ತಮ್ಮ ಹಗರಣಗಳಿಗೆ ರಕ್ಷಣೆ ಪಡೆಯಲು ನಟೋರಿಯಸ್ ಗ್ಯಾಂಗ್‌ ಸಿಎಂ ಅವರನ್ನು ಖೆಡ್ಡಾಗೆ ಕೆಡವಿದೆ: ಸಿ ಟಿ ರವಿ

Date:

ತಮ್ಮ ಹಗರಣಗಳಿಗೆ ರಕ್ಷಣೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ನಟೋರಿಯಸ್ ಗ್ಯಾಂಗ್‌ ಖೆಡ್ಡಾಗೆ ಕೆಡವಿಕೊಂಡಿದೆ. ನಾವು ಮಾತ್ರ ಸಿದ್ದರಾಮಯ್ಯ ಮೇಲೆ ಆರೋಪ ಮಾಡುತ್ತಿಲ್ಲ ಎಂದು ವಿಧಾನ ಪರಿಷತ್​ ಬಿಜೆಪಿ ಸದಸ್ಯ ಸಿ ಟಿ ರವಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

- Advertisement -

ಚಿಕ್ಕಮಗಳೂರಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೇವಲ ಸಿದ್ದರಾಮಯ್ಯನವರ ಕುಟುಂಬ ಮಾತ್ರ ಮುಡಾ ಹಗರಣದಲ್ಲಿ ಭಾಗಿಯಾಗಿಲ್ಲ. 1,600ಕ್ಕೂ ಹೆಚ್ಚು ನಿವೇಶನಗಳನ್ನ ಇದೆ ರೀತಿ ಪರಬಾರಿ ಮಾಡಲಾಗಿದೆ ಎಂಬ ಆರೋಪ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಮೈಸೂರಿನಂತಹ ಸ್ಥಳದಲ್ಲೇ ಹೀಗಾಗಿರುವಾಗ ಬೆಂಗಳೂರಿನಲ್ಲಿ ಎಷ್ಟಾಗಿರಬಹುದು? ಬೇರೆ ಬೇರೆ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲೂ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ವಿಧಾನಸಭೆ, ವಿಧಾನ ಪರಿಷತ್​ನಲ್ಲಿ ಚರ್ಚೆಗೆ ಒತ್ತಾಯ ಮಾಡಿದ್ದೇವು. ದುರ್ದೈವದ ಸಂಗತಿ ಎಂದರೆ ಆಡಳಿತ ಪಕ್ಷ ಚರ್ಚೆಗೂ ಅವಕಾಶ ಕೊಡಲಿಲ್ಲ” ಎಂದು ತಿಳಿಸಿದರು.

“ಸಿದ್ದರಾಮಯ್ಯ ಒಂದು ಪತ್ರ ಇದ್ದರೆ ತೋರಿಸಿ ಅಂತಾರೆ. ಅವರ ಪತ್ನಿಯೇ ಬರೆದ ಪತ್ರ ಇದೆ. ಕೆಸವೆ ಗ್ರಾಮದಲ್ಲಿ 2001ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಡೆವಲಪ್ ಮಾಡಿದೆ. ಎಲ್​ಎನ್​ಟಿ ಕಂಪನಿ ಅವರಿಗೆ ಗುತ್ತಿಗೆ ಕೊಟ್ಟಿರುವ ದಾಖಲೆಗಳಿವೆ” ಎಂದು ಹೇಳಿದರು.

“ಎಷ್ಟು ಡಿನೋಟಿಫೈ ಮಾಡಿದ್ದಾರೆ? ಯಾವ ಕಾರಣಗಳಿಗೆ ಮಾಡಿದ್ದಾರೆ? ಯಾರಿಗೆ ಬದಲಿ ನಿವೇಶನ ಕೊಟ್ಟಿದ್ದಾರೆ? ಎಲ್ಲವೂ ಹೊರಬರುತ್ತೆ. ಸೆಟ್ಲ್​​ಮೆಂಟ್​ ಡೀಡ್ ಅನ್ನುವುದೇ ಪ್ರಾಧಿಕಾರದಲ್ಲಿ ಇರುವುದಿಲ್ಲ. ಎಲ್ಲರೂ ದೊಡ್ಡ ದೊಡ್ಡ ಪ್ರಭಾವಿಗಳೇ ಇರೋದು. ನಮ್ಮ ಬಳಿ ಆರೋಪ ಸಾಬೀತು ಮಾಡುವ ಕೆಲ ದಾಖಲೆಗಳಿವೆ” ಎಂದು ತಿಳಿಸಿದರು.

“ಮುಡಾ ಪ್ರಕರಣದಲ್ಲಿ ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮೂರು ನಡೆದಿದೆ. ನಮ್ಮ ಹತ್ತಿರವು ಕೆಲ ದಾಖಲೆಗಳಿವೆ. ನ್ಯಾಯಾಲಯ ತನಿಖೆಗೆ ಆದೇಶ ನೀಡಿದ ಬಳಿಕ ದಾಖಲೆಗಳನ್ನು ನೀಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಎದುರು ನೋಡುತ್ತಿದ್ದೇವೆ” ಎಂದರು.

“12 ನಿವೇಶನಗಳನ್ನ 2003ರಲ್ಲಿ ಹಂಚಿಕೆ ಆಗಿರುವುದಕ್ಕೆ ದಾಖಲೆಗಳಿವೆ. ಅಭಿವೃದ್ಧಿ ಆಗಿರುವ ಜಾಗವನ್ನು ಇವರ ಭಾವ ತೆಗೆದುಕೊಂಡಿರುವುದೇ ಅಪರಾಧ. ಮೂಲ ವಾರಸುದಾರರು ಅಲ್ಲದವರ ಬಳಿ ಜಾಗ ತೆಗೆದುಕೊಂಡಿದ್ದಾರೆ. ಜಾಗ ಖರೀದಿ ಇಂದ ಹಿಡಿದು ಕನ್ವರ್ಷನ್​ವರೆಗೂ ಅಕ್ರಮವೇ ನಡೆದಿದೆ. ಸಿದ್ದರಾಮಯ್ಯ ಅರ್ಧ ಸತ್ಯ ಹೇಳುತ್ತಿದ್ದಾರೆ” ಎಂದು ಹೇಳಿದರು.

“ಮುಡಾ ಪ್ರಕರಣ ಬೆಳಕಿಗೆ ಬಂದ ತಕ್ಷಣ ನಗರ ಅಭಿವೃದ್ಧಿ ಸಚಿವ ಬೈರತಿ ಸುರೇಶ್ ಮೈಸೂರಿಗೆ ಹೋಗಿ ದಾಖಲೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಇದೆ. ತನಿಖೆ ಕೊಡುವ ಮೂರು ದಿನದ ಮುಂಚೆ ವಾರಗಟ್ಟಲೆ ಮೈಸೂರಿನಲ್ಲಿ ಕುಳಿತ್ತಿದ್ದರು. ಕೆಲವು ದಾಖಲೆಗಳನ್ನು ಇಲ್ಲದಂತೆ ಮಾಡಿದ್ದಾರೆ. ಹಳೆಯ ಅಧಿಕಾರಿಗಳನ್ನು ಕರೆಸಿ ಸಹಿ ಮಾಡಿಸಿದ್ದಾರೆ ಎಂಬ ದೂರು ನಮಗೆ ಬಂದಿತ್ತು ಹೀಗಾಗಿ ನಾವು ತನಿಖೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ಮಾಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...