ಬಜೆಟ್ ಅಧಿವೇಶನ | ಖರ್ಗೆ ನೇತೃತ್ವದಲ್ಲಿ ಸಮಾನ ಮನಸ್ಕ ಪಕ್ಷಗಳಿಂದ ಸಭೆ

Date:

  • ಕಾಂಗ್ರೆಸ್ ಸಂಸದರಿಂದ ಕಾರ್ಯ ಕಲಾಪ ಅಮಾನತು ನೋಟಿಸ್
  • ಅದಾನಿ ವಿಷಯ ಚರ್ಚೆಗೆ ಆಗ್ರಹಿಸಲು ಪ್ರತಿಪಕ್ಷಗಳ ತೀರ್ಮಾನ

ಸಂಸತ್ ಬಜೆಟ್ ಅಧಿವೇಶನದ ಎರಡನೇ ಅವಧಿಯೂ ಆಡಳಿತ ಹಾಗೂ ಪ್ರತಿಪಕ್ಷಗಳ ಗದ್ದಲದಲ್ಲಿ ಕರಗಿ ಹೋಗುತ್ತಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಡುವೆ ಜಟಾಪಟಿ ತೀವ್ರಗೊಂಡಿದೆ.

ಅದಾನಿ ಕುರಿತ ಹಿಂಡನ್ಬರ್ಗ್ ವರದಿ ಬಗ್ಗೆ ತನಿಖೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಈ ನಿಟ್ಟಿನಲ್ಲಿ ಸೋಮವಾರ (ಮಾರ್ಚ್ 20) ಬೆಳಿಗ್ಗೆ ಸದನದಲ್ಲಿ ಮುಂದಿನ ಕಾರ್ಯತಂತ್ರ ರೂಪಿಸುವ ಬಗ್ಗೆ ಪ್ರತಿಪಕ್ಷಗಳು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಿವೆ. ಅದಾನಿ ವಿಷಯದ ಕುರಿತು ಚರ್ಚೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸದನದ ಕಾರ್ಯ ಕಲಾಪ ಅಮಾನತು ನೋಟಿಸ್ ನೀಡಿದ್ದಾರೆ.

ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದಾರೆ ಎಂದು ಆರೋಪದ ಸಂಬಂಧ ಭಾನುವಾರ (ಮಾರ್ಚ್ 19) ಬೆಳಿಗ್ಗೆ ದೆಹಲಿಯ ತಮ್ಮ ನಿವಾಸಕ್ಕೆ ಬಂದ ಪೊಲೀಸರಿಗೆ ಉತ್ತರವನ್ನು ನೀಡಿದ್ದರು. ಬಳಿಕ ಕಾಂಗ್ರೆಸ್ ನೇತೃತ್ವದಲ್ಲಿ ಸಮಾನ ಮನಸ್ಕ ಪಕ್ಷಗಳು ಈ ತೀರ್ಮಾನ ಕೈಗೊಂಡಿವೆ.

ನಿಯಮ 267ರಡಿ ಅದಾನಿ ವಿಷಯದ ಕುರಿತು ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ವಿಫಲವಾಗಿರುವ ಕೇಂದ್ರ ಸರ್ಕಾರ ಚರ್ಚೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸಂಸದ ರಂಜೀತ್ ರಂಜನ್ ನೋಟಿಸ್ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? 45 ದಿನಗಳ ನಂತರ ಈಗೇಕೆ ನೋಟಿಸ್? ಕೇಂದ್ರದ ನಡೆಗೆ ಕಾಂಗ್ರೆಸ್ ಆಕ್ರೋಶ

ಅದಾನಿ ವಿಷಯ ಹಾಗೂ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ ಕುರಿತು ಚರ್ಚಿಸುವಂತೆ ಮಾಣಿಕಂ ಟ್ಯಾಗೋರ್,ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಸಲ್ಲಿಸಿದ್ದಾರೆ.

“ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕು. ಪ್ರಜಾಪ್ರಭುತ್ವದಲ್ಲಿ ಮಾತನಾಡಲು ಅವಕಾಶವಿಲ್ಲದಿದ್ದರೆ ಅದು ಹೇಗೆ ಕಾರ್ಯನಿರ್ವಹಿಸುತ್ತದೆ?” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

Suprabha
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ತಡೆಯಲು ಯಾರಿಂದಲೂ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಮಸೂದೆ ವಿಳಂಬ: ಸಿಎಂ, ಸಚಿವರನ್ನು ಭೇಟಿಯಾಗುವಂತೆ ಕೇರಳ ರಾಜ್ಯಪಾಲರಿಗೆ ಸುಪ್ರೀಂ ಸೂಚನೆ

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಎಂಟು ಮಸೂದೆಗಳ ಬಗ್ಗೆ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...