ನ್ಯಾಯ ಯಾತ್ರೆ | ಸೀಟು ಹಂಚಿಕೆಯಾದ ಬೆನ್ನಲ್ಲೇ ರಾಹುಲ್ ಜೊತೆ ಹೆಜ್ಜೆ ಹಾಕಿದ ಅಖಿಲೇಶ್

Date:

ಉತ್ತರ ಪ್ರದೇಶದ ಆಗ್ರಾ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾಗಿಯಾಗಿದ್ದಾರೆ. ಎಸ್‌ಪಿ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದದ ಕಸರತ್ತು ಮುಗಿಯುತ್ತಿದ್ದಂತೆಯೇ ಅಖಿಲೇಶ್‌ ಅವರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಜೊತೆ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ.

- Advertisement -

‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರಲ್ಲಿ ಅಖಿಲೇಶ್ ಕೂಡ ಒಬ್ಬರು. ನ್ಯಾಯ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟಾಗ, ‘ಸೀಟು ಹಂಚಿಕೆ ಅಂತಿಮಗೊಳ್ಳುವವರೆ ತಮ್ಮ ಪಕ್ಷವು ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ’ ಎಂದು ಅಖಿಲೇಶ್ ಹೇಳಿದ್ದರು. ಇದೀಗ, ಉತ್ತರ ಪ್ರದೇಶದಲ್ಲಿ 17 ಸ್ಥಾನಗಳನ್ನು ಎಸ್‌ಪಿ ಬಿಟ್ಟುಕೊಟ್ಟಿದೆ. ಅದಕ್ಕೆ ಪ್ರತಿಯಾಗಿ, ಮಧ್ಯಪ್ರದೇಶದಲ್ಲಿ ಎಸ್‌ಪಿಗೆ 1 ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್‌ ಒಪ್ಪಿಕೊಂಡಿದೆ. ಹೀಗೆ, ಸೀಟು ಹಂಚಿಕೆಯಾದ ಬೆನ್ನಲ್ಲೇ ಅವರು ನ್ಯಾಯ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಈ ಸುದ್ದಿ ಓದಿದ್ದೀರಾ?: ರಾಜ್ಯಸಭಾ ಚುನಾವಣೆ: ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗೆ 45 ಮತ ಗಳಿಸುವುದೇ ಸವಾಲು

ಇನ್ನು, ನ್ಯಾಯ ಯಾತ್ರೆ ಪಶ್ಚಿಮ ಬಂಗಾಳದಲ್ಲಿ ಹಾದುಹೋದಾಗ ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್‌ ನಡುವೆ ಸೀಟು ಹಂಚಿಕೆ ಜಗಳ ನಡೆಯುತ್ತಿತ್ತು. ಹೀಗಾಗಿ, ಅವರು ಸಂಪೂರ್ಣವಾಗಿ ಯಾತ್ರೆಯಿಂದ ದೂರ ಉಳಿದಿದ್ದರು. ಈಗಲೂ ಸೀಟು ಹಂಚಿಕೆಯ ತಿಕ್ಕಾಟ ನಡೆಯುತ್ತಲೇ ಇದೆ. ಸೌಹಾರ್ದಯುತವಾಗಿ ಸೀಟು ಹಂಚಿಕೆ ಮಾಡಿಕೊಂಡು, ಮೈತ್ರಿಯಲ್ಲಿ ಮುನ್ನಡೆಯಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...