ಕಾರ್ಯದರ್ಶಿ ಸಹಿಯೇ ಇಲ್ಲದ ಕಾಂತರಾಜ ವರದಿ ಸ್ವೀಕರಿಸಲು ಆಗುತ್ತಾ: ಕುಮಾರಸ್ವಾಮಿ ಪ್ರಶ್ನೆ

Date:

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸ್ವೀಕರಿಸುವುದಕ್ಕೆ ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ” ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

- Advertisement -

ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಆ ವರದಿಗೆ ಇವತ್ತಿನವರೆಗೂ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನು ನಾನು ಹೇಗೆ ಸ್ವೀಕರಿಸಲಿ. ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕಾಂತರಾಜ ನೇತೃತ್ವದಲ್ಲಿ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ವರದಿಯನ್ನು ಸ್ವೀಕರಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡಿರುವವರು ಯಾರು” ಎಂದರು ಕುಮಾರಸ್ವಾಮಿ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಸತ್‌ ದಾಳಿ ಆರೋಪಿಗಳಿಗೆ ಸುಳ್ಳು ಹೇಳಲು ಒತ್ತಡ; ವಿಪಕ್ಷಗಳನ್ನು ದೇಶದ್ರೋಹಿಗಳೆಂದು ಬಿಂಬಿಸುವ ವಿಫಲ ಯತ್ನ

“ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್ ವ್ಯವಹಾರ ಇದೆ ಎಂದು ನಾನು ಪ್ರಶ್ನೆ ಮಾಡಿದರೆ ಇವರಿಗೆ ಅಸಹನೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳುತ್ತಾರೆ. ನಿತ್ಯ ವರ್ಗಾವಣೆ ಮಾಡುತ್ತಿದ್ದಾರೆ. ಇದೀಗ, ಅವರದ್ದೇ ಪಕ್ಷದವರಾದ ಹಾಸನದ ಮಾಜಿ ಸಚಿವ ಬಿ. ಶಿವರಾಮ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿಗಿಂತಲೂ ಕಾಂಗ್ರೆಸ್‌ನಲ್ಲಿ ಕಮಿಷನ್ ಪರ್ಸೆಂಟ್ ಜಾಸ್ತಿಯಾಗಿದೆ ಎಂದು ತಲೆ ಚಚ್ಚಿಕೊಂಡಿದ್ದಾರೆ. ಹೀಗಿದ್ದರೂ, ಸಿದ್ದರಾಮಯ್ಯ ಅವರು ಮೋದಿ ಅವರನ್ನು ಟೀಕಿಸುತ್ತಾರೆ. ಮೊದಲು ಅವರ ಸ್ಥಿತಿ ನೋಡಿಕೊಳ್ಳಲಿ” ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...