ಪೊಲೀಸರಿಂದ ಎಲ್ಲರನ್ನೂ ರಕ್ಷಿಸಲು ಸಾಧ್ಯವಿಲ್ಲ: ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Date:

ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಿದ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನು ಪೊಲೀಸರಿಂದ ರಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸೋಮವಾರದಿಂದ ಹರಿಯಾಣದಲ್ಲಿ ಕೋಮು ಸಂಘರ್ಷ ಭುಗಿಲೆದ್ದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಸೌಹಾರ್ದತೆ ಇಲ್ಲದಿದ್ದರೆ ಭದ್ರತೆ ಇಲ್ಲ. ಎಲ್ಲರೂ ಒಬ್ಬರನ್ನೊಬ್ಬರು ವಿರೋಧಿಸಿ ಎಂದು ಹಠ ಹಿಡಿದರೆ ಭದ್ರತೆ ಇಲ್ಲ. ಪ್ರತಿಯೊಬ್ಬರನ್ನು ರಕ್ಷಿಸಲು ಪೊಲೀಸರಿಂದಾಗಲಿ, ಸೇನೆಯಿಂದಾಗಲಿ ಅಥವಾ ನಿಮ್ಮಿಂದಾಗಲಿ ನನ್ನಿಂದಾಗಲಿ ಸಾಧ್ಯವಿಲ್ಲ ಎಂದು ಖಟ್ಟರ್‌ ಹೇಳಿದ್ದಾರೆ.

“ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಒಂದು ನಿರ್ದಿಷ್ಟ ವಾತಾವರಣ ಬೇಕು. ಸೌಹಾರ್ದತೆ, ಉತ್ತಮ ಬಾಂಧವ್ಯ ಇರಬೇಕು. ಅದಕ್ಕಾಗಿ ನಮ್ಮಲ್ಲಿ ಶಾಂತಿ ಸಮಿತಿಗಳಿವೆ. ತೊಂದರೆಯಾದರೆ ನಾವು ಕ್ರಮಗಳನ್ನು ತೆಗೆದುಕೊಳ್ಳಬಹುದು. ಅವರು ಶಾಂತಿ ಮೆರವಣಿಗೆಗಳನ್ನು ಮಾಡಿದ್ದಾರೆ . ಜಗತ್ತಿನಲ್ಲಿ ಎಲ್ಲಿಗೆ ಹೋದರೂ ಪೊಲೀಸರಿಂದ ಎಲ್ಲರನ್ನೂ ರಕ್ಷಿಸಲು ಸಾಧ್ಯವಿಲಎಂದು ಅವರು ಹೇಳಿದರು. ಕೋಮು ಹಿಂಸಾಚಾರದ ಕೇಂದ್ರಬಿಂದುವಾಗಿರುವ ಮೋನು ಮಾನೇಸರ್ ಬಗ್ಗೆ ರಾಜ್ಯಕ್ಕೆ ಯಾವುದೇ ಮಾಹಿತಿ ಇಲ್ಲ” ಎಂದು ಮನೋಹರ್ ಲಾಲ್ ಖಟ್ಟರ್ ಇದೇ ವೇಳೆ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಅಹಂಕಾರ, ಅತಿರೇಕ ಹೆಚ್ಚಾದಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ: ಪ್ರಧಾನಿ ವಿರುದ್ಧ ಜೈರಾಮ್ ರಮೇಶ್ ಕಿಡಿ

“ಆತನ ವಿರುದ್ಧ ಪ್ರಕರಣವನ್ನು ರಾಜಸ್ಥಾನ ಸರ್ಕಾರ ದಾಖಲಿಸಿದೆ. ಅವನನ್ನು ಪತ್ತೆಹಚ್ಚಲು ಸಹಾಯ ಬೇಕಾದರೆ ನಾವು ಸಹಾಯ ಮಾಡಲು ಸಿದ್ಧರಿದ್ದೇವೆ ಎಂದು ನಾನು ರಾಜಸ್ಥಾನ ಸರ್ಕಾರಕ್ಕೆ ಹೇಳಿದ್ದೇನೆ. ಈಗ ರಾಜಸ್ಥಾನ ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ. ಅವನ ಇರುವಿಕೆಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ” ಅವರು ಹೇಳಿದರು.

ರಾಜಸ್ಥಾನದ ಜೋಧ್‌ಪುರದ ಇಬ್ಬರು ಮುಸ್ಲಿಂ ವ್ಯಕ್ತಿಗಳ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದುತ್ವವಾದಿ, ಸ್ವಘೋಷಿತ ಗೋರಕ್ಷಕ ಮೋನು ಮಾನೇಸರ್ ಫೆಬ್ರವರಿಯಿಂದ ತಲೆಮರೆಸಿಕೊಂಡಿದ್ದಾನೆ. ನೂಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆದ ಮೆರವಣಿಗೆಯಲ್ಲಿ ಆತ ಭಾಗವಹಿಸಿದ್ದಾನೆ ಎಂಬ ವದಂತಿಗಳು ದಾಳಿಗೆ ಕಾರಣವಾಗಿವೆ ಎನ್ನಲಾಗಿದೆ

ಮೋನು ಮಾನೆಸರ್‌ ಮೇಲಿನ ಕೋಪದಿಂದ ಕೆಲವರು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಮಧ್ಯರಾತ್ರಿಯ ವೇಳೆಗೆ ದುಷ್ಕರ್ಮಿಗಳ ಗುಂಪು ಮಸೀದಿಗೆ ನುಗ್ಗಿ ಬೆಂಕಿ ಹಚ್ಚಿತ್ತು. ಘಟನೆಯಲ್ಲಿ ನೂರಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಧ್ವಂಸಗೊಳಿಸಲಾಗಿದೆ. ಘರ್ಷಣೆಯ ಅಲೆಗಳು ದೆಹಲಿಯ ಪಕ್ಕದಲ್ಲಿರುವ ಗುರುಗ್ರಾಮದ ಐಷಾರಾಮಿ ಪ್ರದೇಶಗಳವರೆಗೂ ತಲುಪಿದ್ದು, ಬಳಿಕ ಈ ಪ್ರದೇಶಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಲ್ಮೀಕಿ ನಿಗಮ ಅಕ್ರಮದ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರ, ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 196 ಕೋಟಿ...

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ್ ಆಗ್ರಹ

‌ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ....

ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸ್ಥಿತಿ ಗಂಭೀರ

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ...

ಕನ್ನಡದ ಬೇರೆ ಬೇರೆ ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಸ್ವಾಮಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ದಾಖಲಿಸಿರುವ...