್ನೇ ಅವರ ಮುಂದೆ ಇಡುತ್ತೇವೆ. ನಾವು ಯಾವುದೇ ಸುಳ್ಳು ಹೇಳುತ್ತಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

“ಕೇಂದ್ರ ಬಜೆಟ್ ಅನ್ನು ನಾನು ತಯಾರು ಮಾಡಿಲ್ಲ, ಕೇಂದ್ರ ಸರ್ಕಾರವೇ ತಯಾರು ಮಾಡಿದೆ. ಅದರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇವೆ ಎಂದು ಹೇಳಿದ್ದರು. ಹಣಕಾಸು ಆಯೋಗ ಬೆಂಗಳೂರಿಗೆ 5-6 ಸಾವಿರ ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿತ್ತು, ಇವನ್ನು ಕೊಟ್ಟಿದ್ದಾರೆಯೇ” ಎಂದು ಪ್ರಶ್ನಿಸಿದರು.

ಬರಪರಿಹಾರವಾಗಿ ರಾಜ್ಯಕ್ಕೆ 6 ಸಾವಿರ ಕೋಟಿಯನ್ನು ಮುಂಗಡವಾಗಿ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ಕೊಟ್ಟಿದ್ದಾರೆ ಎಂದಾಗ “ಒಂದೇ ಒಂದು ರೂಪಾಯಿಯನ್ನು ಕೊಟ್ಟಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ವಿಧಾನಸಭೆ ಅಧಿವೇಶನದಲ್ಲಿ ಉತ್ತರ ನೀಡಲಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...