ತ್ವರಿತಗತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರಿಂದ ಸೂಚನೆ

Date:

Advertisements
  • ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ
  • ಆದೇಶ ನೀಡದೇ ಇರುವ ಒತ್ತುವರಿಗಳಿಗೆ ಕೂಡಲೆ ಆದೇಶಗಳನ್ನು ನೀಡಿ ಒತ್ತುವರಿ ತೆರವು ಮಾಡಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಮಾರ್ಕ್ ಮಾಡಿದ್ದು, ತಹಶೀಲ್ದಾರ್ ಅವರಿಂದ ಆದೇಶಗಳನ್ನು ಜಾರಿಮಾಡಿರುವಂತಹ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರಿಗೆ ತಹಶೀಲ್ದಾರ್ ಅವರಿಂದ ಆದೇಶ ನೀಡಿರುವಂತಹ ಒತ್ತುವರಿಗಳನ್ನು ಕೂಡಲೆ ತೆರವುಗೊಳಿಸಬೇಕು. ಆದೇಶಗಳನ್ನು ನೀಡದೇ ಇರುವ ಒತ್ತುವರಿಗಳಿಗೆ ಕೂಡಲೆ ಆದೇಶಗಳನ್ನು ನೀಡಿ ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಬೇಕೆಂದು” ಅಧಿಕಾರಿಗಳಿಗೆ ಸೂಚಿಸಿದರು.

“ನಗರದ ಎಲ್ಲ ವಲಯಗಳಲ್ಲಿಯೂ ಬೃಹತ್ ನೀರುಗಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕು. ಈ ಸಂಬಂಧ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಪೊಲೀಸ್ ಭದ್ರತೆಯೊಂದಿಗೆ ಒತ್ತುವರಿಗಳ ತೆರವು ಮಾಡಬೇಕು” ಎಂದು ಅಧಿಕಾರಿಗಳಿಗೆ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರಕಾಶಿ ಸುರಂಗ ಕುಸಿತದಲ್ಲಿವೆ ಹಿಂದು-ಮುಸ್ಲಿಮ್ ಏಕತೆ ಪಾಠಗಳು

ನ್ಯಾಯಾಲಕ್ಕೆ ನೀಡಿರುವ ಮಾಹಿತಿಯಂತೆ ಕ್ರಮ

“ಉಚ್ಚ ನ್ಯಾಯಾಲಯಕ್ಕೆ ಪಾಲಿಕೆಯಿಂದ ವರದಿಯನ್ನು ನೀಡಲಾಗಿದೆ. ಅದರಂತೆ, ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ, ನಗರದಲ್ಲಿ ಹೊಸ ಒತ್ತುವರಿಗಳು ಸೇರಿದಂತೆ 3,147 ಒತ್ತುವರಿಗಳನ್ನು ಗುರುತಿಸಲಾಗಿದ್ದು, 2,247 ಒತ್ತುವರಿಗಳನ್ನು ಇದುವರೆಗೆ ತೆರವುಗೊಳಿಸಲಾಗಿದೆ” ಎಂದರು.

“ಇನ್ನು 900 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದ್ದು, ಈ ಪೈಕಿ 130 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿದ್ದು, 401 ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 370 ಒತ್ತುವರಿಗಳಿಗೆ ತಹಶಿಲ್ದಾರರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ” ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಕೆರೆಗಳ ಒತ್ತುವರಿಗಳನ್ನು ಗುರುತಿಸಿ ಸಮೀಕ್ಷೆ ನಡೆಸಿ

ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಿದೆ ಎಂಬುದನ್ನು ಗುರುತಿಸಿ, ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಕ್ರಿಯಾ ಯೋಜನೆ ಪ್ರಕಾರ ಕ್ರಮವಹಿಸಲು ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ ಪಾಲಿಕೆ ವ್ಯಾಪ್ತಿಯಲ್ಲಿ 130 ಕೆರೆಗಳ ಸರ್ವೇ ಮಾಡಲು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಕೇಳಲಾಗಿದೆ. ಅದರಂತೆ ಇದುವೆರೆಗೆ ಅಂದಾಜು 20 ಕೆರೆಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಉಳಿದ ಕೆರೆಗಳಲ್ಲಿ ಒತ್ತುವರಿ ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಯಿತು‌.

ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳಲ್ಲಿ ಹಂತ-ಹಂತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ವಲಯ ಮುಖ್ಯ ಅಭಿಯಂತರರಿಗೆ ಸೂಚನೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X