ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಸಿದ್ದರಾಮಯ್ಯ

Date:

Advertisements

ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಡಾ. ಬಿ ಆರ್ ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಬುಧವಾರ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿ, “ಅಂಬೇಡ್ಕರ್ ಅವರು ಇನ್ನೂ ಬದುಕಿರಬೇಕಿತ್ತು. ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು” ಎಂದರು.

“ಸಂವಿಧಾನದ ಕರ್ತೃ ಅಂಬೇಡ್ಕರ್ ಅವರು ದೇಶದ ಸಂವಿಧಾನವನ್ನು ಬಹಳ ಶ್ರಮ ವಹಿಸಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತದ ವ್ಯವಸ್ಥೆಗೆ ಎಂಥ ಸಂವಿಧಾನ ಬೇಕು ಎಂದು ಚಿಂತಿಸಿ ಸಂವಿಧಾನ ನೀಡಿದ್ದಾರೆ. ಸಾಮಾಜಿಕ ನ್ಯಾಯದ ಹಕ್ಕು, ಅಸಮಾನತೆಯನ್ನು ತೊಡೆದುಹಾಕುವ ಅಂಶ ಜಗತ್ತಿನ ಯಾವ ಸಂವಿಧಾನದಲ್ಲಿಯೂ ನೋಡಲು ಸಾಧ್ಯವಿಲ್ಲ” ಎಂದು ಹೇಳಿದರು.

Advertisements

“ಎಲ್ಲ ಜಾತಿ, ವರ್ಗ ಮತ್ತು ಬಡವರಿಗೆ ನ್ಯಾಯ ದೊರೆತಿದ್ದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೆ ಅದಕ್ಕೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿದ ಅಂಶಗಳೇ ಕಾರಣ. ಕಟ್ಟ ಕಡೆಯ ಮನುಷ್ಯನಿಗೂ ಶ್ರೀಮಂತರಿಗೂ ಒಂದೇ ಕಾನೂನು. ಅದಕ್ಕೆ 14 ನೇ ಪರಿಚ್ಛೇದದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು, ಎಲ್ಲರಿಗೂ ಕಾನೂನಿನ ರಕ್ಷಣೆಯಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಸ್ಮರಿಸಿದರು.

“ಒಂದು ದೇಶದ ಆಸ್ತಿ ಸಮಾನವಾಗಿ ಹಂಚಿಕೆಯಾಗಬೇಕು. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಪ್ರಜಾಪ್ರಭುತ್ವ ಉಳಿಯುವುದು ಕಷ್ಟ, ಅಧಿಕಾರ ಮತ್ತು ಆಸ್ತಿ ಸಮಾನವಾಗಿ ಹಂಚಿಕೆಯಾಗಬೇಕು ಎಂದು ಹೇಳಿದ್ದರು. ದೇಶಕ್ಕೆ ದೊರೆತ ಸ್ವಾತಂತ್ರ್ಯ ಯಶಸ್ವಿಯಾಗಲು ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿರಬೇಕು. ಇಲ್ಲವಾದರೆ ಅಸಮಾನತೆಯಿಂದ ನೊಂದ ಜನ ರಾಜಕೀಯ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದೂ ಹೇಳಿದ್ದರು. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು” ಎಂದರು.

“ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಪ್ರದರ್ಶನ ರಾಯಭಾರಿಯಾಗಿ ನೇಮಕ ಮಾಡಿದ್ದು, ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಉದಯೋನ್ಮುಖ ನಟ ಹಾಗೂ ಸಾಮಾಜಿಕ ಕಳಕಳಿ ಉಳ್ಳವರು. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣವಾಗಿದೆ. ಇದರಿಂದ ಲಿಡ್ಕರ್ ಉತ್ಪನ್ನಗಳು ಹೆಚ್ಚಾಗಿ ಮಾರಾಟವಾಗುವುದಲ್ಲದೆ ಚರ್ಮ ಉದ್ಯಮಕ್ಕೆ ಉತ್ತೇಜನ ದೊರೆಯಲಿದೆ” ಎಂದು ತಿಳಿಸಿದರು.

ಅರ್ಜುನನಿಗೆ ಸ್ಮಾರಕ

“ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವಿಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕವಾಗಬೇಕೆಂದು ಸೂಚಿಸಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X