ಜಲಾಶಯ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸೂಚನೆ, ರೈತರು ಹೆದರಬೇಕಿಲ್ಲ: ಸಿದ್ದರಾಮಯ್ಯ

Date:

ತುಂಗಭದ್ರಾ ಜಲಾಶಯ ಗೇಟ್‌ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆ.13) ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ತುಂಗಭದ್ರಾ ಜಲಾಶಯದ ನೀರನ್ನು ಗೇಟ್‌ಗಳ ಮೂಲಕ ಬಿಡಲಾಗುತ್ತಿದೆ. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 70 ವರ್ಷಗಳಷ್ಟು ಹಳೆಯದಾದ ಡ್ಯಾಂನಲ್ಲಿ ಇಲ್ಲಿನವರೆಗೆ ಯಾವುದೇ ಗೇಟ್ ನ ಚೈನ್ ತುಂಡಾಗಿರಲಿಲ್ಲ” ಎಂದು ವಿವರಿಸಿದರು.

ತಜ್ಞರ ಸಲಹೆ ಮೇರೆಗೆ ದುರಸ್ತಿ ಕಾರ್ಯ

“ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು ರೈತರ ಜಮೀನಿಗೆ ಬಿಡಲಾಗಿದೆ. ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19 ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು.

“ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ. ಗೇಟ್‌ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗುತ್ತವೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ” ಎಂದರು.

ಆಗಸ್ಟ್ 17 ರಿಂದ ರಾಜ್ಯದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ

“ಕರ್ನಾಟಕದಲ್ಲಿ ಸುಮಾರು 9 ಲಕ್ಷ ಹಾಗೂ ಆಂಧ್ರ ತೆಲಂಗಾಣಗಳಲ್ಲಿ ಸುಮಾರು 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾಕಿರುವ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅದಲ್ಲದೇ, ಆಗಸ್ಟ್ 17 ರಿಂದ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಬರುವ ನಿರೀಕ್ಷೆ ಇದೆ” ಎಂದು ಹೇಳಿದರು.

ಘಟನೆ ಬಗ್ಗೆ ವಿಶ್ಲೇಷಣೆ ಅಗತ್ಯ

ಕೆಲವರ್ಷಗಳಿಂದ ಜಲಾಶಯದ ದುರಸ್ತಿಯಿಂದಾಗಿ ನೀರು ಪೋಲಾಗುತ್ತಿರುವ ಬಗ್ಗೆ ಪ್ರಶ್ನಿಸಿದಾಗ, “2019 ಜಲಾಶಯದ ನೀರು ಬಿಡುವ ಕಾಲುವೆಗಳಲ್ಲಿ ಸಮಸ್ಯೆ ಆಗಿತ್ತೇ ಹೊರತು, ಜಲಾಶಯದ ಗೇಟ್ ಗಳಲ್ಲಿ ಯಾವುದೇ ಸಮಸ್ಯೆ ಆಗಿರಲಿಲ್ಲ. ತಜ್ಞರ ಸಲಹೆಯಂತೆ 50 ವರ್ಷಗಳಿಗೊಮ್ಮೆ ಗೇಟ್ ಹಾಗೂ ಸರಪಳಿಗಳನ್ನು ಬದಲಾಯಿಸಬೇಕಾಗಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಸರ್ಕಾರಗಳು ಕ್ರಮ ಕೈಗೊಳ್ಳಲಿದೆ” ಎಂದು ಸ್ಪಷ್ಟಪಡಿಸಿದರು.

ನವಲಿ ಜಲಾಶಯ: ಒಪ್ಪಿಗೆ ನಂತರ ಕಾಮಗಾರಿ ಪ್ರಾರಂಭ

“ನವಲಿ ಜಲಾಶಯ ನಿರ್ಮಾಣಕ್ಕೆ15 ಸಾವಿರ ಕೋಟಿ ರೂ.ಗಳ ಡಿಪಿಆರ್ ತಯಾರಾಗಿದ್ದು, ಇದು ಅಂತರರಾಜ್ಯ ಯೋಜನೆಯಾಗಿದೆ. ಡಿಪಿಆರ್ ಗೆ ಒಪ್ಪಿಗೆ ದೊರೆತ ನಂತರ ಕಾಮಗಾರಿ ಪ್ರಾರಂಭಿಸಲಾಗುವುದು” ಎಂದರು.

ಬಾಗಿನ ಅರ್ಪಿಸಲು ನಾನೇ ಬರುತ್ತೇನೆ

ತುಂಗಭದ್ರಾ ಜಲಾಶಯ ಮತ್ತೆ ತುಂಬುವ ವಿಶ್ವಾಸವಿದ್ದು, ಬಾಗಿನ ಅರ್ಪಿಸಲು ನಾನು ಮತ್ತೊಮ್ಮೆ ಆಗಮಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಲವರ ಪಾಲಿಗೆ ಕರಾಳ ದಿನವಾದ ಗಣೇಶ ಚತುರ್ಥಿ; ಜೂನ್‌, ಜುಲೈ, ಆಗಸ್ಟ್‌ನಲ್ಲೇ ಹೆಚ್ಚು ರಸ್ತೆ ಅಪಘಾತ

ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರಿಂದ ಅಪಘಾತಗಳಲ್ಲಿ ಸಾವನ್ನಪ್ಪುವವರ...

ಜೈವಿಕ ತಂತ್ರಜ್ಞಾನ ನೀತಿ 2024-2029 ಅನಾವರಣ; 1,000ಕ್ಕೂ ಹೆಚ್ಚು ನವೋದ್ಯಮ ಸ್ಥಾಪನೆಯ ಗುರಿ

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ...

ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಕಲುಷಿತ : ಎಚ್ಚರಿಕೆ ನೀಡಿದ ಗ್ರೀನ್ ಪೀಸ್ ವರದಿ

ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ...

ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ...