5 ರಾಜ್ಯಗಳ ಚುನಾವಣೆಯನ್ನು ಮುಂದೂಡುವುದೇ ‘ಒಂದು ರಾಷ್ಟ್ರ ಒಂದು ಚುನಾವಣೆ’ ಗುರಿ: ಪ್ರಶಾಂತ್ ಭೂಷಣ್

Date:

ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಮುಂದೂಡಲು ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ ಒಂದು ಚುನಾವಣೆ’ಗಾಗಿ ಪ್ರಚಾರ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ಖ್ಯಾತ ವಕೀಲ ಮತ್ತು ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಭಾರತದಂತಹ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ನಮ್ಮ ವ್ಯವಸ್ಥೆಯಲ್ಲಿ ಮಧ್ಯಂತರದಲ್ಲಿ ಸರ್ಕಾರವು ಬಹುಮತವನ್ನು ಕಳೆದುಕೊಳ್ಳಬಹುದು ಮತ್ತು ಹೊಸ ಸರ್ಕಾರ ರಚನೆಯಾಗಬಹುದು” ಎಂದು ತಿಳಿಸಿದರು.

“ಆದರೆ, ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಯಾದರೆ, ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುವುದು. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಅಂದರೆ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ರಾಷ್ಟ್ರಪತಿ ಆಳ್ವಿಕೆಗೆ ಬದಲಾಗುತ್ತಿದ್ದೇವೆ. ಹಾಗಾಗಿ ಇದು ಸಂಸದೀಯ ಪ್ರಜಾಪ್ರಭುತ್ವದ ಸಂಪೂರ್ಣ ಉಲ್ಲಂಘನೆಯಾಗುತ್ತದೆ. ನನ್ನ ದೃಷ್ಟಿಯಲ್ಲಿ, ರಾಷ್ಟ್ರಪತಿ ಆಳ್ವಿಕೆ ವ್ಯವಸ್ಥೆಗೆ ಸಂವಿಧಾನದಲ್ಲಿ ಹಲವಾರು ತಿದ್ದುಪಡಿಗಳ ಅಗತ್ಯವಿದೆ ಎಂದು ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿದಿದೆ” ಎಂದು ಭೂಷಣ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದಾರಾ? ತಕ್ಕ ಬೆಲೆ ತೆರುತ್ತಾರೆ: ‘ಇಂಡಿಯಾ’ ಹಾಗೂ ‘ಭಾರತ’ ವಿವಾದದ ಬಗ್ಗೆ ರಾಹುಲ್‌ ಕಿಡಿ

“ಈಗಿನ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತವಿಲ್ಲ. ಈ ಎಲ್ಲ ಸಂಗತಿಗಳು ಸರ್ಕಾರಕ್ಕೆ ತಿಳಿದಿದೆ. ಆದರೂ, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆಗಳನ್ನು ಮುಂದೂಡುವ ಒಂದೇ ಒಂದು ಉದ್ದೇಶದಿಂದ ಅವರು ‘ಒಂದು ರಾಷ್ಟ್ರ ಒಂದು ಚುನಾವಣೆ’ ಯನ್ನು ಹುಟ್ಟು ಹಾಕಿದ್ದಾರೆ.

“ಈ ಐದು ರಾಜ್ಯಗಳ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವು ಸೋಲಿನ ಭೀತಿಯಲ್ಲಿದೆ. ಆದ್ದರಿಂದ, ಅವರು ಒಂದು ರಾಷ್ಟ್ರ ಒಂದು ಚುನಾವಣೆ ಹೆಸರಿನಲ್ಲಿ 2024ರ ಸಾರ್ವತ್ರಿಕ ಚುನಾವಣೆಯವರೆಗೆ ವಿಧಾನಸಭಾ ಚುನಾವಣೆಯನ್ನು ಮುಂದೂಡಲು ಹೊರಟಿದೆ. ಅಲ್ಲಿಯವರೆಗೂ ಈ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುವುದು” ಎಂದು ಅವರು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು...