ನ್ಯಾಯಯಾತ್ರೆಗೆ ತಡೆ | ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ಆರೋಪ

Date:

ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಪಿರಿಯಾಪಟ್ಟಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ. ಪ್ರತಿ ನಾಗರಿಕನಿಗೂ ಪಾದಯಾತ್ರೆ ಕೈಗೊಳ್ಳಲು ಅಥವಾ ಯಾವುದೇ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ವಾತಂತ್ರ್ಯವನ್ನು ಸಂವಿಧಾನ ಕೊಟ್ಟಿದೆ. ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪ್ರಚೋದನೆ ನೀಡುವುದು ಸಂವಿಧಾನಬಾಹಿರ ನೆಹರೂ ಕುಟುಂಬಕ್ಕೆ ಬೆದರಿಕೆಯಿದ್ದು, ಭಾರತ ಸರ್ಕಾರ ಹಾಗೂ ಅಸ್ಸಾಂ ರಾಜ್ಯ ಸರ್ಕಾರಗಳು ರಾಹುಲ್ ಗಾಂಧಿಯವರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕಾಗಿರುವುದು ಅವರ ಕರ್ತವ್ಯ. ಇದು ಅವರ ಕರ್ತವ್ಯಲೋಪ ಎಸೆಗಿದಂತಾಗುತ್ತದೆ ಎಂದರು. ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳು ಮೊದಲು ಕಾಂಗ್ರೆಸ್‍ನಲ್ಲಿದ್ದು, ನಂತರ ಬಿಜೆಪಿಗೆ ಹೋಗಿ ಮುಖ್ಯಮಂತ್ರಿಗಳಾಗಿದ್ದಾರೆ. ಅಮಿತ್ ಶಾ ಹಾಗೂ ನರೇಂದ್ರ ಮೋದಿಯವರನ್ನು ಮೆಚ್ಚಿಸಲೆಂದು ಈ ರೀತಿ ಮಾಡುತ್ತಿದ್ದಾರೆ. ಅದು ಅವರ ಕರ್ತವ್ಯ ಲೋಪವಲ್ಲದೇ ಅವರ ಭದ್ರತಾ ವ್ಯವಸ್ಥೆ ಸಂಪೂರ್ಣವಾಗಿ ಸೋತಿದೆ. ಹಾಗೂ ಇಂಥದ್ದಕ್ಕೆ ಪ್ರಚೋದನೆ ನೀಡುವುದು ಸಂವಿಧಾನಬಾಹಿರ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?

ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆಯುವುದಿಲ್ಲ

ಜಗದೀಶ್ ಶೆಟ್ಟರ್ ಅವರು ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಪುನಃ ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಪದೇ ಪದೇ ಉದ್ದೇಶಪೂರ್ವಕವಾಗಿ ಬಿಜೆಪಿ ಈ ಮಾತನ್ನು ಹರಿಯಬಿಡುತ್ತಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದರು.

ಪರಿಹಾರ: ಪ್ರಧಾನಿಗಳ ಗಮನಕ್ಕೆ ತರಲಾಗಿದೆ

“ಕೇಂದ್ರಕ್ಕೆ ಭೇಟಿ ನೀಡಿ ಅಮಿತ್ ಷಾ ಅವರನ್ನು ಭೇಟಿ ನೀಡಿದಾಗ ಡಿಸೆಂಬರ್ 23 ರಂದು ಸಭೆ ಕರೆದು ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇಂದಿನವರೆಗೂ ಬಿಡುಗಡೆಯಾಗಲ್ಲ. ಸಭೆ ಕರೆದು ಕಾರಣಾಂತರದಿಂದ ಮುಂದೂಡಿದರು. ಇತ್ತೀಚೆಗೆ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಿದಾಗ ಈ ವಿಷಯವನ್ನು ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದ ರೈತರು ಬರಗಾಲದಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ, ಕೂಡಲೇ ಬಿಡುಗಡೆ ಮಾಡಿ ಎಂದು ಅವರಿಗೆ ನೆನಪು ಮಾಡಿದ್ದೇನೆ” ಎಂದು ಹೇಳಿದರು.

“ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ ಇಂದಿನವರೆಗೆ ನಮ್ಮ ಸರ್ಕಾರ ದನಕರುಗಳಿಗೆ ಹಾಗೂ ಜನಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಜನರು ಗುಳೇ ಹೋಗದಂತೆ ನಿಭಾಯಿಸಿದ್ದೇವೆ. 550 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರವಾಗಿ ಈವರೆಗೆ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ಎಲ್ಲಾ ರೈತರಿಗೂ ಮೊದಲನೇ ಕಂತನ್ನು ತಲುಪಿಸುವ ಪ್ರಯತ್ನ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...