ಲೋಕಸಭಾ ಚುನಾವಣೆಗೆ ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಚುನಾವಣೆಗೆ ಸ್ಪರ್ಧಿಸುವ ಇರಾದೆಯೂ ಇಲ್ಲ. ಕೆಲ ಮುಖಂಡರು ಈಗಲೂ ಮಂಡ್ಯದಲ್ಲಿ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ಸ್ಪರ್ಧಾಕಾಂಕ್ಷಿಯಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಈ ಹಿಂದೆಯೇ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ನನ್ನ ನಿರ್ಧಾರದ ಬಗ್ಗೆ ನನಗೆ ಸ್ಪಷ್ಟತೆ ಇದೆ. ಯು-ಟರ್ನ್ ಹೊಡೆಯುವ ಗಿರಾಕಿ ನಾನಲ್ಲ” ಎಂದಿದ್ದಾರೆ.
“ಮಂಡ್ಯದಲ್ಲಿ ಪಕ್ಷದ ಮುಖಂಡರು ಒತ್ತಾಯ ಮಾಡಿದ ಕಾರಣಕ್ಕೆ, ಮಂಡ್ಯ ಭಾಗದಲ್ಲಿ ಓಡಾಡಿ ಬಂದಿದ್ದೇನೆ ಅಷ್ಟೇ. ಮಂಡ್ಯದಲ್ಲಿ ಸುಮಲತಾ ಸ್ಪರ್ಧೆ ಬಗ್ಗೆ ಕಾಲವೇ ಉತ್ತರ ನೀಡುತ್ತದೆ” ಎಂದು ಹೇಳಿದ್ದಾರೆ.