ಡಿಸಿಎಂ ಮಾಡದಿರುವುದಕ್ಕೆ ಬೇಸರವಿಲ್ಲ; ಪಕ್ಷದ ನಿರ್ಧಾರವೇ ಅಂತಿಮ: ಜಿ ಪರಮೇಶ್ವರ್

Date:

  • ಸಿದ್ದರಾಮಯ್ಯ ಸರ್ಕಾರದ ಸದಸ್ಯರಾಗಲಿರುವ ಪರಮೇಶ್ವರ್
  • ಹಾಲಿ ಡಿಸಿಎಂ ಪದವಿ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ

ತಮಗೆ ಡಿಸಿಎಂ ಪದವಿ ನೀಡದಿರುವ ಪಕ್ಷದ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ವಿಚಾರದಲ್ಲಿ ಬೇಸರವಿಲ್ಲ ಎಂದಿದ್ದಾರೆ.

- Advertisement -

ಪದಗ್ರಹಣ ಸಮಾರಂಭಕ್ಕೂ ಮುನ್ನ ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ್, “ಪಕ್ಷದ ಹಾಗೂ ಹೈಕಮಾಂಡ್ ನಿರ್ಧಾರ ಅಂತಿಮ. ಅದಕ್ಕೆ ನಾವು ಬೆಲೆ ಕೊಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

“ಸದ್ಯ ಒಬ್ಬರಿಗೆ ಮಾತ್ರ ಡಿಸಿಎಂ ಸ್ಥಾನ ಎಂದು ಹೈಕಮಾಂಡ್ ಹೇಳಿದೆ. ಹೀಗಾಗಿ ಹೈಕಮಾಂಡ್ ನೀಡಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುವೆ. ಸಣ್ಣ ಪುಟ್ಟ ವ್ಯತ್ಯಾಸ ಬಿಟ್ಟು ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲವೂ ಬಗೆಹರಿದಿವೆ” ಎಂದವರು ಹೇಳಿದರು.

Advertisements

“ಸಚಿವ ಸಂಪುಟದಲ್ಲಿ ನನಗೂ ಅವಕಾಶ ಮಾಡಿಕೊಟ್ಟಿರುವ ಎಐಸಿಸಿ ನಾಯಕರಿಗೆ ಧನ್ಯವಾದಗಳು. ಹಾಗೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲರಿಗೂ ಕೂಡ ಇದು ಅತಿ ದೊಡ್ಡ ಸವಾಲು. ರಾಜ್ಯದ ಜನ ಬಹಳಷ್ಡು ನಿರೀಕ್ಷೆ ಮಾಡಿದ್ದಾರೆ. ಇವನ್ನೆಲ್ಲ ನಾವು ಈಡೇರಿಸಬೇಕಿದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

“ಇನ್ನು ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಜನರಿಗೆ ತಿಳಿಸಿದ್ದೇವೆ. ಐದೂ ಗ್ಯಾರಂಟಿ ಜಾರಿ ಮಾಡುವುದು ಬಹಳ ಪ್ರಮುಖವಾದದ್ದು. ಇಂದಿನ ಕ್ಯಾಬಿನೆಟ್‌ನಲ್ಲೇ ಅವಗಳನ್ನು ಜಾರಿಗೆ ತರವುದರ ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ” ಎಂದು ಪರಮೇಶ್ವರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...