ಒಬಿಸಿ ಯುವಕನಿಂದ ಬ್ರಾಹ್ಮಣನ ಪಾದ ತೊಳೆಸಿ ನೀರು ಕುಡಿಸಿದ ಜಾತಿವಾದಿಗಳು: ನೆಟ್ಟಿಗರ ಆಕ್ರೋಶ

Date:

ಇತರೆ ಹಿಂದುಳಿದ ವರ್ಗಕ್ಕೆ(ಒಬಿಸಿ) ಸೇರಿದ ಯುವಕನೊಬ್ಬನಿಂದ ಜಾತಿವಾದಿಗಳು ಒತ್ತಾಯಪೂರ್ವಕವಾಗಿ ಬ್ರಾಹ್ಮಣ ಯುವಕನ ಪಾದ ತೊಳೆಸಿ ನೀರು ಕುಡಿಸಿದ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಬ್ರಾಹ್ಮಣ ವ್ಯಕ್ತಿಗೆ ಯುವಕ ಅವಮಾನ ಮಾಡಿದ್ದಕ್ಕೆ ಶಿಕ್ಷೆಯಿದು ಎಂದು ಜಾತಿವಾದಿಗಳು ಹೇಳಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿವಿಧ ಸಮುದಾಯಗಳ ನಡುವಿನ ಸಾಮರಸ್ಯಕ್ಕೆ ಧಕ್ಕೆ ತರುವ ಕೃತ್ಯ ಸೇರಿದಂತೆ ಹಲವು ಆರೋಪಗಳಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಶ್ವಾಹ ಸಮುದಾಯದ ಸದಸ್ಯರೊಬ್ಬರು ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬ್ರಾಹ್ಮಣ ರೋಹಿತ್‌ಗೆ ಒಂದು ಅಳತೆಗೋಲು – ಒಬಿಸಿ ವಿನೇಶ್‌ಗೆ ಬೇರೊಂದು ಅಳತೆಗೋಲು; ಇದೇ ಮನುವಾದಿ ಬಿಜೆಪಿಯ ಎರಡು ಮುಖ

ಒಬಿಸಿ ಸಮುದಾಯದ ಪರ್ಶೋತ್ತಮ್ ಕುಶ್ವಾಹ ಎಂಬ ಯುವಕ ಬ್ರಾಹ್ಮಣ ಅನ್ನು ಪಾಂಡೆ ಎಂಬ ಯುವಕನ ಪಾದ ತೊಳೆದು ಗ್ರಾಮಸ್ಥರ ಮುಂದೆ ನೀರು ಕುಡಿಯುವಂತೆ ಮಾಡಲಾಗಿದೆ. ಹಾಗೆಯೇ 5,100 ರೂ. ದಂಡ ವಿಧಿಸಲಾಗಿದ್ದು, ಬ್ರಾಹ್ಮಣ ಸಮುದಾಯದಲ್ಲಿ ಕ್ಷಮೆಯಾಚಿಸುವಂತೆ ಒತ್ತಾಯಿಸಲಾಗಿದೆ.

ಪಾರ್ಷೋತ್ತಮ್ ಕುಶ್ವಾಹ ಮತ್ತು ಅನ್ನು ಪಾಂಡೆ ವಾಸಿಸುವ ಸತಾರಿಯಾ ಗ್ರಾಮದಲ್ಲಿ ಮದ್ಯ ನಿಷೇಧಿಸಲಾಗಿದೆ. ಆದರೂ ಪಾಂಡೆ ಮದ್ಯ ಮಾರಾಟ ಮಾಡಿದ್ದು, ಸಿಕ್ಕಿಬಿದ್ದಾಗ, ಗ್ರಾಮಸ್ಥರು ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ತಿಳಿಸಿ 2,100 ರೂ. ದಂಡ ವಿಧಿಸಿದ್ದಾರೆ. ಪಾಂಡೆ ಈ ನಿರ್ಣಯವನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ ಎನ್ನಲಾಗಿದೆ.

ಆದರೆ ಪಾರ್ಷೋತ್ತಮ್ ಶೂಗಳ ಹಾರವನ್ನು ಧರಿಸಿರುವ ಅನ್ನುವಿನ AI- ರಚಿತ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾನೆ. ಕೆಲವೇ ನಿಮಿಷಗಳಲ್ಲಿ ಪಾರ್ಷೋತ್ತಮ್ ಪೋಸ್ಟ್ ಅನ್ನು ಡಿಲೀಟ್ ಮಾಡಿ ಕ್ಷಮೆಯಾಚಿಸಿದ್ದಾನೆ. ಆದರೆ ಅಷ್ಟರಲ್ಲೇ ಈ ಕೃತ್ಯವನ್ನು ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಅವಮಾನವೆಂದು ಬ್ರಾಹ್ಮಣರು ಬಣ್ಣಿಸಿದ್ದಾರೆ. ಇದು ಗ್ರಾಮದಲ್ಲಿ ಜಾತಿ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಬ್ರಾಹ್ಮಣ ಸಮುದಾಯದ ಒಂದು ಗುಂಪು ಒಟ್ಟುಗೂಡಿ ಪಾರ್ಷೋತ್ತಮ್ ಮಾಡಿದ ತಪ್ಪಿಗೆ ‘ಪ್ರಾಯಶ್ಚಿತ್ತ’ ಎಂದು ಹೇಳಿ ಪಾರ್ಷೋತ್ತಮ್‌ನಿಂದ ಪಾಂಡೆಯ ಪಾದಗಳನ್ನು ತೊಳೆಸಿ ಆ ನೀರನ್ನು ಕುಡಿಸಿದೆ. ಹಾಗೆಯೇ ಇಡೀ ಸಮುದಾಯಕ್ಕೆ ಕ್ಷಮೆಯಾಚಿಸುವಂತೆ ಒತ್ತಡ ಹೇರಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸದ್ಯ ಹರಿದಾಡುತ್ತಿದ್ದು ನೆಟ್ಟಿಗರು ಜಾತಿ ತಾರತಮ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ವೈರಲ್ ಆದ ನಂತರ ಎರಡೂ ಕಡೆಯವರು ನೆಟ್ಟಿಗರ ಆಕ್ರೋಶವನ್ನು ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ.

“ನಾನು ತಪ್ಪು ಮಾಡಿದೆ, ಮತ್ತು ನಾನು ಕ್ಷಮೆಯಾಚಿಸಿದ್ದೇನೆ. ಅನ್ನು ಪಾಂಡೆ ನನ್ನ ಕುಟುಂಬದ ಗುರು. ದಯವಿಟ್ಟು ಇದನ್ನು ರಾಜಕೀಯಗೊಳಿಸಬೇಡಿ” ಎಂದು ಪರ್ಶೋತ್ತಮ್ ಹೇಳಿಕೊಂಡಿದ್ದಾರೆ. ಅನ್ನು ಪಾಂಡೆ “ಇದು ನಮ್ಮೊಳಗಿನ ವಿಷಯ. ಕೆಲವರು ಇದನ್ನು ರಾಜಕೀಯಗೊಳಿಸುತ್ತಿದ್ದಾರೆ. ನಮ್ಮ ನಡುವೆ ಗುರು-ಶಿಷ್ಯ ಸಂಬಂಧವಿದೆ. ನಾನು ಅವರನ್ನು ಅವಮಾನಿಸಲಿಲ್ಲ. ಸ್ವಯಂಪ್ರೇರಿತವಾಗಿ ಅವರು ಈ ರೀತಿ ಮಾಡಿದ್ದಾರೆ” ಎಂದು ಹೇಳಿಕೊಂಡಿದ್ದಾರೆ.

ಎರಡೂ ಕಡೆಯವರೂ ಈ ಘಟನೆಯನ್ನು ಸಾಮಾನ್ಯೀಕರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಈ ವಿಡಿಯೋ ಗ್ರಾಮೀಣ ಪ್ರದೇಶದಲ್ಲಿ ಜಾತಿ ತಾರತಮ್ಯ ಇಂದಿಗೂ ಬೇರೂರಿರುವುದನ್ನು ಸ್ಪಷ್ಟಪಡಿಸಿದೆ. ಬ್ರಾಹ್ಮಣೇತರರು ಎಷ್ಟು ಕೀಳಾಗಿ ಕಾಣಲಾಗುತ್ತಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...