ಕೇಂದ್ರ ಬಜೆಟ್ 2026 | ‘ರಾಜ್ಯಕ್ಕೆ ಬರೀ ಚೊಂಬು’ ಎಂದು ಸಿಎಂ ಸಿದ್ದರಾಮಯ್ಯ

Date:

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಏನೂ ಇಲ್ಲ, ಬರೀ ಚೊಂಬು ನೀಡಲಾಗಿದೆ. ಇದು ಅತಿ ನಿರಾಶಾದಾಯಕ ಬಜೆಟ್. ಈ ಬಜೆಟ್‌ಗೆ ದೂರದೃಷ್ಟಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಕಲಬುರಗಿಯಲ್ಲಿ ಸುದ್ದಿಗಾರರಿಗೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಇಡೀ ದಕ್ಷಿಣ ಭಾರತಕ್ಕೆ ಬಜೆಟ್‌ನಲ್ಲಿ ಏನೂ ನೀಡಲಾಗಿಲ್ಲ. ಕರ್ನಾಟಕಕ್ಕೆ ನೀಡುರುವುದು ಚೊಂಬು. ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್‌ 2026 | ನಿರ್ಮಲಾ ಸೀತಾರಾಮನ್ ಮಂಡಿಸಿದ ಆಯವ್ಯಯದ ಪ್ರಮುಖ ಅಂಶಗಳು

“ಎರಡು ವಿಷಯಗಳನ್ನು ಮಾತ್ರ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಅದು ಬೆಂಗಳೂರು-ಚೆನ್ನೈ ಮತ್ತು ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್. ಆದರೆ ಇದರಿಂದ ಕರ್ನಾಟಕಕ್ಕೆ ಯಾವುದೇ ಪ್ರಯೋಜನವಿಲ್ಲ. ಹೆಚ್ಚಾಗಿ ತೆಲಂಗಾಣ ಮತ್ತು ತಮಿಳುನಾಡಿಗೆ ಪ್ರಯೋಜನವಾಗುತ್ತದೆ” ಎಂದು ಹೇಳಿದರು.

“ಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸುವಂತೆ ಕೇಳಿದ್ದೇವೆ. ಹಾಗೆಯೇ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಮತ್ತು ಬೆಂಗಳೂರು-ಪುಣೆ ಹೈಸ್ಪೀಡ್ ರೈಲುಗಳನ್ನು ನಾವು ಕೇಳಿದ್ದೆವು. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿಲ್ಲ. ಅಷ್ಟು ಮಾತ್ರವಲ್ಲದೆ ಕೇಂದ್ರದ ಅನುದಾನದಲ್ಲಿ ರಾಜ್ಯಕ್ಕೆ ಕಡಿಮೆ ಅನುದಾನವಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ವಿತ್ತ ಸಚಿವರು ವಿಕಸಿತ ಭಾರತ್ ಬಗ್ಗೆಯೂ ಬಜೆಟ್‌ನಲ್ಲಿ ಮಾತನಾಡಿದ್ದಾರೆ. ಆದರೆ ಇದು ಬರೀ ಮಾತಿನಲ್ಲೇ ಉಳಿದಿದೆ. ಕಾರ್ಯರೂಪಕ್ಕೆ ಮಾತ್ರ ಈವರೆಗೂ ಬಂದಿಲ್ಲ” ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...