ಕಲ್ಯಾಣ ಕರ್ನಾಟಕ | ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇರ ಭರ್ತಿಗೆ ಸೂಚನೆ: ಶರಣಪ್ರಕಾಶ್‌ ಪಾಟೀಲ

Date:

Advertisements

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ನೇರ ಭರ್ತಿಗೆ ಸೂಚನೆ ನೀಡಲಾಗಿದೆ. ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಎಷ್ಟು ಮಂದಿಗೆ ಬಡ್ತಿ ನೀಡಬೇಕು ಎಂಬ ಅಂಕಿಅಂಶಗಳ ಅನುಪಾಲನಾ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ಹಂಚಿಕೊಂಡರು.

“ಮುಂಬಡ್ತಿ ವಿಚಾರದಲ್ಲಿ ಕೆಲವು ಇಲಾಖೆಗಳಲ್ಲಿ ಗೊಂದಲಗಳಿತ್ತು. ಇದರಿಂದಾಗಿ ನೇಮಕಾತಿಗೆ ಹಿನ್ನಡೆ ಉಂಟಾಗಿದೆ. ಮುಂಬಡ್ತಿಯಲ್ಲಿ ಹಿರಿತನ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶವಿದೆ. ಸೇವಾ ಹಿರಿತನ ಕಾಯ್ದುಕೊಂಡು ಮುಂಬಡ್ತಿಯ ಸರ್ಕಾರಿ ಆದೇಶ ಹೊರಡಿಸಲಾಗುವುದು” ಎಂದರು.

Advertisements

“ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಹುದ್ದೆಗಳ ನೇರ ಭರ್ತಿಗೆ ಹಣಕಾಸು ಇಲಾಖೆಯ ಒಪ್ಪಿಗೆ ಬೇಕಿಲ್ಲ. ಕಾನೂನಿನಲ್ಲಿಯೇ ಆ ಅಂಶವಿದೆ. ಅದನ್ನು ಬಳಕೆ ಮಾಡಿ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಹಳಷ್ಟು ಹುದ್ದೆಗಳು ಖಾಲಿ ಇರುವುದರಿಂದ ಆಡಳಿತ ಸಮರ್ಪಕವಾಗಿ ನಡೆಯುತ್ತಿಲ್ಲ ಹಾಗೂ ಅಭಿವೃದ್ಧಿ ಕೆಲಸಗಳಲ್ಲಿ ಪ್ರಗತಿ ಆಗುತ್ತಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

Download Eedina App Android / iOS

X