ಹೈಕಮಾಂಡ್‌ನಿಂದ ನೋಟಿಸ್: ‘ಪ್ರತಿ ಕೈಗೆ ಸಿಕ್ಕ ಬಳಿಕ ಉತ್ತರಿಸುವೆ’ ಎಂದ ಬಿ ಕೆ ಹರಿಪ್ರಸಾದ್‌

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರಿಗೆ ನೋಟಿಸ್ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಬಿಕೆ ಹರಿಪ್ರಸಾದ್, ”ನೋಟಿಸ್ ಬಂದಿರುವ ಬಗ್ಗೆ ವಾಟ್ಸಪ್‌ನಲ್ಲಿ ನೋಡಿದೆ. ಪ್ರತಿ ಇವತ್ತು ನನಗೆ ಬರಬಹುದು. ಪ್ರತಿ ಕೈಗೆ ಸಿಕ್ಕ ಬಳಿಕ ಅದಕ್ಕೆ ಉತ್ತರಿಸುತ್ತೇನೆ” ಎಂದು ತಿಳಿಸಿದರು.

”ಆ ನೋಟಿಸು ಪಕ್ಷ ಮತ್ತು ನನಗೆ ಸಂಬಂಧಿಸಿದ್ದು. ಎಐಸಿಸಿಯ ಶಿಸ್ತು ಕಮಿಟಿ ನೋಟಿಸ್ ಕೊಟ್ಟಾಗ ಅದಕ್ಕೆ ನಾನು ಅಧಿಕೃತವಾಗಿ ಉತ್ತರ ನೀಡುತ್ತೇನೆ. 10 ದಿವಸ ಸಮಯ ಕೊಟ್ಟಿದ್ದಾರೆ” ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೋಟಿಸ್ ಯಾಕೆ?
ಕಳೆದ ಶನಿವಾರ ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಹರಿಪ್ರಸಾದ್‌ ಅವರು ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು.

“ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂತ ಹೇಳಿದರೆ ಆಗುವುದಿಲ್ಲ. ದೇವರಾಜ ಅರಸು ಕಾರಿನಲ್ಲಿ ಹೋದಾಕ್ಷಣ ದೇವರಾಜ ಅರಸು ಆಗುವುದಿಲ್ಲ, ಅವರ ಚಿಂತನೆ ಇರಬೇಕು” ಎಂದಿದ್ದರು.

“ನಾನು ಅಧಿಕಾರ ಸಿಕ್ಕಿಲ್ಲವೆಂದು ಅಡ್ವಾಣಿ ಅವರನ್ನು ಭೇಟಿ ಮಾಡಿ, ಅವರ ಮನೆಯಲ್ಲಿ ಉಪಾಹಾರ ಸ್ವೀಕರಿಸಿ ಬಿಜೆಪಿ ಸೇರಲು ಹೋಗಿರಲಿಲ್ಲ. ಯಾರು ಹೋಗಿದ್ದರು ಎಂಬುದಕ್ಕೆ ಸಾಕ್ಷಿಯಾಗಿದ್ದ ವೆಂಕಯ್ಯ ನಾಯ್ಡು ಹಾಗೂ ಅರವಿಂದ ಲಿಂಬಾವಳಿ ಈಗಲೂ ಇದ್ದಾರೆ” ಎಂದು ಹೇಳಿದ್ದರು.

ಈ ಸಂಬಂಧ ಹೈಕಮಾಂಡ್ ಬಳಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹರಿಪ್ರಸಾದ್‌ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

ನೋಟಿಸ್‌ನಲ್ಲಿ ತಮ್ಮ ಪತ್ರಕ್ಕೆ 10 ದಿನಗಳ ಒಳಗೆ ಉತ್ತರಿಸುವಂತೆ ಕಾಂಗ್ರೆಸ್ ಶಿಸ್ತು ಕಮಿಟಿಯ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...

ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು...