ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ

Date:

ಮಹಾಲಕ್ಷ್ಮೀ ಯೋಜನೆ ದೇಶದಲ್ಲಿರುವ ಬಡ ಮಹಿಳೆಯರ ಬ್ಯಾಂಕ್ ಖಾತೆಗೆ ಜುಲೈ 5ರಂದು 8,500 ರೂಪಾಯಿ ಜಮೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ರಾಹುಲ್ ಗಾಂಧಿ ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾದ ವಾರ್ಷಿಕವಾಗಿ ಬಡ ಮಹಿಳೆಯರಿಗೆ ಒಂದು ಲಕ್ಷ ರೂಪಾಯಿ ನೀಡುವ ಮಹಾಲಕ್ಷ್ಮೀ ಯೋಜನೆಯ ಪ್ರಕ್ರಿಯೆ ಯಾವ ರೀತಿ ನಡೆಯಲಿದೆ ಎಂದು ವಿವರಿಸಿದರು.

“ದೇಶದಲ್ಲಿರುವ ಬಡವರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ಪ್ರತಿ ಬಡ ಕುಟುಂಬದಿಂದ ಮಹಿಳೆಯ ಹೆಸರನ್ನು ಆಯ್ಕೆ ಮಾಡಲಾಗುವುದು. ಜುಲೈ 5ರಂದು ದೇಶದ ಕೋಟಿಗಟ್ಟಲೆ ಬಡ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 8,500 ರೂಪಾಯಿ ಮೊತ್ತವನ್ನು ಜಮೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಈ ದಿನ ಸಮೀಕ್ಷೆ | ಲಕ್ಷ ರೂಪಾಯಿಯ ‘ಮಹಾಲಕ್ಷ್ಮೀ’ ಗ್ಯಾರಂಟಿಯ ಮುಳುಗಿಸಲಾಗಿದೆ ಮುಸ್ಲಿಮ್ ದ್ವೇಷದಲ್ಲಿ!

“ಜುಲೈನಿಂದ ಆಗಸ್ಟ್‌ವರೆಗೆ, ಹೀಗೆ ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್, ಡಿಸೆಂಬರ್‌ನಲ್ಲಿ ‘ಟಖಾ ಟಖ್, ಟಖಾ ಟಖ್’ ಎಂದು ನಿಮ್ಮ ಖಾತೆಗೆ ಹಣ ಜಮೆಯಾಗುವುದು ಮುಂದುವರಿಯಲಿದೆ” ಎಂದು ಹೇಳಿದ್ದಾರೆ.

“ಈ ಯೋಜನೆಯ ಮೊತ್ತವನ್ನು ನಾವು ಜಮೆ ಮಾಡಿದಾಗ ಭಾರತದ ಮಾಧ್ಯಮಗಳು ‘ಇಂಡಿಯಾ ಒಕ್ಕೂಟ ಬಡವರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಿ ಅವರನ್ನು ಹಾಳು ಮಾಡುತ್ತಿದೆ’ ಎಂದು ಹೇಳಬಹುದು. ಮಾಧ್ಯಮಗಳು ಹೆಚ್ಚು ಮಾತನಾಡಿದರೆ ನಾವು ಈ ಮೊತ್ತವನ್ನು ಡಬಲ್ ಮಾಡುತ್ತೇವೆ ಎಂದು ಪ್ರತ್ಯುತ್ತರ ನೀಡುತ್ತೇವೆ” ಎಂದರು.

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. 65 ಮೀರಿದ ಹಿರಿಯ ನಾಗರಿಕರಿಗೆ ಈಗಾಗಲೇ ನೀಡುತ್ತಿರುವ ವೃದ್ಧಾಪ್ಯ ವೇತನವನ್ನು ಕನಿಷ್ಠ ರೂಪಾಯಿ 5000 ಕ್ಕೆ ಏರಿಸಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ನಿ ಸಾವಿನ ನಂತರ ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ

ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ...

ವಯನಾಡ್‌ನಲ್ಲಿ ಪ್ರಿಯಾಂಕಾ ಸ್ಪರ್ಧೆ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗೇಲಿ

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ...

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ...