ಗುಜರಾತ್‌ | ಅತಿಕ್ರಮಣ ವಿರೋಧಿ ಕಾರ್ಯಾಚರಣೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ: ಒಬ್ಬ ಸಾವು

Date:

Advertisements
  • ಗುಜರಾತ್‌ ಜುನಾಗಢದ ಮಸೀದಿ ತೆರವು ನೋಟಿಸ್ ನಂತರ ಘಟನೆ
  • ಅತಿಕ್ರಮಣ ಸಂಬಂಧ ನಡೆದ ಹಿಂಸಾಚಾರ ಘಟನೆಯಲ್ಲಿ 174 ಜನರ ಬಂಧನ

ಗುಜರಾತ್‌ ರಾಜ್ಯದ ಜುನಾಗಢದಲ್ಲಿ ಅತಿಕ್ರಮಣ ವಿರೋಧಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಜನರು ಮತ್ತು ಪೊಲೀಸರ ನಡುವೆ ಶನಿವಾರ (ಜೂನ್‌ 17) ಘರ್ಷಣೆ ನಡೆದಿದೆ. ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.

ಜುನಾಗಢದ ಮಜೆವಾಡಿ ಮಸೀದಿ ಬಳಿ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಅಶ್ರುವಾಯು ಸಿಡಿಸಿದರು. ಜನರನ್ನು ನಿಯಂತ್ರಿಸಲು ಲಾಠಿ ಚಾರ್ಜ್‌ ನಡೆಸಲಾಯಿತು.

ಜುನಾಗಢ ಮಹಾನಗರ ಪಾಲಿಕೆಯು ತೆರವು ಕಾರ್ಯಾಚರಣೆಗೆ ಸಂಬಂಧಿಸಿ ಸ್ಥಳೀಯ ಮಸೀದಿಗೆ ನೋಟಿಸ್‌ ನೀಡಿದ ನಂತರ ಶುಕ್ರವಾರ ರಾತ್ರಿ ಪ್ರತಿಭಟನೆ ಭುಗಿಲೆದ್ದಿತು.

Advertisements

ಮಸೀದಿ ಸ್ಥಾಪನೆಯಾಗಿರುವ ಬಗ್ಗೆ ಐದು ದಿನಗಳಲ್ಲಿ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್‌ನಲ್ಲಿ ಹೇಳಲಾಗಿತ್ತು. ಐದು ದಿನಗಳ ಅವಧಿ ಪೂರ್ಣಗೊಂಡರೂ ಮಸೀದಿಯಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆ ಗುಜರಾತ್ ಜುನಾಗಢದ ಪಾಲಿಕೆ ಈ ಕ್ರಮ ಕೈಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಜುನಾಗಢ ಮಹಾನಗರ ಪಾಲಿಕೆ ತಂಡವು ಶುಕ್ರವಾರ ಸಂಜೆ ಮಸೀದಿ ತೆರವಿಗೆ ನೋಟಿಸ್‌ ನೀಡಲು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಸುಮಾರು 500 ರಿಂದ 600 ಜನರು ವಿರೋಧ ವ್ಯಕ್ತಪಡಿಸಿದ್ದರು. ರಾತ್ರಿ 10.15ರ ಸುಮಾರಿಗೆ ಪರಿಸ್ಥಿತಿ ಉಲ್ಬಣಗೊಂಡಿತು ಎಂದು ಗುಜರಾತ್‌ ಜುನಾಗಢ ಪೊಲೀಸ್‌ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ಹೇಳಿದ್ದಾರೆ.

ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಹಲವಾರು ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಲಾಯಿತು ಎಂದು ವರದಿಯಾಗಿದೆ. ಗುಜರಾತ್‌ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದರು.

ಈ ಸುದ್ದಿ ಓದಿದ್ದೀರಾ? ‘ಯುರೋಪಿಯನ್ ಎಸ್ಸೇ ಪ್ರೈಜ್’ ಪ್ರಶಸ್ತಿಗೆ ಭಾಜನರಾದ ಅರುಂಧತಿ ರಾಯ್

“ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಒಟ್ಟು 174 ಮಂದಿಯನ್ನು ಬಂಧಿಸಲಾಗಿದೆ. ಕಲ್ಲು ತೂರಾಟದಿಂದ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಇದು ದೃಢಪಡಲಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ರವಿತೇಜ ಹೇಳಿದರು.

ಗುಜರಾತ್ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆ ಶಾಂತಿ ಕಾಪಾಡಲು ಸ್ಥಳದಲ್ಲಿ ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X