ಕರ್ನಾಟಕದ ಹಾಲು ಕಳಪೆ ಗುಣಮಟ್ಟದ್ದು ಎಂದು ವಿವಾದ ಸೃಷ್ಟಿಸಿದ ಕೇರಳ ಸಚಿವೆ

Date:

Advertisements

ನಂದಿನಿ ಹಾಲಿನ ಗುಣಮಟ್ಟ ಕಳಪೆಯಾಗಿದ್ದು, ಆದ ಕಾರಣ ಕೇರಳ ಜನರು ಕೆಸಿಎಂಎಂಎಫ್​​ನ ಮಿಲ್ಮಾ ಹಾಲನ್ನು ಮಾತ್ರ ಸೇವಿಸುವಂತೆ ನಾನು ವಿನಂತಿಸುತ್ತೇನೆ ಎಂದು ಕೇರಳದ ಪಶುಸಂಗೋಪನಾ ಸಚಿವೆ ಜೆ ಚಿಂಚು ರಾಣಿ ವಿವಾದಿತ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇರಳ ಪ್ರವೇಶಿಸುವ ಮುನ್ನ ಕರ್ನಾಟಕ ಹಾಲು ಒಕ್ಕೂಟವು ನಮ್ಮ ರಾಜ್ಯದ ಅಧಿಕಾರಿಗಳಿಂದ ಅನುಮತಿ ಪಡೆಯಬೇಕಿತ್ತು. ಈ ಬಗ್ಗೆ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಗೆ ದೂರು ನೀಡುತ್ತೇವೆ. ನಮ್ಮ ಮನೆಗಳಲ್ಲಿ ಹೆಚ್ಚಾಗಿ ಮಕ್ಕಳು ಹಾಲು ಸೇವಿಸುತ್ತಾರೆ. ಆದರೆ ನಂದಿನಿ ಹಾಲಿನ ಗುಣಮಟ್ಟ ಕಳಪೆಯಾಗಿದೆ. ಹೀಗಾಗಿ ಕೇರಳದ ಜನರು ಕೆಸಿಎಂಎಂಎಫ್​​ನ ಮಿಲ್ಮಾ  ಹಾಲನ್ನು ಮಾತ್ರ ಸೇವಿಸುವಂತೆ ನಾನು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಮಿಲ್ಮಾ ಬ್ರ್ಯಾಂಡ್‌ನ ಅಧ್ಯಕ್ಷ ಕೆ ಎಸ್ ಮಣಿ ಮಾತನಾಡಿ, ನಂದಿನಿ ಹಾಲು ಕೇರಳಕ್ಕೆ ತನ್ನ ಮಾರಾಟವನ್ನು ವಿಸ್ತರಿಸುವ ಕ್ರಮವು ಅನೈತಿಕವಾಗಿದೆ. ಇದು ಭಾರತದ ಡೈರಿ ಚಳವಳಿಯ ಉದ್ದೇಶವನ್ನು ನಾಶಪಡಿಸುತ್ತದೆ. ಮೊದಲು ಮೌಲ್ಯವರ್ಧಿತ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದ ಅವರು ಈಗ ಹಾಲು ಕೂಡ ಮಾರಾಟ ಮಾಡುತ್ತಿದ್ದಾರೆ. ಅವರು ಕೇರಳದಲ್ಲಿ ಹಾಲನ್ನು ಅಂಗಡಿಯಿಂದ ಅಂಗಡಿಗೆ ವಿತರಿಸಲು ಪ್ರಾರಂಭಿಸಿದರು. ಈ ಬಗ್ಗೆ ನಾವು ಕೆಎಂಎಫ್‌ಗೆ ಪತ್ರ ಬರೆದಿದ್ದು, ಅಲ್ಲಿನವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದಾರಾ? 500 ಚಂದಾದಾರರಿದ್ದರೆ ಸಾಕು: ಹಣ ಗಳಿಕೆಯ ನಿಯಮ ಸಡಿಲಗೊಳಿಸಿದ ಯೂಟ್ಯೂಬ್

ಕರ್ನಾಟಕದ ಹಾಲು ಸಹಕಾರಿ ಸಂಸ್ಥೆಯಾದ ಕೆಎಂಎಫ್​​ನ ನಂದಿನಿ ಬ್ರ್ಯಾಂಡ್​ ಈ ವರ್ಷದ ಏಪ್ರಿಲ್‌ನಲ್ಲಿ ಕೊಚ್ಚಿಯ ಮಾಮಲ್ಲಪುರಂನಲ್ಲಿ ತನ್ನ ಪಾರ್ಲರ್‌ಗಳನ್ನು ತೆರೆದಿದೆ ಮತ್ತು ಮುಂದಿನ ದಿನಗಳಲ್ಲಿ ಇತರ ಪ್ರದೇಶಗಳಿಗೆ ವಿಸ್ತರಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಕೇರಳ ಸರ್ಕಾರವು ನಂದಿನಿಯ ಉಪಸ್ಥಿತಿಯನ್ನು ವಿರೋಧಿಸಿತ್ತು ಮತ್ತು ಅದನ್ನು ‘ಅನೈತಿಕ’ ಎಂದು ಕರೆದಿತ್ತು.

ಕೇರಳ ಸಚಿವರು ಹಾಗೂ ಕೆಸಿಎಂಎಂಎಫ್‌ನ ಆಕ್ಷೇಪಗಳಿಗೆ ಕರ್ನಾಟಕದ ಸಹಕಾರ ಸಚಿವ ಕ್ಯಾತಸಂದ್ರ ರಾಜಣ್ಣ ಸುದ್ದಿಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ್ದು, ಕೇರಳದಲ್ಲಿ ನಂದಿನಿಯ ವ್ಯವಹಾರದಲ್ಲಿ ಅನೈತಿಕ ಏನೂ ಇಲ್ಲ. ಪ್ರಜಾಪ್ರಭುತ್ವ ದೇಶದಲ್ಲಿ ಯಾರು ಬೇಕಾದರೂ ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಇದರಲ್ಲಿ ಅನೈತಿಕವಾದುದೇನೂ ಇಲ್ಲ. ಇದೊಂದು ಸ್ಪರ್ಧೆ. ಗ್ರಾಹಕರು ಉತ್ತಮ ಗುಣಮಟ್ಟವನ್ನು ನೀಡುವ ಉತ್ಪನ್ನವನ್ನು ಮಾತ್ರ ಆಯ್ಕೆ ಮಾಡುತ್ತಾರೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X