ಮಕ್ಕಳಿಗೆ ಕಾನೂನಿನ ಅರಿವು ಮೂಡಿಸಲು ಪೊಲೀಸ್ ಅಧಿಕಾರಿಗಳಿಂದ ಪಾಠ : ಸಚಿವ ಪರಮೇಶ್ವರ್

Date:

  • ಡ್ರಗ್ಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಮಕ್ಕಳಿಗೆ ತಿಳಿವಳಿಕೆ ಮೂಡಿಸಲು ಈ ಪ್ರಯತ್ನ
  • ಪೊಲೀಸ್ ಅಧಿಕಾರಿಗಳಿಗೆ ಹೊಸ ಟಾಸ್ಕ್ ನೀಡಿದ ಡಾ.ಜಿ ಪರಮೇಶ್ವರ್

ಶಾಲಾ ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವ ಸಲುವಾಗಿ ಇನ್‌ಸ್ಪೆಕ್ಟರ್ ಮೇಲಿನ ಹಂತದ ಅಧಿಕಾರಿಗಳು ಇನ್ನು ಮುಂದೆ ಶಾಲೆಗಳಿಗೆ ತೆರಳಿ ನೀತಿ ನಿಯಮಗಳ ಪಾಠ ಮಾಡುವುದನ್ನು ಗೃಹ ಸಚಿವ ಪರಮೇಶ್ವರ್ ಕಡ್ಡಾಯಗೊಳಿಸಿದ್ದಾರೆ.

- Advertisement -

ತುಮಕೂರಿನಲ್ಲಿ ಸೋಮವಾರ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಭೆ ನಡೆಸಿದ ಅವರು ಹಿರಿಯ ಅಧಿಕಾರಿಗಳಿಗೆ ಹೊಸ ಜವಾಬ್ಧಾರಿ ಹಂಚಿಕೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಮಕ್ಕಳಿಗೆ ತಿಳಿವಳಿಕೆ ಮೂಡಿಸಲು ಈ ಪ್ರಯತ್ನ ಮಾಡುತ್ತಿದ್ದೇವೆ. ಇದರ ಭಾಗವಾಗಿ ತಿಂಗಳಿಗೊಮ್ಮೆ ಹಿರಿಯ ಪೊಲೀಸ್ ಅಧಿಕಾರಿಗಳು ಶಾಲೆಗೆ ತೆರಳಿ ಮಕ್ಕಳಿಗೆ ಕಾನೂನು ಶಿಕ್ಷಣ ನೀಡಬೇಕೆಂದು ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಮುಂದಾಗಿರುವ ಗೃಹ ಸಚಿವರು, ಅದರ ಪೈಲಟ್ ಪ್ರಾಜೆಕ್ಟ್ ಅನ್ನು ತುಮಕೂರು ಜಿಲ್ಲೆಯಿಂದ ಆರಂಭಿಸಲು ಯೋಜನೆ ರೂಪಿಸಿದ್ದಾರೆ. ಸೋಮವಾರ ತಡರಾತ್ರಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಪರಮೇಶ್ವರ್ ಸಭೆ ನಡೆಸಿ ಕೆಲ ಕಾರ್ಯಸೂಚಿಗಳನ್ನು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ 24 ಗಂಟೆಯೊಳಗೆ ನೀರು ಒದಗಿಸಿ: ಮುಖ್ಯಮಂತ್ರಿ

ರಾಜ್ಯಕ್ಕೆ ತಮ್ಮ ತವರು ಜಿಲ್ಲೆ ತುಮಕೂರು ಮಾದರಿಯಾಗಬೇಕು ಎನ್ನುವ ಕಾರಣದಿಂದಲೇ “ಡ್ರಗ್ಸ್ ಮುಕ್ತ ರಾಜ್ಯ”ದ ಅಭಿಯಾನವನ್ನು ಇಲ್ಲಿಂದಲೇ ಆರಂಭಿಸಲು ತಾವು ಮುಂದಾಗಿರುವುದಾಗಿ ಪರಮೇಶ್ವರ್ ಹೇಳಿಕೊಂಡಿದ್ದಾರೆ.

ಕರ್ನಾಟಕದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರು ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆ. ಹೀಗಾಗಿ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸುವುದರ ಜೊತೆಗೆ ಯುವ ಜನತೆಗೂ ಅಗತ್ಯ ಕಾನೂನು ತಿಳಿವಳಿಕೆ ಮೂಡಿಸಲಾಗುತ್ತದೆ ಎಂದು ಗೃಹ ಸಚಿವರು ತಿಳಿಸಿದರು.

ನಿನ್ನೆಯ ಸಭೆಯಲ್ಲಿ ಐಜಿಪಿ ರವಿಕಾಂತೇಗೌಡ, ಎಸ್ಪಿ ರಾಹುಲ್ ಕುಮಾರ್ ಸೇರಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪೊಲೀಸರ ಭೇಟಿಗೆ ಮುಂದಾದ ಸಿಜೆಪಿ ನಾಯಕರು: ಪ್ರತಿಭಟನೆಗೆ ಅನುಮತಿ ಕೋರಲು ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಕಾಂಗ್ರೆಸ್ ನಾಯಕರ ಭೇಟಿಗೆ ನಕಾರ; ನಾಲ್ಕು ಕಾರಣಗಳು ನೀಡಿದ ಸಿಜೆಐ ಸೂರ್ಯ ಕಾಂತ್

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...

ಪ್ರತಿಭಟನಾಕಾರರ ಬಂಧನ ಪ್ರಜಾಪ್ರಭುತ್ವದ ಹಕ್ಕುಗಳ ದಮನ: ದೆಹಲಿ ಪೊಲೀಸ್ ಕ್ರಮಕ್ಕೆ ವಿಶ್ವಸಂಸ್ಥೆ ಆಕ್ಷೇಪ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...