ಒಂದು ದೇಶ-ಒಂದು ಚುನಾವಣೆ | ಮೋದಿ ಸರ್ಕಾರದ ದುಷ್ಟ ಉದ್ದೇಶ ಅನಾವರಣ: ಸಿಎಂ ಸಿದ್ದರಾಮಯ್ಯ ಕಿಡಿ

Date:

‘ಒಂದು ದೇಶ-ಒಂದು ಚುನಾವಣೆ’ಯ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

- Advertisement -

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ದೇಶ-ಒಂದು ಚುನಾವಣೆ’ಯ ಪ್ರಸ್ತಾವ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ಈ ಪ್ರಸ್ತಾವವನ್ನು ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

“ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ. ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘ಒಂದು ದೇಶ-ಒಂದು ಚುನಾವಣೆ’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ” ಎಂದು ಹರಿಹಾಯ್ದಿದ್ದಾರೆ.

“ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ “ಒಂದು ದೇಶ ಒಂದು ಚುನಾವಣೆ” ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘ಒಂದು ದೇಶ ಒಂದು ಚುನಾವಣೆ’ ವ್ಯವಸ್ಥೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

“ಒಂದು ದೇಶ-ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ” ಎಂದು ಹೇಳಿದ್ದಾರೆ.

“ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ. ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎ ಗೆ ಕೂಡಾ ಕಷ್ಟ ಸಾಧ್ಯ. ಇವೆಲ್ಲವೂ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ” ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...